ಸಂವಿಧಾನದ ಜಾಗೃತಿಯ ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಿ: ಸಿಇಓ

Get real time updates directly on you device, subscribe now.

: ಸಂವಿಧಾನದ ಜಾಗೃತಿಗಾಗಿ ರಸಪ್ರಶ್ನೆ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದ್ದು, ಎಲ್ಲರಿಗೂ ಭಾಗವಹಿಸಲು ಆನ್‌ಲೈನ್ ಮೂಲಕ ಅವಕಾಶವಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ಹೇಳಿದರು.
ಸಂವಿಧಾನದ ಜಾಗೃತಿ ಜಾಥಾ ಕಾರ್ಯಕ್ರಮ ಕುರಿತು ಕೊಪ್ಪಳ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ಸಭಾಂಗಣದಲ್ಲಿ ಬುಧವಾರದಂದು ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ರಾಜ್ಯಾದ್ಯಂತ ಜನವರಿ 26ರಿಂದ ಪ್ರಾರಂಭಗೊAಡ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವು ಕೊಪ್ಪಳ ಜಿಲ್ಲೆಯಲ್ಲಿಯೂ ಈಗಾಗಲೇ ಆರಂಭಗೊAಡಿದ್ದು, ಇಲ್ಲಿಯರೆಗೆ ಕೊಪ್ಪಳ ಜಿಲ್ಲೆಯ 64 ಗ್ರಾಮ ಪಂಚಾಯತ್‌ಗಳಲ್ಲಿ ಸಂವಿಧಾನ ಜಾಗೃತಿ ಜಾಥಾ ಮೆರವಣಿಗೆ ಸಂಚರಿಸಿದೆ. ಸಂವಿಧಾನ ಜಾಗೃತಿ ಜಾಥಕ್ಕೆ ಎಲ್ಲಾ ಗ್ರಾ.ಪಂ.ಗಳಲ್ಲಿ ಅದ್ದೂರಿಯ ಸ್ವಾಗತದ ಮೂಲಕ ಸಂವಿಧಾನ ಪೀಠಿಕೆ ಓದುವುದು, ಸೈಕಲ್ ಜಾಥಾ, ಬೈಕ್ ರ‍್ಯಾಲಿ ಹಾಗೂ ಇತರ ಕಾರ್ಯಕ್ರಮಗಳ ಮೂಲಕ ಸಂವಿಧಾನದ ಬಗ್ಗೆ ಅರಿವನ್ನು ಜನಸಾಮಾನ್ಯರಿಗೆ ತಲುಪಿಸಲಾಗುತ್ತಿದೆ ಎಂದರು.
ನಮ್ಮ ರಾಷ್ಟçದ ಸಂವಿಧಾನ, ಪೀಠಿಕೆ, ಅದರ ಮೌಲ್ಯಗಳು ಹಾಗೂ ಮುಖ್ಯವಾಗಿ ಸಂವಿಧಾನದ ಮಹತ್ವದ ಬಗ್ಗೆ ಎಲ್ಲರಿಗೂ ಜಾಗೃತಿ ಮೂಡಿಸುವುದು ಈ ಕಾರ್ಯಕ್ರಮ ಮುಖ್ಯ ಉದ್ದೇಶವಾಗಿದೆ. ಈ ಕುರಿತು ಹೆಚ್ಚಿನ ಅರಿವು ಮೂಡಿಸಲು ಹೊಸ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಸಂವಿಧಾನದ ಬಗ್ಗೆ ಇರುವ ಜ್ಞಾನ ಮತ್ತು ಆಸಕ್ತಿಯನ್ನು ಅರಿತುಕೊಳ್ಳಲು ಹಾಗೂ ಹೆಚ್ಚಿಸಲು ಗೂಗಲ್ ಫಾರ್ಮ್ನಲ್ಲಿ ಕ್ವಿಜ್ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ. ಈ ಸ್ಪರ್ಧೆಯಲ್ಲಿ ಸಂವಿಧಾನದ ಕುರಿತಾದ ಬಹು ಆಯ್ಕೆಯ 15 ಪ್ರಶ್ನೆಗಳನ್ನು ನೀಡಲಾಗುವುದು. ಎಲ್ಲಾ ಸಾರ್ವಜನಿಕರು ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕೊಪ್ಪಳ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ರಾಜು ಸೇರಿದಂತೆ ಮತ್ತಿತರರಿದ್ದರು.

Get real time updates directly on you device, subscribe now.

Comments are closed.

error: Content is protected !!
%d bloggers like this: