ಭಾಗ್ಯನಗರ: ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ
ಭಾಗ್ಯನಗರ ಪಟ್ಟಣ ಪಂಚಾಯತಿ ವತಿಯಿಂದ ಪ್ರಸಕ್ತ ಸಾಲಿನ ವಿವಿಧ ಯೋಜನೆಗಳಡಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
2023-24ನೇ ಸಾಲಿನ ಎಸ್.ಎಫ್.ಸಿ ಅನುದಾನದಲ್ಲಿ ಶೇ.5 ಯೋಜನೆ, ಶೇ.24.10ರ ಯೋಜನೆಯಲ್ಲಿ ಶೇ.40 ರಷ್ಟು ವ್ಯಕ್ತಿಗತ ಕಾರ್ಯಕ್ರಮದ ಯೋಜನೆ, ಎಸ್.ಎಫ್.ಸಿ ಮುಕ್ತನಿಧಿ ಅನುದಾನದಲ್ಲಿ ಶೇ.7.25 ರ ಯೋಜನೆಯಲ್ಲಿ ಶೇ.40 ರಷ್ಟು ವ್ಯಕ್ತಿಗತ ಕಾರ್ಯಕ್ರಮದ ಯೋಜನೆಯಡಿ ನಿಗದಿತ ಗುರಿಗೆ ತಕ್ಕಂತೆ ಹೆಚ್ಚು ಅರ್ಜಿಗಳು ಸ್ವೀಕೃತಿಯಾಗದ ಕಾರಣ ಅರ್ಹ ಫಲಾನುಭವಿಗಳಿಗೆ ಅರ್ಜಿ ಸಲ್ಲಿಸಲು ಫೆಬ್ರವರಿ 22ರವರೆಗೆ ಅವಕಾಶ ಕಲ್ಪಿಸಲಾಗಿದೆ.
ವಿಕಲಚೇತನರಿಗೆ ಸಾಧನ ಸಲಕರಣೆ ವಿತರಣೆ: ಎಸ್.ಎಫ್.ಸಿ ಅನುದಾನದಲ್ಲಿ ಶೇ.5 ಯೋಜನೆಯ ಪಟ್ಟಣ ಪಂಚಾಯತ್ ಅನುದಾನ ಕಾರ್ಯಕ್ರಮದಡಿ ವಿಕಲಚೇತನರಿಗೆ ಸಾಧನ ಸಲಕರಣೆಗಳ ವಿತರಿಸಲಾಗುತ್ತಿದ್ದು, ಅರ್ಹ ಫಲಾನುಭವಿಗಳು ಅರ್ಜಿಯೊಂದಿಗೆ ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ಕುಟುಂಬದ ಪಡಿತರ ಚೀಟಿ, ಶೇ.75ರಷ್ಟು ಅಂಗವಿಕಲತೆ ಹೊಂದಿರುವ ಬಗ್ಗೆ ವಿಕಲಚೇತನರ ಗುರುತಿನ ಚೀಟಿಯ ಜೆರಾಕ್ಸ್ ಪ್ರತಿಗಳು ಹಾಗೂ 2 ಭಾವಚಿತ್ರಗಳನ್ನು ಫೆ.22 ರೊಳಗೆ ಪ.ಪಂ ಕಾರ್ಯಾಲಯಕ್ಕೆ ಅರ್ಜಿ ಸಲ್ಲಿಸಬೇಕು.
ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳ ಯೋಜನೆಗಳು: ಭಾಗ್ಯನಗರ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ 2023-24ನೇ ಸಾಲಿನ ಎಸ್.ಎಫ್.ಸಿ ಅನುದಾನದಲ್ಲಿ ಶೇ.24.10ರ ಯೋಜನೆಯಲ್ಲಿ ಶೇ.40 ರಷ್ಟು ವ್ಯಕ್ತಿಗತ ಕಾರ್ಯಕ್ರಮದ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿವಿಧ ಹಂತದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ, ಪರಿಶಿಷ್ಟ ಜಾತಿಯ ಬಿ.ಇ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣೆ, ಎಸ್.ಎಫ್.ಸಿ ಮುಕ್ತನಿಧಿ ಅನುದಾನದಲ್ಲಿ ಶೇ.7.25ರ ಯೋಜನೆಯಲ್ಲಿ ಶೇ.40ರಷ್ಟು ವ್ಯಕ್ತಿಗತ ಕಾರ್ಯಕ್ರಮದಡಿಯಲ್ಲಿ ವಿವಿಧ ಹಂತದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ, ಈ ಎಲ್ಲಾ ಯೋಜನೆಗಳಲ್ಲಿ ಅರ್ಹ ವಿದ್ಯಾರ್ಥಿಗಳು ಅರ್ಜಿಯೊಂದಿಗೆ ಪ್ರಸ್ತುತ ವರ್ಷದ ವ್ಯಾಸಂಗ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ. ಕುಟುಂಬದ ಪಡಿತರ ಚೀಟಿ, ಅಂಕಪಟ್ಟಿಗಳು, ಜಾತಿ ಪ್ರಮಾಣ ಪತ್ರದ ಝರಾಕ್ಸ್ ಪ್ರತಿಗಳು ಮತ್ತು 02 ಭಾವಚಿತ್ರಗಳನ್ನು ಫೆ.22 ರೊಳಗೆ ಪ.ಪಂ ಕಾರ್ಯಾಲಯಕ್ಕೆ ಅರ್ಜಿ ಸಲ್ಲಿಸಬೇಕು ಎಂದು ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments are closed.