ಅಂಚೆ ವಿಮೆ ಉತ್ಪನ್ನಗಳ ಮಾರಾಟ: ಪ್ರತಿನಿಧಿಗಳ ನಿಯುಕ್ತಿಗೆ ನೇರ ಸಂದರ್ಶನ
: ಅಂಚೆ ಅಧೀಕ್ಷಕರು ಗದಗ ವಿಭಾಗ, ಗದಗ ಇವರು ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿಗಳ ನಿಯುಕ್ತಿಗಾಗಿ ಪ್ರಸ್ತಾಪಿಸಿದ್ದು, ಫೆಬ್ರವರಿ 20ರಂದು ನೇರ ಸಂದರ್ಶನ ಹಮ್ಮಿಕೊಳ್ಳಲಾಗಿದೆ.
ಆಯ್ಕೆಯಾದ ಅಭ್ಯರ್ಥಿಗಳು ರೂ. 5000 ಗಳನ್ನು ರಾಷ್ಟಿçÃಯ ಉಳಿತಾಯ ಪತ್ರ ಅಥವಾ ಕಿಸಾನ್ ವಿಕಾಸ ಪತ್ರ ರೂಪದಲ್ಲಿ ಭದ್ರತಾ ಠೇವಣಿಯನ್ನು ಇಡಬೇಕಾಗುತ್ತದೆ. ಅಯ್ಕೆಯಾದ ನೇರ ಪ್ರತಿನಿಧಿಗಳಿಗೆ ಅವರು ಮಾಡಿದ ವ್ಯವಹಾರಕ್ಕೆ ತಕ್ಕಂತೆ ಸೂಕ್ತ ಕಮಿಷನ್ ನೀಡಲಾಗುವುದು ಹಾಗೂ ಯಾವುದೇ ನಿಗದಿತ ವೇತನ ಇರುವುದಿಲ್ಲ. ಅಭ್ಯರ್ಥಿಗಳು ಬೇರೆ ಯಾವುದೇ ವಿಮಾ ಕಂಪನಿ/ ಸಂಸ್ಥೆ ಸಂಘಗಳ ಏಜೆಂಟ್ ಆಗಿರಬಾರದು.
ಅರ್ಹ ಅಭ್ಯರ್ಥಿಗಳು ತಮ್ಮ ಇತ್ತೀಚಿನ ಭಾವಚಿತ್ರದೊಂದಿಗೆ, ಶೈಕ್ಷಣಿಕ ಪ್ರಮಾಣಪತ್ರದ ನಕಲುಗಳೊಂದಿಗೆ ಫೆ. 20ರಂದು ಬೆಳಿಗ್ಗೆ 10 ಗಂಟೆಗೆ ಗದಗ ಎಪಿಎಂಸಿ ಯಾರ್ಡ್, ಚೇಂಬರ್ ಆಫ್ ಕಾಮರ್ಸ್ ಎದುರುಗಡೆ ಇರುವ ಅಂಚೆ ಅಧೀಕ್ಷಕರ ಕಾರ್ಯಾಲಯದಲ್ಲಿ ನಡೆಯಲಿರುವ ನೇರ ಸಂದರ್ಶನಕ್ಕೆ ಹಾಜರಾಗಬೇಕು.
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಅಂಚೆ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಗದಗ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.