ಸಾರ್ವಜನಿಕ ಅರ್ಜಿಗಳಿಗೆ ತಕ್ಷಣವೇ ಸ್ಪಂದಿಸಿರಿ: ಲೋಕಾಯುಕ್ತ ಎಸ್ ಪಿ M N ಶಶಿಧರ
ಕೊಪ್ಪಳ ತಾಲೂಕ ಪಂಚಾಯತಿಯಲ್ಲಿ ಜರುಗಿದ ತಾಲೂಕ ಮಟ್ಟದ ಸಾರ್ವಜನಿಕ ಕುಂದು ಕೊರತೆಗಳು ಹಾಗು ಅವಹಾಲುಗಳ ಸಭೆ
ಕೊಪ್ಪಳ :-ಸರ್ಕಾರಿ ಕಛೇರಿಗಳಿಗೆ ಸಾರ್ವಜನಿಕರಿಂದ ಸಲ್ಲಿಕೆಯಾದ ಅರ್ಜಿಗಳಿಗೆ ವಿಳಂಬ ಮಾಡದೇ ತಕ್ಷಣವೇ ಸ್ಪಂದಿಸಿರೆಂದು ರಾಯಚೂರು ಲೋಕಾಯುಕ್ತ ಎಸ್.ಪಿ M N ಶಶಿಧರ ಹೇಳಿದರು.
ದಿನಾಂಕ:16-1-2024ರಂದು ಕೊಪ್ಪಳ ತಾಲೂಕ ಪಂಚಾಯತಿಯಲ್ಲಿ ಕೊಪ್ಪಳ ತಾಲೂಕ ಮಟ್ಟದ ಸಾರ್ವಜನಿಕರ ಕುಂದು ಕೊರತೆಗಳು ಹಾಗು ಅವಹಾಲುಗಳ ಸ್ವೀಕಾರ ಸಭೆಯ ಅಧ್ಯಕ್ಷತೆಯನ್ನು ವಹಿಸಿಕೊಂಡು ಮಾತನಾಡಿದರು. ಪ್ರತಿನಿತ್ಯ ಸಾರ್ವಜನಿಕರು ಕಛೇರಿಗೆ ಆಗಮಿಸಿ ಅರ್ಜಿಗಳನ್ನು ಸಲ್ಲಿಸುತ್ತಿದ್ದು ಅವುಗಳನ್ನು ಕೂಲಂಕುಷವಾಗಿ ಪರಿಶೀಲಿಸಿ ಕಾಲಮಿತಿಯೊಳಗೆ ಸಂಬಂಧಿಸಿದ ಅರ್ಜಿದಾರರಿಗೆ ಲಿಖಿತವಾಗಿ ಮಾಹಿತಿ ನೀಡತಕ್ದದು. ಇದರಿಂದ ಸಾರ್ವಜನಿಕರಿಗೆ ಪರಿಹಾರ ದೊರೆತಂತಾಗುತ್ತದೆಂದರು. ಪ್ರತಿನಿತ್ಯ ಕಛೇರಿಗಳ ವ್ಯವಹಾರ ಮಾಡುವಂತಹ ಸಂದರ್ಭದಲ್ಲಿ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸಾರ್ವಜನಿಕರಿಗೆ ದಾಖಲೆಗಳನ್ನು ವಿತರಿಸುವಾಗ ಕಡ್ಡಾಯವಾಗಿ ದಾಖಲೆಗಳಿಗೆ ದಿನಾಂಕವನ್ನು ನಮೂದಿಸತಕ್ಕದ್ದು.ಇದರಿಂದ ದಾಖಲೆಯನ್ನು ಯಾವ ಅವಧಿಯಲ್ಲಿ ಮತ್ತು ಯಾರಿಂದ ವಿತರಿಸಲಾಗಿದೆ ಎಂಬ ಮಾಹಿತಿಯು ದೊರೆಯುತ್ತದೆ ಹಾಗು ಅರ್ಜಿ ವಿಲೇವಾರಿಗೆ ಸಂಬಂಧಿಸಿದವರಿಂದ ಮಾಹಿತಿ ಪಡೆಯಲು ಅನುಕೂಲವಾಗುತ್ತದೆ.ಇದೇ ಸಂದರ್ಭದಲ್ಲಿ ಸಾರ್ವಜನಿಕರಿಂದ ಸ್ವೀಕೃತವಾದ ಅರ್ಜಿಗಳಿಗೆ ತುರ್ತು ಕ್ರಮವಹಿಸಲು ಸೂಚಿಸಿದರು.
ಸಭೆಯಲ್ಲಿ ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ದುಂಡಪ್ಪ ತುರಾದಿ, ತಹಶೀಲ್ದಾರ ವಿಠ್ಠಲ್ ಚೌಗಲಾ, ನರೇಗಾ ಸಹಾಯಕ ನಿರ್ದೇಶಕ ಯಂಕಪ್ಪ, ಪಂಚಾಯತ್ ರಾಜ್ ಸಹಾಯಕ ನಿರ್ದೇಶಕ ಮಹೇಶ್, ತಾಲೂಕ ಯೋಜನಾಧಿಕಾರಿ ರಾಜೇಸಾಬ ನದಾಫ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಹನಮಂತಪ್ಪ, ಲೋಕಾಯುಕ್ತ ಇನ್ಸಪೆಕ್ಟರ್ ಗಳಾದ ಗಿರೀಶ ರೊಡಕರ್, ರಾಜೇಶ್ ಭಟಗುರ್ಕಿ, ಸುನೀಲ್, ತಾಲೂಕ ಮಟ್ಟದ ವಿವಿಧ ಇಲಾಖಾಧಿಕಾರಿಗಳು, ಪಂಚಾಯತ ಅಭಿವೃದ್ದಿ ಅಧಿಕಾರಿಗಳು, ಸಾರ್ವಜನಿಕರು ಹಾಜರಿದ್ದರು.
Comments are closed.