ಜನತಾ ದರ್ಶನ: ಸಾರ್ವಜನಿಕರ ಅಹವಾಲು ಆಲಿಸಿದ ಜಿಲ್ಲಾಧಿಕಾರಿ ನಲಿನ್ ಅತುಲ್
ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಇವರ ಸಹಯೋಗದಲ್ಲಿ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಫೆ.9ರಂದು ಯಲಬುರ್ಗಾ ತಾಲೂಕಿನ ಪ್ರಸಿದ್ಧ ಧಾರ್ಮಿಕ ತಾಣ ಚಿಕ್ಕವಂಕಲಕುAಟ ಗ್ರಾಮದಲ್ಲಿ ಜನತಾ ದರ್ಶನ ಕಾರ್ಯಕ್ರಮ ನಡೆಸಿದರು.
ಜನತಾ ದರ್ಶನ ಕಾರ್ಯಕ್ರಮ ಹಿನ್ನೆಲೆಯಲ್ಲಿ ಇಲಾಖಾವಾರು ಅರ್ಜಿ ಸಲ್ಲಿಸಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿತ್ತು. ಆನ್‌ಲೈನ್ ಮೂಲಕವು ಸಹ ಅರ್ಜಿ ಸಲ್ಲಿಕೆಗೆ ಅಗತ್ಯ ಏರ್ಪಾಡು ಮಾಡಲಾಗಿತ್ತು. ಹೆಸರು ನೋಂದಾಯಿಸಿದ ಬಳಿಕ ಸಾರ್ವಜನಿಕರು ತಮ್ಮ ಅಹವಾಲಿನೊಂದಿಗೆ ಒಬ್ಬೊಬ್ಬರಾಗಿ ಜಿಲ್ಲಾಧಿಕಾರಿಗಳಿಗೆ ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಭೇಟಿ ಮಾಡಿ ಮನವಿ ಸಲ್ಲಿಸಿದರು.
ಜಮೀನಿಗೆ ಟಿಸಿ ಹಾಕಿಸಿಕೊಡಲು, ಮನೆ ಕಟ್ಟಿಸಲು ನಿವೇಶನ ಕೊಡಲು, ಪಹಣಿ ತಿದ್ದುಪಡಿ ಮಾಡಿಕೊಡಲು ಕೋರಿದ ಅನೇಕ ರೀತಿಯ ವೈಯಕ್ತಿಕ ಅರ್ಜಿಗಳು ಹಾಗೂ ಗ್ರಾಮಕ್ಕೆ ಕೆರೆ ನಿರ್ಮಿಸಿಕೊಡಲು, ಗ್ರಾಮದ ರಸ್ತೆ ಸರಿಪಡಿಸಿಕೊಡಬೇಕು ಎನ್ನುವುದು ಸೇರಿದಂತೆ ನಾನಾ ಬೇಡಿಕೆಯ ಸಾರ್ವಜನಿಕ ಅರ್ಜಿಗಳು ಈ ವೇಳೆ ಸಲ್ಲಿಕೆಯಾದವು.
ಈ ವೇಳೆ ಜಿಲ್ಲಾಧಿಕಾರಿಗಳು ಮಾತನಾಡಿ, ಆಡಳಿತವು ಜನರ ಮನೆಬಾಗಿಲಿಗೆ ಹೋಗಬೇಕು ಎಂಬುದು ಸರ್ಕಾರದ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಕಡೆಗಳಲ್ಲಿ ಜನತಾ ದರ್ಶನ ಕಾರ್ಯಕ್ರಮ ನಡೆಸಲಾಗುತ್ತದೆ. ಇಲ್ಲಿ ಸ್ವೀಕೃತವಾದ ಅರ್ಜಿಗಳಿಗೆ ಆದ್ಯತೆಯ ಮೇರೆಗೆ ಕ್ರಮ ವಹಿಸಿ ಹಂತಹAತವಾಗಿ ಪರಿಹಾರ ಕಲ್ಪಿಸಲಾಗುವುದು ಎಂದು ತಿಳಿಸಿದರು.
ಸಾರ್ವಜನಿಕರಿಂದ ಸ್ವೀಕೃತವಾದ ಎಲ್ಲಾ ಅರ್ಜಿಗಳು ಹಾಗೂ ಮನವಿಗಳನ್ನು ಈಗಾಗಲೇ ಚಾಲ್ತಿಯಲ್ಲಿರುವ ಸಾರ್ವಜನಿಕ ಕುಂದುಕೊರತೆ ನಿವಾರಣಾ ವ್ಯವಸ್ಥೆ ಐಪಿಜಿಆರ್‌ಎಸ್ ತಂತ್ರಾAಶದಲ್ಲಿ ದಾಖಲಿಸುವುದು ಮತ್ತು ಅರ್ಜಿಗಳ ವಿಲೇವಾರಿಯನ್ನು ನಿರ್ವಹಿಸುವ ಪ್ರಕ್ರಿಯೆಯು ಜಿಲ್ಲಾಡಳಿತದಿಂದ ಅಚ್ಚುಕಟ್ಟಾಗಿ ನಡೆಯುತ್ತಿದೆ. ಸ್ವೀಕೃತವಾದ ಅರ್ಜಿಗಳನ್ನು ಜಾಗೃತೆಯಿಂದ ಹಾಗೂ ಸಹಾನುಭೂತಿಯಿಂದ ಪರಿಶೀಲಿಸಿ ನಿಗದಿತ ಕಾಲಾವಧಿಯೊಳಗೆ ನಿಯಮಾನುಸಾರ ಪರಿಹಾರೋಪಾಯ ಒದಗಿಸಲಾಗುವುದು ಎಂದು ತಿಳಿಸಿದರು. ಐಪಿಜಿಆರ್‌ಎಸ್ ಮತ್ತು ಸಕಾಲ ಅರ್ಜಿಗಳ ವಿಲೇವಾರಿಯ ರ‍್ಯಾಂಕಿAಗ್‌ನಲ್ಲಿ ಕೊಪ್ಪಳ ಜಿಲ್ಲಾಡಳಿತವು ಉತ್ತಮ ಸ್ಥಾನ ಕಾಯ್ದುಕೊಂಡಿದೆ ಎಂದು ತಿಳಿಸಿದರು.
ಜಿಲ್ಲಾದ್ಯಂತ ಈಗಾಗಲೇ ಸಂವಿಧಾನ ಜಾಗೃತಿ ಜಾಥಾ ಅಚ್ಚುಕಟ್ಟಾಗಿ ನಡೆಯುತ್ತಿದೆ. ಸಾರ್ವಜನಿಕರು ಸಂವಿಧಾನ ಜಾಗೃತಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸಂವಿಧಾನದ ಬಗ್ಗೆ ತಿಳಿದುಕೊಳ್ಳಬೇಕು ಎಂದು ಮನವಿ ಮಾಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ರತ್ನಂ ಪಾಂಡೆಯ ಅವರು ಮಾತನಾಡಿ, ಗ್ರಾಮಸ್ಥರಿಗೆ ಅತೀ ಹತ್ತಿರದಲ್ಲಿರುವ ಗ್ರಾಮಮಟ್ಟದ ಹಾಗೂ ತಾಲೂಕುಮಟ್ಟದ ಅಧಿಕಾರಿಗಳು ಗ್ರಾಮಸ್ಥರ ನೋವು ನಲಿವಿಗೆ ಸ್ಪಂದನೆ ನೀಡಬೇಕು ಎಂದು ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸಲಹೆ ಮಾಡಿದರು. ಹಿಂದಿನ ಜನತಾ ದರ್ಶನದಲ್ಲಿ ಸ್ವೀಕೃತವಾದ ಅರ್ಜಿಗಳಿಗೆ ಪರಿಹಾರ ಒದಗಿಸಲಾಗಿದೆ ಎಂದು ತಿಳಿಸಿದರು.
ಆದೇಶ ಪತ್ರ ವಿತರಣೆ: ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳಡಿ ಅರ್ಹ ಫಲಾನುಭವಿಗಳಿಗೆ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಮತ್ತು ಜಿಪಂ ಸಿಇಓ ರಾಹುಲ್ ಪಾಂಡೆಯ ಅವರು ಇದೆ ವೇಳೆ ಆದೇಶ ಪತ್ರ ವಿತರಿಸಿದರು. ಅರ್ಜಿ ಸಲ್ಲಿಸಿದ ಬಳಿಕ ಸ್ಥಳದಲ್ಲಿಯೇ ಸಂದ್ಯಾ ಸುರಕ್ಷಾ ಮಾಸಾಶನ ಸೇರಿದಂತೆ ಇನ್ನೀತರ ಯೋಜನೆಗಳ ಆದೇಶ ಪತ್ರ ಪಡೆದ ರೇಣುಕ, ರಾಧಾಬಾಯಿ ಸೇರಿದಂತೆ ಇನ್ನೀತರ ಫಲಾನುಭವಿಗಳು ಸಂತಸ ವ್ಯಕ್ತಪಡಿಸಿದರು.
ಸಹಾಯಕ ಆಯುಕ್ತರಾದ ಕ್ಯಾಪ್ಟನ್ ಮಹೇಶ ಮಾಲಗಿತ್ತಿ ಅವರು ಪ್ರಾಸ್ತಾವಿಕ ಮಾತನಾಡಿ, ಜನತಾ ದರ್ಶನದಲ್ಲಿ ಅರ್ಜಿ ಸಲ್ಲಿಸಲು ಆಗಮಿಸಿರುವ ಸಾರ್ವಜನಿಕರ ಅರ್ಜಿಗಳನ್ನು ಭೌತಿಕವಾಗಿ ಪಡೆದುಕೊಳ್ಳವುದರ ಜೊತೆಗೆ ಆನ್‌ಲೈನ್ ಮೂಲಕವು ಸಹ ಸ್ವೀಕರಿಸಲಾಗುತ್ತದೆ. ಸ್ವೀಕೃತವಾದ ಎಲ್ಲ ಅರ್ಜಿಗಳನ್ನು ಜಿಲ್ಲಾಧಿಕಾರಿಗಳೇ ಖುದ್ದು ಪರಿಶೀಲಿಸುತ್ತಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಯಶೋಧಾ ವಂಟಗೋಡಿ, ಪ್ರಾದೇಶಿಕ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಚಂದ್ರಣ್ಣ, ತಹಸೀಲ್ದಾರ ನಾಗಪ್ಪ, ತಾಪಂ ಇಓ ಸಂತೋಷ ಪಾಟೀಲ, ಚಿಕ್ಕವಂಕಲಕುAಟ ಗಾಮ ಪಂಚಾಯತ್ ಅಧ್ಯಕ್ಷೆ ಹುಲಿಗೆಮ್ಮ ಬಸವರಾಜ ತಳವಾರ, ಉಪಾಧ್ಯಕ್ಷ ಮಂಜುನಾಥ ಶಾಸ್ತಿçಹಿರೇಮಠ, ವಿವಿಧ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
Comments are closed.