ಕೊಪ್ಪಳ ಜಿಲ್ಲೆಯ ಜನತೆಗೆ ಬಜೆಟ್ ನಲ್ಲಿ ಅನ್ಯಾಯವಾಗಿದೆ-ಸಂಗಣ್ಣ ಕರಡಿ
ಎಸ್ಸಿಪಿ ಟಿಎಸ್ಬಿಗೆ ಹಣ ನೀಡಿಲ್ಲ, ಶಿಕ್ಷಣಕ್ಕೆ, ನೀರಾವರಿಗೆ ಹಣ ಇಟ್ಟಿಲ್ಲ. ರಾಜ್ಯವನ್ನು ದಿವಾಳಿ ಮಾಡಿದ್ದಾರೆ. ಕೊಪ್ಪಳ ಲೋಕಸಭಾ ವ್ಯಾಪ್ತಿಗೆ ಬರುವ ಎಲ್ಲ ಕ್ಷೇತ್ರಗಳನ್ನು ಸಂಪೂರ್ಣ ಕಡೆಗಣನೆ ಮಾಡಿದ್ದಾರೆ.
ಕೊಪ್ಪಳ ಏತ ನೀರಾವರಿ ಸೇರಿ ಯಾವ ನೀರಾವರಿ ಯೋಜನೆಗೂ ಹಣ ಮೀಸಲಿಟ್ಟಿಲ್ಲ. ಯಲಬುರ್ಗಾ ಕ್ಷೇತ್ರದ ಕೆರೆ ತುಂಬಿಸುವ ಯೋಜನೆ ಹೊರತು ಪಡಿಸಿ ಯಾವ ಕ್ಷೇತ್ರಕ್ಕೂ ಕೆರೆ ತುಂಬಿಸುವ ಯೋಜನೆಗೆ ಹಣ ಇಟ್ಟಿಲ್ಲ. ಕೃಷ್ಣಾ, ಭದ್ರಾ, ಮಹಾದಾಯಿ ಯೋಜನೆಗಳಿಗೆ ಯಾವುದೇ ಹಣ ನೀಡಿಲ್ಲ. ನೀರಾವರಿಗೆ ಸಂಪೂರ್ಣ ಅನ್ಯಾಯ ಮಾಡಿದ್ದಾರೆ. ಇನ್ನು ಅಂಜನಾದ್ರಿ ಅಭಿವೃದ್ಧಿ ಗೆ 100 ಕೋಟಿ ರೂ. ಒದಗಿಸಲಾಗಿದೆ ಎಂದಿದ್ದಾರೆ. ನಮ್ಮ ಅವಧಿಯಲ್ಲಿ ಮೀಸಲಿಟ್ಟ 120 ಕೋಟಿ ರೂ. ಬಿಡುಗಡೆಯಾಗಿಲ್ಲ. ಈ ಹಣ ಯಾವಾಗ ಬಿಡುಗಡೆ ಆಗುತ್ತದೆ? ನವಲಿ ಸಮನಾಂತರ ಜಲಾಶಯ ನಿರ್ಮಾಣಕ್ಕೆ ಒಂದು ರೂಪಾಯಿ ಹಣ ಮೀಸಲಿಟ್ಟಿಲ್ಲ. ಕೊಪ್ಪಳ ಜಿಲ್ಲೆಯ ಜನತೆಗೆ ಬಜೆಟ್ ನಲ್ಲಿ ಅನ್ಯಾಯವಾಗಿದೆ. ತಾರತಮ್ಯದ ಬಜೆಟ್ ಇದಾಗಿದೆ.
– ಸಂಸದರು, ಸಂಗಣ್ಣ ಕರಡಿ.
Comments are closed.