ಸಂತ ಸೇವಾಲಾಲ್ ಜಯಂತಿ : ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ

Get real time updates directly on you device, subscribe now.

: ಸಂತ ಸೇವಾಲಾಲ್ ಜಯಂತಿ ಅಂಗವಾಗಿ ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ಫೆಬ್ರವರಿ 15 ರಂದು ಸಂತ ಸೇವಾಲಾಲ್ ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.
ಕೊಪ್ಪಳ ಜಿಲ್ಲಾಡಳಿತ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಸಂತ ಸೇವಾಲಾಲ್ ಜಯಂತಿಯನ್ನು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸರಳವಾಗಿ ಆಚರಿಸಲಾಯಿತು. ಸಹಾಯಕ ಆಯುಕ್ತರಾದ ಕ್ಯಾ. ಮಹೇಶ್ ಮಾಲಗಿತ್ತಿ ಹಾಗೂ ಅಬಕಾರಿ ಉಪ ಆಯುಕ್ತರಾದ ಬಿ.ಆರ್.ಹಾಲೇಶ್ ಅವರು ಸಂತ ಸೇವಾಲಾಲ್  ಅವರ  ಭಾವಚಿತ್ರಕ್ಕೆ  ಪುಷ್ಪಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅಬಕಾರಿ ಅಧೀಕ್ಷಕರಾದ ಭಾರತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೊಟ್ರೇಶ್ ಮರಬನಳ್ಳಿ ಹಾಗೂ ಸಮುದಾಯದ ಮುಖಂಡರಾದ ಅಚಲಾಪುರ ತಾಂಡಾದ ಯಮನೂರಪ್ಪ, ಹನುಮಂತಪ್ಪ ಮಡ್ಡಿ, ಕನಕಾಪುರ ತಾಂಡಾದ ಚಂದ್ರಶೇಖರ ದೊಡ್ಡಮನಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

Get real time updates directly on you device, subscribe now.

Comments are closed.

error: Content is protected !!