ಸಂವಿಧಾನ ಪ್ರಸ್ತಾವನೆ ಬೋಧಿಸಿದ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್

Get real time updates directly on you device, subscribe now.

ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್‌ನಿAದ ಚಿಕ್ಕವಂಕಲಕುAಟ ಗ್ರಾಮದಲ್ಲಿ ಫೆ.9ರಂದು ಜನತಾ ದರ್ಶನ ಕಾರ್ಯಕ್ರಮ ನಡೆಸಿದ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಕಾರ್ಯಕ್ರಮದ ಮಧ್ಯೆದಲ್ಲಿ ಸಂವಿಧಾನ ಜಾಗೃತಿ ಜಾಥಾದಲ್ಲಿ ಸಹ ಭಾಗಿಯಾದರು.
ಹಿರೇವಂಕಲಕುAಟ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಎದುರುಗಡೆ ಸಂವಿಧಾನ ಜಾಗೃತಿ ಜಾಥಾ ಚಾಲನಾ ಕಾರ್ಯಕ್ರಮದಲ್ಲಿ ಭಾಗಿಯಾದ ಜಿಲ್ಲಾಧಿಕಾರಿಗಳು, ಸಂವಿಧಾನದ ಪ್ರಸ್ತಾವನೆಯನ್ನು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಬೋಧಿಸುವ ಮೂಲಕ ಜಾಥಾಕ್ಕೆ ಚಾಲನೆ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರೊಂದಿಗೆ ಜಿಲ್ಲಾಧಿಕಾರಿಗಳು, ಡಾ.ಬಿ.ಆರ್.ಅಂಬೇಡ್ಕರ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರೊಂದಿಗೆ ಹೆಜ್ಜೆ ಹಾಕಿ ಸಂವಿಧಾನ ಜಾಗೃತಿ ಜಾಥಾಕ್ಕೆ ಹೊಸ ಹುಮ್ಮಸ್ಸು ನೀಡಿದರು. ಜಾಥಾದಲ್ಲಿ ಪಾಲ್ಗೊಂಡ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಸಿಇಓ ಅವರಿಗೆ ಹಿರೇವಂಕಲಕುAಟ ಗ್ರಾಮಸ್ಥರು ಆತ್ಮೀಯ ಸ್ವಾಗತ ಕೋರಿದರು.
ಜಾಥಾದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ರಾಜು ತಳವಾರ, ಜಿಲ್ಲಾ ವಾತಾಧಿಕಾರಿ ಗವಿಸಿದ್ದಪ್ಪ ಹೊಸಮನಿ ಸೇರಿದಂತೆ ಇನ್ನೀತರ ಇಲಾಖೆಯಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗಿಯಾಗಿದ್ದರು.
ಮೆರವಣಿಗೆಯಲ್ಲಿ ಗ್ರಾಮದ ವಿವಿಧ ಸಂಘಟನೆಗಳು ಪ್ರಮುಖರು ಹುಮ್ಮಸ್ಸಿನಿಂದ ಭಾಗಿಯಾಗಿದ್ದರು. ಡಾ.ಅಂಬೇಡ್ಕರ್ ಅವರ ಭಾವಚಿತ್ರ ಇರುವ ಸ್ತಬ್ಧಚಿತ್ರದ ಮುಂದೆ ನಿಂತು ಮುಖಂಡರು, ಮಹಿಳೆಯರು, ವಿದ್ಯಾರ್ಥಿಗಳು ಭಾವಚಿತ್ರ ತೆಗೆಯಿಸಿಕೊಂಡು ಸಂತಷ ವ್ಯಕ್ತಪಡಿಸಿದರು.
ಗ್ರಾಮದ ಸರ್ಕಾರಿ ಪಿಯು ಕಾಲೇಜಿನಿಂದ ಆರಂಭವಾದ ಜಾಥಾದಲ್ಲಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಹಾಗೂ ಎಂಡಿಆರ್‌ಎಸ್ ಶಾಲೆಯ ಸ್ಕೌಟ್ಸ್ ತಂಡದ ವಿದ್ಯಾರ್ಥಿಗಳು ಶಿಸ್ತಿನಿಂದ ಭಾಗಿಯಾದರು. ಶಾಲೆಯ ಮುಖ್ಯಾಧ್ಯಾಪಕರಾದ ಬಾಬುಸಾಬ ಲಯನದಾರ, ದೈಹಿಕ ಶಿಕ್ಷಣ ಶಿಕ್ಷಕ ಭೀಮಣ್ಣ ಚಂದ್ರಗಿ ಸೇರಿದಂತೆ ಶಾಲೆಯ ಶಿಕ್ಷಕ ವೃಂದದವರು ಜಾಥಾದಲ್ಲಿ ಭಾಗಿಯಾಗಿದ್ದರು.
ಹಿರೇವಂಕಲಕುAಟ ಗ್ರಾಮದ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಂಜುಳಾ ಬಸವರಾಜ ತಳವಾರ ಅವರ ನೇತೃತ್ವದಲ್ಲಿ ಗ್ರಾಮದ ಮಹಿಳೆಯರು ಪೂರ್ಣಕುಂಭ ಮತ್ತು ಆರತಿಯೊಂದಿಗೆ ಜಾಥಾದಲ್ಲಿ ಭಾಗಿಯಾಗಿದ್ದು ವಿಶೇಷವಾಗಿತ್ತು.
ಫೆ.9ರಂದು ಸಂವಿಧಾನ ಜಾಗೃತಿ ಜಾಥಾವು ತಾಳಕೇರಿ ಗ್ರಾಮದಿಂದ ಪ್ರಾರಂಭವಾಗಿ ಬೋದೂರು, ಮಾಟಲದಿನ್ನಿ, ಹಿರೇವಂಕಲಕುAಟಾ ಮಾರ್ಗದ ಮೂಲಕ ಹಿರೇಅರಳಿಹಳ್ಳಿ ಗ್ರಾಮಕ್ಕೆ ತೆರಳಿತು.

Get real time updates directly on you device, subscribe now.

Comments are closed.

error: Content is protected !!