ಯಾವುದೇ ಕೊರತೆಯಾಗದಂತೆ ಅದ್ದೂರಿ , ವ್ಯವಸ್ಥಿತ ಉತ್ಸವ ಆಚರಣೆಗೆ ಬದ್ಧತೆಯಿಂದ ಕಾರ್ಯನಿರ್ವಹಿಸಿ: ಸಚಿವ ಶಿವರಾಜ ಎಸ್.ತಂಗಡಗಿ

Get real time updates directly on you device, subscribe now.

Kanakagiri Utsav ಜಿಲ್ಲೆಯಲ್ಲಿ 8 ವರ್ಷಗಳ ನಂತರ ಕನಕಗಿರಿ ಉತ್ಸವವನ್ನು ಆಚರಿಸಲಾಗುತ್ತಿದ್ದು, ಉತ್ಸವದಲ್ಲಿ ಭಾಗವಹಿಸುವ ಸಾರ್ವಜನಿಕರು, ಕಲಾವಿದರು, ಕ್ರೀಡಾಪಟುಗಳು, ಅತಿಥಿಗಳಿಗೆ ಯಾವುದೇ ಕೊರತೆಯಾಗದಂತೆ ಅಚ್ಚುಕಟ್ಟು ವ್ಯವಸ್ಥೆಯನ್ನು ಮಾಡುವುದರ ಮೂಲಕ ಅದ್ದೂರಿ ಉತ್ಸವ ಆಚರಣೆಗೆ ಅಧಿಕಾರಿಗಳು ಬದ್ಧತೆಯಿಂದ ಕಾರ್ಯನಿರ್ವಹಿಸಿ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್.ತಂಗಡಗಿ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯ ಕನಕಗಿರಿಯಲ್ಲಿ ಮಾರ್ಚ್ 02 ಮತ್ತು 03 ರಂದು ಉತ್ಸವ ನಡೆಯಲಿದೆ. ಈ ಕುರಿತು ಈಗಾಗಲೇ ಸಿದ್ಧತಾ ಕಾರ್ಯಗಳು ಆರಂಭಗೊAಡಿದ್ದು, ಅಧಿಕಾರಿಗಳಿಗೆ ಸಮಿತಿಗಳ ಮೂಲಕ ಕಾರ್ಯ ಹಂಚಿಕೆ ಮಾಡಲಾಗಿದೆ. ಹಂಚಿಕೆ ಮಾಡಲಾದ ಕಾರ್ಯಗಳನ್ನು ಸಮಿತಿಯಲ್ಲಿರುವ ಎಲ್ಲ ಅಧಿಕಾರಿಗಳು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಭಾಗವಹಿಸುತ್ತಿದ್ದು, ವ್ಯವಸ್ಥೆಗಳಲ್ಲಿ ಯಾವುದೇ ಕೊರತೆ, ಲೋಪ ಉಂಟಾಗದAತೆ ಎಚ್ಚರ ವಹಿಸಿ ಎಂದು ಸಚಿವರು ತಿಳಿಸಿದರು.
ಉತ್ಸವದ ಅಂಗವಾಗಿ ಫೆ.28 ಮತ್ತು 29 ರಂದು ಕ್ರೀಡಾಕೂಟಗಳನ್ನು ಆಯೋಜಿಸಲಾಗಿದೆ. ಇದರಲ್ಲಿ ಅಂತರಾಷ್ಟಿçÃಯ ಕ್ರೀಡಾಪಟುಗಳು, ಸ್ಥಳೀಯ ಕ್ರೀಡಾಪಟುಗಳು ಭಾಗವಹಿಸುತ್ತಾರೆ. ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಸೂಕ್ತ ವಸತಿ ವ್ಯವಸ್ಥೆ, ಊಟ, ಉಪಹಾರ, ಕುಡಿಯುವ ನೀರಿನ ವ್ಯವಸ್ಥೆಯನ್ನು ಕ್ರೀಡಾಸಮಿತಿಯು ನಿರ್ವಹಿಸಬೇಕು. ಕುಸ್ತಿ, ಹಗ್ಗ ಜಗ್ಗಾಟ, ಕಬಡ್ಡಿ ಸೇರಿದಂತೆ ವಿವಿಧ ಗ್ರಾಮೀಣ ಕ್ರೀಡೆಗಳೊಂದಿಗೆ ವಾಲಿಬಾಲ್‌ನಂತಹ ಕ್ರೀಡೆಗಳನ್ನು ಕ್ರೀಡಾಕೂಟದಲ್ಲಿ ಆಡಿಸಬೇಕು. ಕನಕಗಿರಿ ಪಟ್ಟಣದ ರುದ್ರಸ್ವಾಮಿ ಪ್ರೌಢಶಾಲೆಯ ಆವರಣ ಹಾಗೂ ಜೂನಿಯರ್ ಕಾಲೇಜು ಮೈದಾನದಲ್ಲಿ ಕ್ರೀಡಾಕೂಟಕ್ಕೆ ಅನುಕೂಲವಾಗುವ ರೀತಿಯಲ್ಲಿ ಮೈದಾನವನ್ನು ಸಿದ್ಧಪಡಿಸಬೇಕು ಎಂದು ಕ್ರೀಡಾ ಸಮಿತಿ ಅಧಿಕಾರಿಗಳಿಗೆ ಸೂಚಿಸಿದರು.
ಉತ್ಸವದಲ್ಲಿ ಕಲಾವಿದರು ತಮ್ಮ ಕಲೆ ಪ್ರದರ್ಶನಕ್ಕೆ ಅನುಕೂಲವಾಗುವಂತೆ ಎರಡು ವೇದಿಕೆಗಳನ್ನು ರೂಪಿಸಲಾಗಿದೆ. ಉಡಚಪ್ಪ ನಾಯಕ ವೇದಿಕೆ ಹಾಗೂ ಕನಕಾಚಲ ಗುಡಿಯ ಬಲಭಾಗದಲ್ಲಿ ಪಂಚಾಕ್ಷರಿ ಪುಟ್ಟರಾಜ ಗವಾಯಿಗಳ ವೇದಿಕೆಯನ್ನು ಸಿದ್ದಪಡಿಸಲಾಗುತ್ತದೆ. ಎರಡೂ ವೇದಿಕೆಗಳಲ್ಲಿ ಪ್ರತ್ಯೇಕವಾಗಿ 50 ಕಲಾತಂಡಗಳು ಭಾಗವಹಿಸಬಹುದಾಗಿದೆ. ವೇದಿಕೆಯ ಅಲಂಕಾರ, ಆಮಂತ್ರಣ ಪತ್ರಿಕೆಗಳ ತಯಾರಿ, ಶಿಷ್ಠಾಚಾರ ಪಾಲನೆ ಕುರಿತಂತೆ ಸಮಿತಿಗಳು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಿ ಶಿಷ್ಠಾಚಾರದಂತೆ ಎಲ್ಲ ಗಣ್ಯರನ್ನು ಆಹ್ವಾನಿಸಬೇಕು. ಆಮಂತ್ರಣ ಪತ್ರಿಕೆಯಲ್ಲೂ ಶಿಷ್ಠಾಚಾರ ಪಾಲನೆಯಾಗಬೇಕು ಎಂದು ಸಚಿವರು ತಿಳಿಸಿದರು.
ಉತ್ಸವಕ್ಕೆ ಆಗಮಿಸುವ ಕಲಾವಿದರು, ಗಣ್ಯರು, ಅಧಿಕಾರಿಗಳು, ಮಾಧ್ಯಮದವರಿಗಾಗಿ ಸೂಕ್ತ ವಸತಿ ವ್ಯವಸ್ಥೆ ಕಲ್ಪಿಸಬೇಕು. ಸ್ಥಳೀಯ ಕಲಾವಿದರಿಗೆ ಮೊದಲ ಆದ್ಯತೆ ನೀಡಿ. ಉತ್ಸವಕ್ಕೆ ವಿವಿಧ ಗ್ರಾಮಗಳಿಂದ ಆಗಮಿಸುವ ಸಾರ್ವಜನಿಕರಿಗೆ ಬಸ್ ವ್ಯವಸ್ಥೆ ಕಲ್ಪಿಸಬೇಕು. ಉತ್ಸವದ ಅಂಗವಾಗಿ ಮೆರವಣಿಗೆಯನ್ನು ಹಮ್ಮಿಕೊಂಡಿದ್ದು, ಮೆರವಣಿಗೆಯು ಪಟ್ಟಣದ ಕಲ್ಮಠದಿಂದ ರಥಬೀದಿಯಿಂದ ಚಾಲನೆಗೊಂಡು ಕನಕಾಚಲಪತಿ ದೇವಸ್ಥಾನ, ಬಸ್ ಸ್ಟಾö್ಯಂಡ್ ಮಾರ್ಗವಾಗಿ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಮುಕ್ತಾಯಗೊಳ್ಳುತ್ತದೆ.  ಮೆರವಣಿಗೆಯು 15 ಕಲಾತಂಡಗಳು, ವಿವಿಧ ಶಾಲೆಗಳಿಂದ ಸ್ತಬ್ಧಚಿತ್ರಗಳೊಂದಿಗೆ 1 ಕಿ.ಮೀ. ವರೆಗೆ ಸಾಗುತ್ತದೆ. ಉತ್ಸವದ ವೇದಿಕೆಗಳು, ಮೆರವಣಿಗೆ ಹಾಗೂ ಪಟ್ಟಣದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಒದಗಿಸಬೇಕು. ಆರೋಗ್ಯ ಇಲಾಖೆಯಿಂದ ಎರಡು ದಿನಗಳ ಕಾಲ 24*7  ವೈದ್ಯಕೀಯ ಸೇವೆ ಒದಗಿಸಬೇಕು. ತುರ್ತುಪರಿಸ್ಥಿತಿ ನಿರ್ವಹಣೆಗೆ ಅಂಬ್ಯುಲೆನ್ಸ್ ಒದಗಿಸಬೇಕು ಎಂದು ಸಂಬAಧಿಸಿದ ಇಲಾಖಾ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.
2015 ರ ನಂತರ ಕನಕಗಿರಿ ಉತ್ಸವ ನಡೆಯುತ್ತಿದ್ದು, ಅದ್ದೂರಿ ಆಚರಣೆಗೆ ಸರ್ಕಾರದಿಂದ ಅಗತ್ಯ ಅನುದಾನ ಬಿಡುಗಡೆಯಾಗುತ್ತಿದೆ. ಆದ್ದರಿಂದ ಉತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕು. ಅದಕ್ಕಾಗಿ ಜಿಲ್ಲೆಯಾದ್ಯಂತ ಪ್ರಚಾರ ಕಾರ್ಯ ಕೈಗೊಳ್ಳಬೇಕು. ಪೋಸ್ಟರ್, ಬ್ಯಾನರ್, ಹೋರ್ಡಿಂಗ್ಸ್ಗಳ ಮೂಲಕ ಉತ್ಸವದ ಕುರಿತು ಪ್ರಚಾರ ಕೈಗೊಳ್ಳಬೇಕು. ಸಮಾಜಿಕ ತಾಣಗಳ ಮೂಲಕ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳು, ಕನಕಗಿರಿಯ ಸ್ಥಳದ ಮಹತ್ವದ ಕುರಿತು ಹೆಚ್ಚಿನ ಪ್ರಮಾಣದಲ್ಲಿ ಪ್ರಚಾರ ಮಾಡಬೇಕು. ಉತ್ಸವದ ಮುಖ್ಯ ವೇದಿಕೆಯ ಹತ್ತಿರ ಇಂಟರ್‌ನೆಟ್ ಮತ್ತು ಫ್ಯಾಕ್ಸ್ಗಳೊಂದಿಗೆ ಮಾಹಿತಿ ಕೇಂದ್ರದ ವ್ಯವಸ್ಥೆ ಮಾಡಬೇಕು. ಉತ್ಸವದ ಪ್ರಚಾರಕ್ಕಾಗಿ ಹಾಗೂ ನೇರ ಪ್ರಸಾರ ಮಾಡಲು ಜಿಲ್ಲಾ ಎನ್‌ಐಸಿ ಇಂದ ಹೊಸ ಆ್ಯಪ್ ಸಿದ್ದಪಡಿಸಬೇಕು ಎಂದು ಪ್ರಚಾರ ಮತ್ತು ಮಾಧ್ಯಮ ಸಮಿತಿ ಅಧಿಕಾರಿಗಳಿಗೆ ಸಚಿವರು ತಿಳಿಸಿದರು.

ಉತ್ಸವದಲ್ಲಿ ಪಾಲ್ಗೊಳ್ಳುವ ಪ್ರತಿಯೊಬ್ಬರಿಗೂ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು. ಉತ್ಸವ ಮುಗಿಯುವವರೆಗೂ ವಿದ್ಯುತ್ ವ್ಯತ್ಯಯವಾಗದಂತೆ ಎಚ್ಚರ ವಹಿಸಬೇಕು. ಪ್ರಮುಖ ಬೀದಿ, ಸ್ಮಾರಕಗಳಿಗೆ ವಿದ್ಯುತ್ ದೀಪಾಲಂಕಾರ ಕೈಗೊಳ್ಳಬೇಕು. ಫಲಪುಷ್ಪ ಪ್ರದರ್ಶನ, ಛಾಯಾಚಿತ್ರ ಪ್ರದರ್ಶನಕ್ಕೆ ಕ್ರಮ ವಹಿಸಬೇಕು. ಪ್ರಮುಖ ವಿಷಯಗಳ ಕುರಿತು ವಿವಿಧ ಇಲಾಖೆಗಳಿಂದ ಮಳಿಗೆಗಳನ್ನು ಸ್ಥಾಪಿಸಬೇಕು. ಭಾಗವಹಿಸುವ ಸಾರ್ವಜನಿಕರಿಗೂ ಊಟ ಹಾಗೂ ಉಪಹಾರದ ವ್ಯವಸ್ಥೆ ಕಲ್ಪಿಸಬೇಕು. ಒಟ್ಟಿನಲ್ಲಿ ಅದ್ದೂರಿ ಕನಕಗಿರಿ ಉತ್ಸವಕ್ಕೆ ಎಲ್ಲ ಅಧಿಕಾರಿಗಳು ಆಸಕ್ತಿ ಹಾಗೂ ಬದ್ಧತೆಯಿಂದ ನಿಮ್ಮ ಜವಾಬ್ದಾರಿಗಳನ್ನು ನಿರ್ವಹಿಸಿ ಉತ್ಸವನ್ನು ಯಶಸ್ವಿಗೊಳಿಸಿ ಎಂದು ಸಚಿವರು ಅಧಿಕಾರಿಗಳಿಗೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ನಲಿನ್ ಅತುಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೆಯ, ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ, ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ.ಕಡಿ, ಸಹಾಯಕ ಆಯುಕ್ತರಾದ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ, ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಪೊಲೀಸ್ ಉಪಾಧೀಕ್ಷಕರು, ಇತರರು ಉಪಸ್ಥಿತರಿದ್ದರು.

Get real time updates directly on you device, subscribe now.

Comments are closed.

error: Content is protected !!
%d bloggers like this: