ಕೊಪ್ಪಳ ತಾಲ್ಲೂಕಿನ ವಿವಿಧ ಗ್ರಾ.ಪಂ. ಗಳಿಗೆ ಸಿಇಒ ಭೇಟಿ: ಕೆರೆ, ನೀರಿನ ಕಾಮಗಾರಿಗಳ ಪರಿಶೀಲನೆ

Get real time updates directly on you device, subscribe now.

ಇತ್ತೀಚೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಚರ್ಚಿಸಿದಂತೆ ಜಿಲ್ಲೆಯ ಗ್ರಾಮಗಳಲ್ಲಿ ಬೇಸಿಗೆ ಸಂದರ್ಭದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಾರದಂತೆ ಮುನ್ನೆಚ್ಚರಿಕಾ ಕ್ರಮ ವಹಿಸಲು ನಿರ್ಧರಿಸಿದಂತೆ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ಬುಧವಾರದಂದು ಕವಲೂರು ಹಾಗೂ ನೆಲೋಗಿಪುರ ಗ್ರಾಮಗಳಿಗೆ ಭೇಟಿ ನೀಡಿ, ಕೆರೆಗಳು, ನೀರಿನ ಪೂರೈಕೆ ಕೇಂದ್ರಗಳನ್ನು ಖುದ್ದಾಗಿ ಪರಿಶೀಲಿಸಿದರು.

ಕವಲೂರ ಗ್ರಾಮ ಪಂಚಾಯತನ ವ್ಯಾಪ್ತಿಯಲ್ಲಿ ಬರುವ ಕುಡಿಯುವ ನೀರಿನ ಪರೀಕ್ಷೆ, ನೀರಿನ ತೋಟಿಗಳ ಸ್ವಚ್ಛತೆ ಹಾಗೂ ನೀರಿನ ಮೂಲಗಳಾದ ಕೆರೆಗಳ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಸಿಇಒ ಅವರು ಬೇಸಿಗೆಯಲ್ಲಿ ಯಾವುದೇ ರೀತಿಯ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಎಚ್ಚರಿಕೆ ಕ್ರಮ ವಹಿಸಿ, ಶುದ್ಧ ಕುಡಿಯುವ ನೀರನ್ನು ಗ್ರಾಮಕ್ಕೆ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ನಂತರದಲ್ಲಿ ಬೋಚನಹಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಬರುವ ನೆಲೋಗಿಪುರ ಗ್ರಾಮದಲ್ಲಿ ಇರುವ ಬಹುಗ್ರಾಮ ಕುಡಿಯುವ ನೀರಿನ ಕಾಮಗಾರಿಗೆ ಭೇಟಿ ನೀಡಿ ಕಾಮಗಾರಿಯನ್ನು ಪರಿಶೀಲಿಸಿದರು.
ಈ ಸಂದರ್ಭ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾಮೀಣ ನೀರು ಸರಬರಾಜು ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು, ಜೆ.ಇ., ಸಂಬAಧಿಸಿದ ಗ್ರಾಮ ಪಂಚಾಯತಗಳ ಸಹಾಯಕ ನಿರ್ದೇಶಕರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕವಲೂರ ಮತ್ತು ಬೋಚನಹಳ್ಳಿ ಗ್ರಾ.ಪಂ. ಅಧ್ಯಕ್ಷರು ಉಪಾಧ್ಯಕ್ಷರು, ಗ್ರಾಮಸ್ಥರು ಸೇರಿದಂತೆ ಇತರರು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!