ರಾಜ್ಯ ಮಟ್ಟದ ಉದ್ಯೋಗ ಮೇಳ: ಜಿಲ್ಲಾ ಉಸ್ತುವಾರಿ ಸಚಿವರಿಂದ ಪೋಸ್ಟರ್ ಬಿಡುಗಡೆ

Get real time updates directly on you device, subscribe now.

ಇದೇ ಫೆಬ್ರವರಿ 26 ಮತ್ತು 27ರಂದು ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳದ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ್ ತಂಗಡಗಿ ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರದಂದು ಪೋಸ್ಟರ್ ಬಿಡುಗಡೆ ಮಾಡಿದರು.
ಬೃಹತ್ ಉದ್ಯೋಗ ಮೇಳವನ್ನು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ (ಕೆ.ಎಸ್.ಡಿ.ಸಿ), ಬೆಂಗಳೂರು ಇವರ ವತಿಯಿಂದ ಫೆ.26 ಮತ್ತು 27ರಂದು ಎರಡು ದಿನಗಳ ಕಾಲ ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದು, ಇದರ ಪ್ರಚಾರಾರ್ಥವಾಗಿ ಕೊಪ್ಪಳ ಜಿಲ್ಲಾ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಜಿಲ್ಲಾ ಕೌಶಲ್ಯ ಮಿಷನ್ ವತಿಯಿಂದ ಪೋಸ್ಟರ್ ಬಿಡುಗಡೆಗೊಳಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಯಶೋಧಾ ಎಸ್.ವಂಟಗೋಡಿ, ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ.ಕಡಿ, ಸಹಾಯಕ ಆಯುಕ್ತರಾದ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ರೇಷ್ಮಾ ಹಾನಗಲ್, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳಾದ ಪ್ರಾಣೇಶ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯ ಇತರ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

Get real time updates directly on you device, subscribe now.

Comments are closed.

error: Content is protected !!