ಬೆನ್ನೂರು & ವಿವಿಧ ಗ್ರಾಮಗಳಲ್ಲಿ ಸಂವಿಧಾನ ಜಾಗೃತಿ
ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮಮ ಹಿನ್ನೆಲೆಯಲ್ಲಿ ಫೆಬ್ರವರಿ 13ರಂದು ‘ಸಂವಿಧಾನ ಜಾಗೃತಿ ಜಾಥಾ’ ಮೆರವಣಿಗೆಯು ಜಿಲ್ಲೆಯ ಬೆನ್ನೂರು, ಉಳೇನೂರು, ಯರಡೋಣ, ಸಿದ್ದಾಪೂರ ಹಾಗೂ ಗುಂಡೂರು ಗ್ರಾಮದಲ್ಲಿ ನಡೆಯಿತು.
ಬೆನ್ನೂರು ಗ್ರಾಮದಲ್ಲಿ ಸಂವಿಧಾನ ಜಾಗೃತಿ ಜಾಥಾ ಮೆರವಣಿಗೆಗೆ ಬೈಕ್ ರ‍್ಯಾಲಿ ಮೂಲಕ ಚಾಲನೆ ನೀಡಲಾಯಿತು. ಶಾಲಾ ವಿದ್ಯಾರ್ಥಿಗಳು ಹಾಗೂ ದಲಿತ ಹಾಗೂ ವಿವಿಧ ಸಂಘಟನೆಗಳು, ಸಾರ್ವಜನಿಕರು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಮೆರವಣಿಗೆ ಕಾರ್ಯಕ್ರಮದಲ್ಲಿ ಸಂವಿಧಾನದ ಪ್ರಸ್ತಾವನೆಯನ್ನು ಬೋಧಿಸಲಾಯಿತು. ಭಾಷಣಕಾರರು ಸಂವಿಧಾನ ಪ್ರಸ್ತಾವನೆಯ ಮಹತ್ವದ ಕುರಿತು ಜನರಲ್ಲಿ ತಿಳುವಳಿಕೆ ನೀಡಿದರು. ಸರ್ಕಾರದಿಂದ ನೀಡುವ ಉಚಿತ ಯೋಜನೆಗಳಾದ ಪಡಿತರ ಅಕ್ಕಿ, ಗೃಹಲಕ್ಷ್ಮೀ, ಗೃಹ ಜ್ಯೋತಿ, ಯುವನಿಧಿ ಮತ್ತು ಶಕ್ತಿ ಯೋಜನೆಗಳ ಕುರಿತು ಇದೆ ವೇಳೆ ಸಾರ್ವಜನಿಕರಲ್ಲಿ ತಿಳುವಳಿಕೆ ಹೇಳುವ ಮೂಲಕ ಸಮಾಜದ ಕಟ್ಟ ಕಡೆಯ ವ್ಯಕ್ತಿಗಳು ಸಹಿತ ಈ ಎಲ್ಲಾ ಯೋಜನೆಗಳ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಮನವಿ ಮಾಡಲಾಯಿತು.

Comments are closed.