ಆದರ್ಶ ವಿದ್ಯಾಲಯಗಳ ದಾಖಲಾತಿಗೆ ಅರ್ಜಿ ಆಹ್ವಾನ

Get real time updates directly on you device, subscribe now.

ಕೊಪ್ಪಳ  : ೨೦೨೩-೨೪ನೇ ಸಾಲಿನ ಜಿಲ್ಲೆಯ ಎಲ್ಲಾ ತಾಲ್ಲೂಕಿನ ಆದರ್ಶ ವಿದ್ಯಾಲಯಗಳಲ್ಲಿರುವ ೭ನೇ ತರಗತಿ ೮ನೇ ತರಗತಿ ಮತ್ತು ೯ನೇ ತರಗತಿಯಲ್ಲಿ ಖಾಲಿ ಸ್ಥಾನಗಳನ್ನು ಪ್ರವೇಶ ಪರೀಕ್ಷೆಯ ಮೂಲಕ ದಾಖಲಾತಿಗಾಗಿ ಅರ್ಜಿಗಳನ್ನು ಕರೆಯಲಾಗಿದೆ.
೨೦೨೩ರ ಜೂನ್ ೨೭ ರಿಂದ ಜುಲೈ ೦೭ರವರೆಗೆ ಸಂಬಂಧಿಸಿದ ತಾಲ್ಲೂಕಿನ ಆದರ್ಶ ವಿದ್ಯಾಲಯಗಳಲ್ಲಿ ಅರ್ಜಿ ಪಡೆದು ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.
ಅರ್ಜಿ ಸಲ್ಲಿಸಲು ಜುಲೈ ೦೭ರ ಸಂಜೆ ೫ ಗಂಟೆಯವರೆಗೆ ಇರುತ್ತದೆ. ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ತಾಲ್ಲೂಕುಗಳಲ್ಲಿ ನಿಗದಿಪಡಿಸಿದ ಪರೀಕ್ಷಾ ಕೇಂದ್ರಗಳಲ್ಲಿ ಜುಲೈ ೧೫ರಂದು ಬೆಳಿಗ್ಗೆ ೧೧ ಗಂಟೆಯಿಂದ ೦೧.೩೦ರವರೆಗೆ ಪ್ರವೇಶ ಪರೀಕ್ಷೆ ನಡೆಸಲಾಗುವುದು ಎಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಮುನಿರಾಬಾದ್ ಜಿಲ್ಲಾ ಕೊಪ್ಪಳದ ಉಪ ನಿರ್ದೇಶಕರು (ಅಭಿವೃದ್ಧಿ)   ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!
%d bloggers like this: