ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ
ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು ಫೆಬ್ರವರಿ 17ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಫೆ.17ರ ಬೆಳಿಗ್ಗೆ ಹೊಸಪೇಟೆಯಿಂದ ನಿರ್ಗಮಿಸಿ ಬೆಳಿಗ್ಗೆ 10.30ಕ್ಕೆ ಕೊಪ್ಪಳ ನಗರಕ್ಕೆ ಆಗಮಿಸಿ, ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆಯುವ ಸಾಂಸ್ಕೃತಿಕ ನಾಯಕ ವಿಶ್ವಗುರು ಶ್ರೀ ಬಸವಣ್ಣನವರ ಭಾವಚಿತ್ರ ಅನಾವರಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. 11ಗಂಟೆಗೆ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲೆಯ ಹಿರಿಯ ಅಧಿಕಾರಿಗಳೊಂದಿಗೆ ಕನಕಗಿರಿ ಉತ್ಸವ-2024ರ ಕುರಿತು ಪೂರ್ವ ಭಾವಿ ಸಭೆ ನಡೆಸುವರು. ಬಳಿಕ ಮಧ್ಯಾಹ್ನ 1 ಗಂಟೆಗೆ ಕನಕಗಿರಿಗೆ ತೆರಳಿ, ಜಿಲ್ಲೆಯ ಹಿರಿಯ ಅಧಿಕಾರಿಗಳೊಂದಿಗೆ ಕನಕಗಿರಿ ಉತ್ಸವ ಕಾರ್ಯಕ್ರಮದ ಸ್ಥಳ ಪರಿಶೀಲನೆ ಮತ್ತು ವೀಕ್ಷಣೆ ಮಾಡುವರು. ಕನಕಗಿರಿ ಗೃಹಕಚೇರಿಯಲ್ಲಿ ಮಧ್ಯಾಹ್ನ 3 ರಿಂದ ಸಂಜೆ 7 ಗಂಟೆಯವರೆಗೆ ಸಾರ್ವಜನಿಕರ ಭೇಟಿ ಮತ್ತು ಕುಂದುಕೊರತೆಗಳ ವಿಚಾರಣೆ ಮಾಡಿ, ಅಲ್ಲಿಂದ ಕಾರಟಗಿಗೆ ತೆರಳಿ, ಸಾರ್ವಜನಿಕರ ಭೇಟಿ ಮತ್ತು ಕುಂದುಕೊರತೆಗಳ ವಿಚಾರಣೆ ಮಾಡಿ ಕಾರಟಗಿಯಲ್ಲಿ ವಾಸ್ತವ್ಯ ಹೂಡುವರು.
ಫೆ.18ರಂದು ಸಚಿವರು ಕಾರಟಗಿಯಲ್ಲಿ ಸ್ಥಳೀಯ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವರು ಹಾಗೂ ಸಾರ್ವಜನಿಕರ ಭೇಟಿ ಮತ್ತು ಕುಂದುಕೊರತೆಗಳ ವಿಚಾರಣೆ ಮಾಡಿ, ಅಂದು ಸಂಜೆ 4 ಗಂಟೆಗೆ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.