ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ
ಇಲಾಖಾವಾರು ಯೋಜನೆಗಳಲ್ಲಿ ಅಲ್ಪಸಂಖ್ಯಾತ ಫಲಾನುಭವಿಗಳಿಗೆ ಯೋಜನೆಯ ಸೌಲಭ್ಯ ಒದಗಿಸಿ: ಡಿಸಿ ನಲಿನ್ ಅತುಲ್
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರದಂದು ಆಯೋಜಿಸಿದ್ದ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸರ್ಕಾರದ ಪ್ರತಿ ಇಲಾಖೆಯಲ್ಲಿ ಇರುವ ಹಲವಾರು ಯೋಜನೆಗಳಲ್ಲಿ ಅಲ್ಪಸಂಖ್ಯಾತ ಫಲಾನುಭವಿಗಳಿಗೂ ಅವಕಾಶವಿರುತ್ತದೆ. ಆದರೆ ಬಹಳಷ್ಟು ಫಲಾನುಭವಿಗಳಿಗೆ ಯಾವ ಇಲಾಖೆಯ ಯೋಜನೆ ತಮಗೆ ಅನ್ವಯವಾಗುತ್ತದೆ ಎಂಬುದರ ಕುರಿತು ತಿಳುವಳಿಕೆ ಇರುವುದಿಲ್ಲ. ಆದ್ದರಿಂದ ಇಲಾಖಾ ಮುಖ್ಯಸ್ಥರು ಫಲಾನುಭವಿಗಳನ್ನು ಗುರುತಿಸುವ ಕೆಲಸ ಮಾಡಬೇಕು. ಅರ್ಹ ಫಲಾನುಭವಿಗಳನ್ನು ಗುರುತಿಸಿ ಅವರನ್ನು ಯೋಜನೆ ವ್ಯಾಪ್ತಿಗೆ ತಂದು ಸರ್ಕಾರದ ಸೌಲಭ್ಯ ಒದಗಿಸಬೇಕು. ಆದ್ದರಿಂದ ಎಲ್ಲ ಇಲಾಖಾ ಮುಖ್ಯಸ್ಥರು ತಮ್ಮ ಇಲಾಖೆಯಲ್ಲಿನ ಯೋಜನೆಗಳಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಿರುವ ಯೋಜನೆಗಳು ಹಾಗೂ ಫಲಾನುಭವಿಗಳ ಪಟ್ಟಿಯನ್ನು ಸಲ್ಲಿಸಿ. ಇದರಿಂದ ಜಿಲ್ಲೆಯ ಒಟ್ಟಾರೆ ಫಲಾನುಭವಿಗಳು ಹಾಗೂ ಅವರಿಗೆ ದೊರೆಯುತ್ತಿರುವ ಯೋಜನೆಗಳ ಸೌಲಭ್ಯಗಳ ಬಗ್ಗೆ ಮಾಹಿತಿ ಸಂಗ್ರಹಿಸಲು ಅನುಕೂಲವಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚಿಸಿದರು.
ತೋಟಗಾರಿಕೆ, ಕೃಷಿ, ಪಶು ಪಾಲನೆ ಮತ್ತು ಪಶು ವೈದ್ಯಕೀಯ, ರೇಷ್ಮೆ ಇಲಾಖೆ, ಮೀನುಗಾರಿಕೆ ಇಲಾಖೆಗಳಲ್ಲಿರುವ ಬಹುತೇಕ ಯೋಜನೆಗಳಲ್ಲಿ ಅಲ್ಪಸಂಖ್ಯಾತ ಫಲಾನುಭವಿಗಳು ಒಳಪಡುತ್ತಾರೆ. ಫ್ರೂಟ್ ತಂತ್ರಾAಶದಲ್ಲಿ ಪ್ರವರ್ಗವಾರು ಫಲಾನುಭವಿಗಳ ಪಟ್ಟಿ ದೊರೆಯುತ್ತದೆ. ಅವುಗಳ ಆಧಾರದಲ್ಲಿ ಇಲಾಖೆಯ ಯೋಜನೆಗಳಲ್ಲಿ ಅಲ್ಪಸಂಖ್ಯಾತ ಫಲಾನುಭವಿಗಳನ್ನು ಗುರುತಿಸಿ, ಯೋಜನೆಯ ಲಾಭ ಒದಗಿಸಿ ಎಂದು ಅವರು ಹೇಳಿದರು.
ಪ್ರತಿ ಸಭೆಯ ನಂತರ ಸಿದ್ದಪಡಿಸುವ ನಡಾವಳಿಗಳಲ್ಲಿ ಸಭೆಯಲ್ಲಿ ಸೂಚಿಸಿದ, ನಿರ್ಧರಿಸಿದ ಅಂಶಗಳ ಪಾಲನೆ ಕುರಿತು ಸಂಬAಧಿಸಿದ ಇಲಾಖಾ ಮುಖ್ಯಸ್ಥರು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಅನುಪಾಲನಾ ವರದಿಯನ್ನು ಕಡ್ಡಾಯವಾಗಿ ಸಲ್ಲಿಸಬೇಕು. ಯಾವುದೇ ಮಾಹಿತಿ ನೀಡದೆ ಸಭೆಗೆ ಗೈರು ಹಾಜರಾಗುವ ಅಧಿಕಾರಿಗಳಿಗೆ ನೋಟಿಸ್ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.
ಸಭೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಸುರೇಶ್ ಕೋಕರೆ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರಾದ ನಾಗರಾಜ, ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
Comments are closed.