ಫೆ.23 ರಂದು 121ನೇ ತುರ್ತು ನೀರಾವರಿ ಸಲಹಾ ಸಮಿತಿ ಸಭೆ
: ಬೇಸಿಗೆಗೆ ಕುಡಿಯುವ ನೀರನ್ನು ಒದಗಿಸುವ ಕುರಿತು ನಿರ್ಣಯಿಸಲು ತುಂಗಭದ್ರಾ ಯೋಜನೆಯ ಮತ್ತು ವಿಜಯನಗರ ಕಾಲುವೆಗಳ 121ನೇ ತುರ್ತು ನೀರಾವರಿ ಸಲಹಾ ಸಮಿತಿ ಸಭೆಯನ್ನು ಫೆ.23 ರಂದು ಸಂಜೆ 04 ಗಂಟೆಗೆ ಕೊಠಡಿ ಸಂಖ್ಯೆ: 334, ಸಮ್ಮೇಳನ ಸಭಾಂಗಣ, 3ನೇ ಮಹಡಿ, ವಿಧಾನ ಸೌಧ ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ.ಸಭೆಯ ಅಧ್ಯಕ್ಷತೆಯನ್ನು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷರಾದ ಶಿವರಾಜ ಎಸ್.ತಂಗಡಗಿ ಅವರು ಅವರು ವಹಿಸುವರು.
ಆದ್ದರಿಂದ ಸಚಿವರು, ಲೋಕಸಭಾ ಸದಸ್ಯರು, ವಿಧಾನ ಸಭಾ ಸದಸ್ಯರು, ವಿಧಾನ ಪರಿಷತ್ ಸದಸ್ಯರು, ರಾಜ್ಯಸಭಾ ಸದಸ್ಯರು ಹಾಗೂ ನೀರಾವರಿ ಸಲಹಾ ಸಮಿತಿ ಸದಸ್ಯರು ಸಭೆಗೆ ಆಗಮಿಸಿ ತಮ್ಮ ಸಲಹೆ, ಸೂಚನೆಗಳನ್ನು ನೀಡಬೇಕು ಎಂದು ತುಂಗಭದ್ರಾ ಯೋಜನೆಯ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಹಾಗೂ ತುಂಗಭದ್ರಾ ಯೋಜನಾ ವೃತ್ತ ಮುನಿರಾಬಾದನ ಅಧೀಕ್ಷಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ.

Comments are closed.