ಎಂಡಿಆರ್‌ಎಸ್ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

Get real time updates directly on you device, subscribe now.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ನಿರ್ವಹಣೆಯಾಗುತ್ತಿರುವ ಕೊಪ್ಪಳ ಜಿಲ್ಲೆಯಲ್ಲಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಡಾ||ಎ.ಪಿ.ಜೆ.ಅಬ್ದುಲ್ ಕಲಾಂ ಶಾಲೆಗಳಲ್ಲಿ 2024-25 ನೇ ಸಾಲಿಗೆ 6 ನೇ ತರಗತಿಯ ಪ್ರವೇಶಕ್ಕೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ.

ಪೋಷಕರು/ವಿದ್ಯಾರ್ಥಿಗಳು ಹತ್ತಿರದ ವಸತಿ ಶಾಲೆ/ಮಾಹಿತಿ ಕೇಂದ್ರ ಕಛೇರಿಗಳಲ್ಲಿ ಎಲ್ಲಾ ದಾಖಲೆಗಳೊಂದಿಗೆ ಭೇಟಿ ನೀಡಿ ಆನ್‌ಲೈನ್ ಮುಖಾಂತರ ಸೇವಾಸಿಂಧು ಪೋರ್ಟಲ್  https://sevasindhuservices.karnataka.gov.in    ಅಥವಾ  dom.karnataka.gov.in/koppal/public     ನಲ್ಲಿ ನೇರವಾಗಿ ಅರ್ಜಿಗಳನ್ನು ಮಾರ್ಚ್ 15 ರೊಳಗೆ ಉಚಿತವಾಗಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಕುಕನೂರು: 9844040035, ತಳಕಲ್: 6361118478, ಕುದರಿಮೋತಿ: 9740702035, ಟಣಕನಕಲ್: 9902690349, ಹಿರೇಬೆಣಕಲ್-1: 9483395708, ಹಿರೇಬೆಣಕಲ್-2: 8150924173, ಹಿರೇಬನ್ನಿಗೋಳ: 9591439223, ಅಲ್ಪಸಂಖ್ಯಾತರ ನವೋದಯ ಮಾದರಿಯ ವಸತಿ ಶಾಲೆ ಹಿರೇಸಿಂದೋಗಿ: 8747092789, ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಯಲಬುರ್ಗಾ\ಕುಷ್ಟಗಿ\ಗಂಗಾವತಿ, ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಕೊಪ್ಪಳ ಇಲ್ಲಿಗೆ ಭೇಟಿ ನೀಡಬೇಕು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 5 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ/ಡಾ||ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ ಶೇ.75 ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಮತ್ತು ಶೇ.25 ಇತರೆ ವರ್ಗದವರಿಗೆ ಮೀಸಲಿಡಲಾಗಿದೆ.  ಅಲ್ಪಸಂಖ್ಯಾತರ ವರ್ಗದ ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ಆದಾಯ ಹಾಗೂ ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷ ಮಿತಿಯೊಳಗಿರಬೇಕು. ಹಿಂದುಳಿದ ವರ್ಗಗಳ 2ಎ, 3ಎ ಮತ್ತು 3ಬಿ ಅಭ್ಯರ್ಥಿಗಳ ಹಾಗೂ ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷ ಮಿತಿಯೊಳಗಿರಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷ ಮಿತಿಯೊಳಗಿರಬೇಕು. ಅಂಗವಿಕಲ ವಿದ್ಯಾರ್ಥಿಗಳಿಗೆ ಶೇ.05, ಮಾಜಿ ಸೈನಿಕರಿಗೆ ಶೇ. 04  ಮೀಸಲಾತಿ ಕಾಯ್ದಿರಿಸಲಾಗಿದೆ. ವಿಶೇಷ ದುರ್ಬಲ ವರ್ಗಕ್ಕೆ ಶೇ.05, ಸಫಾಯಿ ಕರ್ಮಚಾರಿ ವಿದ್ಯಾರ್ಥಿಗಳಿಗೆ ಶೇ. 05 ಮೀಸಲಾತಿ ಕಾಯ್ದಿರಿಸಲಾಗಿದೆ.
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯೊಂದಿಗೆ ಕಂದಾಯ ಇಲಾಖೆಯ ತಹಶೀಲ್ದಾರ ನೀಡಿದ ಜಾತಿ ಮತ್ತು ಆದಾಯ ದೃಢೀಕರಣ ಪ್ರಮಾಣ ಪತ್ರ, ವಾಸಸ್ಥಳ ಪ್ರಮಾಣ ಪತ್ರ, ಆಧಾರ ಕಾರ್ಡ್ ಹಾಗೂ ವಿದ್ಯಾರ್ಥಿಯ ಪಾಸ್ ಪೋರ್ಟ್ ಅಳತೆಯ ಇತ್ತೀಚಿನ 4 ಭಾವಚಿತ್ರಗಳೊಂದಿಗೆ ಮತ್ತು ನಿಗದಿಪಡಿಸಿದ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬೇಕು. ಅಪೂರ್ಣವಾದ ಮತ್ತು ತಡವಾಗಿ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಛೇರಿ ಹಾಗೂ  ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಕೊಪ್ಪಳ 08539-225070, 8088892549, ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಗಂಗಾವತಿ-9972524670, ಕುಷ್ಟಗಿ-8861610578, ಯಲಬುರ್ಗಾ-9620522537 ವಿಳಾಸಗಳಿಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!