ಸಾಮಾಜಿಕ ನ್ಯಾಯದ ಕ್ಷೇತ್ರಕ್ಕೆ ಕೊಡುಗೆ ನೀಡಿರುವ ಪತ್ರಕರ್ತರಿಗೆ “ವಡ್ಡರ್ಸೆ ರಘುರಾಮ ಶೆಟ್ಟಿ ಪ್ರಶಸ್ತಿ”- ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ

Get real time updates directly on you device, subscribe now.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ

429. ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924 ರಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನವು ಈ ವರ್ಷ ಶತಮಾನದ ಮೈಲಿಗಲ್ಲನ್ನು ಪೂರ್ಣಗೊಳಿಸುತ್ತಿದೆ. ಮಹಾತ್ಮಾ ಗಾಂಧೀಜಿಯವರು ಅಧ್ಯಕ್ಷತೆ ವಹಿಸಿದ್ದ ಏಕೈಕ ಅಧಿವೇಶನ ಇದಾಗಿದೆ. ಈ ಅಧಿವೇಶನದ ಕೊಡುಗೆಯನ್ನು ಸ್ಮರಿಸಲು 2 ಕೋಟಿ ರೂ. ವೆಚ್ಚದಲ್ಲಿ ಬೆಳಗಾವಿಯಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗುವುದು. ಅಲ್ಲದೇ ಮಹಾತ್ಮಾ ಗಾಂಧೀಜಿಯವರು ಕರ್ನಾಟಕದಲ್ಲಿ ಭೇಟಿ ನೀಡಿದ ಸ್ಥಳಗಳಲ್ಲಿ ಸ್ಮರಣಾರ್ಥ ಫಲಕಗಳನ್ನು ಅಳವಡಿಸಲಾಗುವುದು.

430. ವಾರ್ತಾ ಇಲಾಖೆಯು ಪ್ರಕಟಿಸುತ್ತಿರುವ ವಾರ್ತಾ ಜನಪದ ಮತ್ತು ಮಾರ್ಚ್ ಆಫ್ ಕರ್ನಾಟಕ ಮಾಸ ಪತ್ರಿಕೆಗಳನ್ನು ಡಿಜಿಟೈಸ್ ಮಾಡುವ ಮೂಲಕ ಇನ್ನೂ ಹೆಚ್ಚಿನ ಜನರಿಗೆ ತಲುಪಿಸಲು ಕ್ರಮವಹಿಸಲಾಗುವುದು.

431. ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ಸೌಲಭ್ಯವನ್ನು ಪ್ರಾರಂಭಿಸಲಾಗುವುದು.

432. ಸಾಮಾಜಿಕ ನ್ಯಾಯದ ಕ್ಷೇತ್ರಕ್ಕೆ ಕೊಡುಗೆ ನೀಡಿರುವ ಪತ್ರಕರ್ತರಿಗೆ “ವಡ್ಡರ್ಸೆ ರಘುರಾಮ ಶೆಟ್ಟಿ ಪ್ರಶಸ್ತಿ” ಸ್ಥಾಪಿಸಿ, ಪ್ರತಿ ವರ್ಷ ನೀಡಲಾಗುವುದು.

Get real time updates directly on you device, subscribe now.

Comments are closed.

error: Content is protected !!