ಅರ್ಹ ಫಲಾನುಭವಿಗಳು ಹೆಸರು ನೋಂದಾಯಿಸಲು ಜಿಲ್ಲಾಧಿಕಾರಿಗಳ ಮನವಿ

Get real time updates directly on you device, subscribe now.

ಅರ್ಹರಿದ್ದು ಅರ್ಜಿ ಸಲ್ಲಿಸದೇ ಬಾಕಿ ಉಳಿದ ಫಲಾನುಭವಿಗಳು ಕೂಡಲೇ ಹೆಸರು ನೋಂದಾಯಿಸಿಕೊAಡು ವಿವಿಧ ಗ್ಯಾರಂಟಿ ಯೋಜನೆಗಳ ಸದುಪಯೋಗ ಪಡೆಯಬೇಕು ಎನ್ನುವ ಸರ್ಕಾರದ ಮನವಿಗೆ ಸಾರ್ವಜನಿಕರು ಸ್ಪಂದನೆ ನೀಡಬೇಕು ಎಂದು ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಹೇಳಿದರು.
ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಇವರ ಸಹಯೋಗದಲ್ಲಿ ಯಲಬುರ್ಗಾ ತಾಲೂಕಿನ ಚಿಕ್ಕವಂಕಲಕುAಟ ಗ್ರಾಮದಲ್ಲಿ ಫೆ.9ರಂದು ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ರಾಜ್ಯ ಸರ್ಕಾರದ ವಿವಿಧ ಗ್ಯಾರಂಟಿ ಯೋಜನೆಗಳ ಜಾರಿಯಿಂದಾಗಿ ಪ್ರತಿ ಕುಟುಂಬಕ್ಕೆ ಪ್ರತಿ ಮಾಹೆ ಆರ್ಥಿಕ ನೆರವು ಸಿಗುತ್ತಿದೆ. ಹೀಗಾಗಿ ಅರ್ಹರು ಹೆಸರು ನೋಂದಾಯಿಸಿಕೊAಡು ಗ್ಯಾರಂಟಿ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಬರ ಹಿನ್ನೆಲೆಯಲ್ಲಿ ರೈತರಿಗೆ ಮಧ್ಯೆಂತರ ಪರಿಹಾರವಾಗಿ ಪ್ರತಿ ರೈತರಿಗೆ 2000 ರೂ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಇದುವರೆಗೆ 1,00,900 ರೈತರಿಗೆ 20 ಕೋಟಿ ರೂ ಪರಿಹಾರ ಧನ ಜಮೆ ಮಾಡಲಾಗಿದೆ. ಇನ್ನುಳಿದ ರೈತರಿಗೆ ಸಹ ಹಂತಹAತವಾಗಿ ಜಮೆ ಮಾಡಲಾಗುತ್ತಿದೆ. ಅನ್ನಭಾಗ್ಯ ಯೋಜನೆಯಡಿ ಇದುವರೆಗೆ 2023ರ ಜುಲೈದಿಂದ 2023ರ ಡಿಸೆಂಬರವರೆಗೆ 2,89,068 ಕಾರ್ಡುದಾರರಿಗೆ 101,88,61,510 ರೂ ಅನುದಾನ ವಿತರಿಸಲಾಗಿದೆ. ಗೃಹ ಲಕ್ಷ್ಮಿ ಯೋಜನೆಯಡಿ ಜಿಲ್ಲೆಯಲ್ಲಿ ಇದುವರೆಗೆ 3,13,124 ಫಲಾನುಭವಿಗಳಿಗೆ 285 ಕೋಟಿ ರೂ ನೀಡಲಾಗಿದೆ. ಗೃಹ ಜ್ಯೋತಿ ಯೋಜನೆಯಡಿ ಜಿಲ್ಲೆಯಲ್ಲಿ ಇದುವರೆಗೆ 2,65,000 ಫಲಾನುಭವಿಗಳು ಹೆಸರು ನೋಂದಾಯಿಸಿಕೊAಡು ಸದುಪಯೋಗಪಡೆದುಕೊಂಡಿದ್ದಾರೆ.
ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಸೌಕರ್ಯ ಸಿಗುತ್ತಿದೆ. ಕೊಪ್ಪಳ ಜಿಲ್ಲೆಯಲ್ಲಿ ತಿಂಗಳಿಗೆ 35 ಲಕ್ಷ ಟ್ರಿಪ್ ಆಗುತ್ತಿದೆ. ಶಕ್ತಿ ಯೋಜನೆ ಜಾರಿಯಾದಾಗಿನಿಂದ ಪ್ರತಿ ಮಹಿಳೆಗೆ ಪ್ರತಿ ಮಾಹೆ 2 ಸಾವಿರ ರೂ. ಉಳಿತಾಯವಾಗುತ್ತಿದೆ ಎಂದು ಅವರು ತಿಳಿಸಿದರು.

Get real time updates directly on you device, subscribe now.

Comments are closed.

error: Content is protected !!