ಛತ್ರಪತಿ ಶಿವಾಜಿ ಜಯಂತಿ: ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ

Get real time updates directly on you device, subscribe now.


ಕೊಪ್ಪಳ ): ಛತ್ರಪತಿ ಶಿವಾಜಿ ಜಯಂತಿ ಅಂಗವಾಗಿ ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರಕ್ಕೆ ಫೆಬ್ರವರಿ 19ರಂದು ಪುಷ್ಪ ನಮನ ಸಲ್ಲಿಸಲಾಯಿತು.
ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಛತ್ರಪತಿ ಶಿವಾಜಿ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸರಳವಾಗಿ ಆಚರಿಸಲಾಯಿತು. ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ.ಕಡಿ ಅವರು ಹಾಗೂ ಇತರ ಗಣ್ಯರು ಸೇರಿ, ಶಿವಾಜಿ ಮಹಾರಾಜರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಶ್ರೀಶೈಲ ಬಿರಾದಾರ, ಪಶು ಇಲಾಖೆ ಉಪನಿರ್ದೇಶಕರಾದ ಡಾ ಪಿ.ಎಂ.ಮಲ್ಲಯ್ಯ, ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೊಟ್ರೇಶ್ ಮರಬನಳ್ಳಿ, ಸಮಾಜದ ತಾಲ್ಲೂಕು ಅಧ್ಯಕ್ಷರಾದ ಮಾರುತಿ ನಿಕ್ಕಂ, ಮುಖಂಡರಾದ ಚಂದ್ರಣ್ಣ ಬಡಿಗೇರ, ರಮೇಶ ಕನ್ಯಾಳ, ದಿನೇಶ ಆರೇರೆ, ಕುಮಾರ್ ಘೊರ್ಪಡೆ, ಮಾರುತಿ ಆಪ್ಟೆ, ಪ್ರತಾಪ್ ಬಡಿಗೇರ, ಸರೋಜಾ ಬಾಕಳೆ, ರೇಣುಕಾ ಕೆ., ಸುವರ್ಣ ಕಂಪ್ಲಿ, ಸವಿತಾ ಸಿಂಧೆ ಸೇರಿದಂತೆ ಸಮಾಜದ ಮುಖಂಡರು, ಮಹಿಳಾ ಮುಖಂಡರು, ಯುವಕರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದು, ಶಿವಾಜಿ ಮಹಾರಾಜರಿಗೆ ಪುಷ್ಪನಮನ ಸಲ್ಲಿಸಿದರು.

Get real time updates directly on you device, subscribe now.

Comments are closed.

error: Content is protected !!
%d bloggers like this: