ಬಾಲ್ಯ ವಿವಾಹದಿಂದ ಬಾಲಕಿ ರಕ್ಷಣೆ: ಮಕ್ಕಳ ಕಲ್ಯಾಣ ಸಮಿತಿಗೆ ಹಾಜರು
: ಕೊಪ್ಪಳ ಜಿ ಲ್ಲಾ ಮಕ್ಕಳ ರಕ್ಷಣಾ ಘಟಕವು ಯಲಬುರ್ಗಾ ತಾಲ್ಲೂಕಿನ ಲಿಂಗನಬAಡಿ ಗ್ರಾಮದ ಅಪ್ರಾಪ್ತೆ ಬಾಲಕಿಯನ್ನು ಬಾಲ್ಯ ವಿವಾಹದಿಂದ ರಕ್ಷಿಸಿ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸಿದೆ.
ಫೆ.9ರಂದು ಯಲಬುರ್ಗಾ ತಾಲ್ಲೂಕಿನ ಲಿಂಗನಬಂಡಿ ಗ್ರಾಮದ ಬಾಲಕಿಯೊಬ್ಬಳಿಗೆ ಬಾಲ್ಯ ವಿವಾಹ ಮಾಡುತ್ತಾರೆ ಎಂಬ ಮಾಹಿತಿಯು ಮಕ್ಕಳ ಸಹಾಯವಾಣಿ-1098/112 ಗೆ ಲಭ್ಯವಾದ ಹಿನ್ನಲೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಹಾಂತಸ್ವಾಮಿ ಪೂಜಾರ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳು, ಶಿಶು ಅಭಿವದ್ಧಿ ಯೋಜನಾ ಮೇಲ್ವಿಚಾರಕಿ, ಮಕ್ಕಳ ಸಹಾಯವಾಣಿ (1098/112)ಯ ಸಿಬ್ಬಂದಿಗಳು, ಆರೋಗ್ಯ ಇಲಾಖೆ ಸಿಬ್ಬಂದಿಗಳು ಬಾಲಕಿಯ ಮನೆಗೆ ಭೇಟಿ ನೀಡಿ ವಿಚಾರಿಸಿದಾಗ, ಬಾಲಕಿಯ ವಿವಾಹವನ್ನು ನಿಶ್ಚಯ ಮಾಡಿರುವುದಾಗಿ ತಿಳಿದ ಬಂದಿದೆ. ಈ ಬಾಲಕಿಯ ವಯಸ್ಸಿನ ದೃಢೀಕರಣ ಪರಿಶೀಲಿಸಿದಾಗ 18 ವರ್ಷ ಪೂರ್ಣಗೊಳ್ಳದ ಕಾರಣ ಬಾಲಕಿಯನ್ನು ರಕ್ಷಿಸಿ, ಮುಂದಿನ ಪೋಷಣೆ ಮತ್ತು ರಕ್ಷಣೆಗಾಗಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸಲಾಗಿದೆ ಎಂದು ಕೊಪ್ಪಳ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಪ್ರಕಟಣೆ ತಿಳಿಸಿದ್ದಾರೆ.
Comments are closed.