ಕನಕಗಿರಿ ಉತ್ಸವ: ಮೆರವಣಿಗೆ ಸಮಿತಿ ಸಭೆ

Get real time updates directly on you device, subscribe now.

: ಕನಕಗಿರಿ ಉತ್ಸವ-2024ರ ಹಿನ್ನೆಲೆಯಲ್ಲಿ ಸಿದ್ದತೆಗಾಗಿ ವಿವಿಧ ಸಮಿತಿಗಳನ್ನು ರಚಿಸಿದ್ದು, ಮಂಗಳವಾರದAದು ಜಂಟಿ ಕೃಷಿ ನಿರ್ದೇಶಕರ ಕಚೇರಿ ಸಭಾಂಗಣದಲ್ಲಿ ಮೆರವಣಿಗೆ ಸಮಿತಿ ಅಧ್ಯಕ್ಷರಾದ ಜಂಟಿ ಕೃಷಿ ನಿರ್ದೇಶಕರಾದ ರುದ್ರೇಶಪ್ಪ ಟಿ.ಎಸ್.ಅವರ ಅಧ್ಯಕ್ಷತೆಯಲ್ಲಿ ಮೆರವಣಿಗೆಯ ಸಮಿತಿ ಸಭೆ ನಡೆಯಿತು.
ಉತ್ಸವದ ಹಿನ್ನೆಲೆಯಲ್ಲಿ ವಿಶೇಷ ಆಕರ್ಷಣೆಯಾದ ಮೆರವಣಿಗೆ ಹೊರಡುವ ಸ್ಥಳ, ಮೆರವಣಿಗೆಯಲ್ಲಿ ಭಾಗವಹಿಸುವ ಕಲಾ ತಂಡಗಳು, ಮೆರವಣಿಗೆ ಮಾರ್ಗ ಸೇರಿದಂತೆ ನಾನಾ ವಿಷಯಗಳ ಬಗ್ಗೆ ಚರ್ಚಿಸಲಾಯಿತು. ಮೆರವಣಿಗೆಗೆ ಜಾನಪದ ಕಲಾ ತಂಡಗಳ ಆಯ್ಕೆಯು ದೂರುಗಳು ಬಾರದ ಹಾಗೆ ನಡೆಸಬೇಕು. ಮೆರವಣಿಗೆಯಲ್ಲಿ ಶಿಸ್ತು ಕಾಯ್ದುಕೊಳ್ಳಬೇಕು. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಕಲಾ ತಂಡಗಳಿಗೆ ಸಿದ್ಧತೆ ಮಾಡಿಕೊಳ್ಳಲು ಬೇಗನೆ ಮಾಹಿತಿ ನೀಡಬೇಕು ಎಂಬುದು ಸೇರಿದಂತೆ ನಾನಾ ವಿಷಯಗಳ ಬಗ್ಗೆ ಅಧ್ಯಕ್ಷರು ಸಲಹೆ ನೀಡಿದರು.
ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ತಿಪ್ಪಣ್ಣ ಶಿರಸಗಿ, ವಲಯ ಅರಣ್ಯ ಸಂರಕ್ಷಣಾಧಿಕಾರಿಗಳಾದ ಮಾರ್ಕಂಡಯ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೊಟ್ರೇಶ್ ಮರಬನಹಳ್ಳಿ, ಜಿಲ್ಲಾ ವಾರ್ತಾಧಿಕಾರಿಗಳಾದ ಗವಿಸಿದ್ದಪ್ಪ ಹೊಸಮನಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಹಾಗೂ ಗಂಗಾವತಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಉಪಸ್ಥಿತರಿದ್ದರು.

Get real time updates directly on you device, subscribe now.

Comments are closed.

error: Content is protected !!