ಜಿಪಂ ಸಿಇಓ ರಾಹುಲ್ ಪಾಂಡೆಯ ಗ್ರಾಮೀಣ ಪ್ರವಾಸ: ಪ್ರಗತಿ ಪರಿಶೀಲನೆ

Get real time updates directly on you device, subscribe now.

: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ಫೆ.20ರಂದು ಗ್ರಾಮೀಣ ಭಾಗದಲ್ಲಿ ಪ್ರವಾಸ ಕೈಗೊಂಡು ಕುಡಿಯುವ ನೀರು ಸರಬರಾಜು ಸೇರಿದಂತೆ ನಾನಾ ವಿಷಯಗಳ ಬಗ್ಗೆ ಪ್ರಗತಿ ಪರಿಶೀಲನೆ ನಡೆಸಿದರು.
ಮೊದಲಿಗೆ ಇಂದರಗಿ ಗ್ರಾಮದ ಇಂದರಗಿ ತಾಂಡಾಕ್ಕೆ ಭೇಟಿ ನೀಡಿ ಅಲ್ಲಿನ ಮೂರು ಬೋರವೆಲ್‌ಗಳನ್ನು ಪರಿಶೀಲಿಸಿದರು. ಗ್ರಾಮದಿಂದ 5 ಕಿಮೀ ದೂರದಲ್ಲಿ ಹೊಸ ಬೋರವೆಲ್ ಕೊರೆಯಿಸಿದ್ದು, ಅಲ್ಲಿಂದ ಗ್ರಾಮಕ್ಕೆ ನೀರು ಪೂರೈಸುತ್ತಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದರು. ಗ್ರಾಮಸ್ಥರ ಕೋರಿಕೆಯ ಮೇರೆಗೆ 1 ಕಿಮಿ ದೂರದಲ್ಲಿರುವ ಖಾಸಗಿ ಬೋರವೆಲ್ ಮೂಲಕ ಗ್ರಾಮಕ್ಕೆ ನೀರು ಪೂರೈಸಲು ಕ್ರಮ ವಹಿಸಬೇಕು ಎಂದು ಇದೆ ವೇಳೆ ಸಿಇಓ ಅವರು ನಿರ್ದೇಶನ ನೀಡಿದರು. ಕುಡಿಯುವ ನೀರಿಗೆ ತೊಂದರೆಯಾದಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಸಲು ಕ್ರಮ ವಹಿಸಬೇಕು ಎಂದು ಇದೆ ವೇಳೆ ಸಿಇಓ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಳಿಕ ಸಿಇಓ ಅವರು ಹೊಸ ಬಂಡಿಹರ್ಲಾಪುರ ಗ್ರಾಮಕ್ಕೆ ಭೇಟಿ ನೀಡಿದರು. ಗ್ರಾಮದಲ್ಲಿನ ಕುಡಿಯುವ ನೀರಿನ ಪರೀಕ್ಷೆ ನಡೆಸಲು ಸೂಚನೆ ನೀಡಿದರು. ಗ್ರಾಮದ ಶಾಲಾ ಆವರಣದಲ್ಲಿನ ಬೋರವೆಲ್‌ಗೆ ಕ್ರಷಿಂಗ್ ಮಾಡಲು ಸೂಚನೆ ನೀಡಿದರು. ಹೊಸ ಬಂಡಿ ಹರ್ಲಾಪುರ ಗ್ರಾಮದಲ್ಲಿ ಸಹ ಹೊಸ ಖಾಸಗಿ ಬೋರವೆಲ್ ಗುರುತಿಸಿ ನೀರು ಸರಬರಾಜಿನ ವ್ಯವಸ್ಥೆ ಮಾಡಿಸಲು ಸೂಚನೆ ನೀಡಿದರು.
ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿಗೆ ತೊಂದರೆಯಾಗಬಾರದು. ಕಾಲಕಾಲಕ್ಕೆ ಕುಡಿಯುವ ನೀರನ್ನು ಪರೀಕ್ಷೆಗೊಳಪಡಿಸಬೇಕು. ಸಮಸ್ಯೆ ಕಂಡು ಬರುವ ಕಡೆಗೆ ವಿಳಂಬ ಮಾಡದೇ ಖಾಸಗಿ ಬೋರವೆಲ್ ಗುರುತಿಸಿ ಕುಡಿಯುವ ನೀರು ಸರಬರಾಜಿಗೆ ವ್ಯವಸ್ಥೆ ಮಾಡಲು ಗಮನ ಹರಿಸಬೇಕು ಎಂದು ಇದೆ ವೇಳೆ ಸಿಇಓ ಅವರು ಗ್ರಾಮೀಣ ಕುಡಿಯುವ ನೀರು ಸರಬರಾಜು ಹಾಗೂ ನೈರ್ಮಲ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇದೆ ವೇಳೆ ಸಿಇಓ ಅವರು, ಕೊಪ್ಪಳ ತಾಲೂಕಿನ ಮುನಿರಾಬಾದ್ ಡ್ಯಾಂ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಬಹು ಗ್ರಾಮ ಕುಡಿಯುವ ನೀರಿನ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಇನ್ನೀತರ ಕಾಮಗಾರಿ ಪರಿಶೀಲನೆ: ಇಂದಿರಾನಗರ ತಾಂಡಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಗತಿಯಲ್ಲಿರುವ ಅಡುಗೆ ಕೊಠಡಿ, ಶೌಚಾಲಯ ಕಾಮಗಾರಿಯನ್ನು ಸಹ ಸಿಇಓ ಅವರು ಪರಿಶೀಲಿಸಿದರು. ಜಬ್ಬಲಗುಡ್ಡ ಗ್ರಾಮಕ್ಕೆ ಸಹ ಭೇಟಿ ನೀಡಿ, ಶಾಲೆಗೆ ಅವಶ್ಯವಿರುವ ಶೌಚಾಲಯಗಳ ನಿರ್ಮಾಣದ ಬಗ್ಗೆ ಪರಿಶೀಲಿಸಿದರು. ಕುಡಿಯುವ ನೀರಿನ ಸರಬರಾಜಿನ ವ್ಯವಸ್ಥೆಯ ಬಗ್ಗೆ ಗ್ರಾಮಸ್ಥರಿಂದ ಮಾಹಿತಿ ಪಡೆದರು.
ಈ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ದುಂಡಪ್ಪ ತುರಾದಿ, ಗ್ರಾಮೀಣ ಕುಡಿಯುವ ನೀರು ಸರಬರಾಜು ಹಾಗೂ ನೈರ್ಮಲ್ಯ ಇಲಾಖೆಯ ಅಭಿಯಂತರರಾದ ವಿಲಾಸ್ ಬೋಸ್ಲೆ, ಲಕ್ಷಿö್ಮ ರಡ್ಡಿ, ಗ್ರಾಪಂ ಅಭಿವೃದ್ಧಿ ಅಧಿಕಾರಿ ಮಹೇಶ್ ಸಜ್ಜನ, ನಾಗರಾಜ, ಬೂದಗುಂಪಾ ಗ್ರಾ.ಪಂ ಉಪಾಧ್ಯಕ್ಷರಾದ ಶರಣಪ್ಪ ಗುತ್ತೂರು, ರೈತ ಮುಖಂಡರಾದ ಶ್ರೀನಿವಾಸ ಭೋವಿ, ದೇವಪ್ಪ ಹಲಗೇರಿ ಸೇರಿದಂತೆ ಅನೇಕರು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!
%d bloggers like this: