ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿದ ಅಪರಾಧಿಗೆ 20 ವರ್ಷಗಳ ಜೈಲು ಶಿಕ್ಷೆ
ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ತಲ್ಲೂರು ತಾಂಡಾದ ವಿಜಯಕುಮಾರ ಪೂಜಾರ ಎಂಬ ವ್ಯಕ್ತಿಯ ಮೇಲಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ ನ್ಯಾಯಾಲಯ(ಪೋಕ್ಸೋ) ನ್ಯಾಯಾಧೀಶರಾದ ಕುಮಾರ ಡಿ.ಕೆ ಅವರು ಆರೋಪಿಗೆ 20 ವರ್ಷಗಳ ಜೈಲು ಶಿಕ್ಷೆ ಹಾಗೂ ರೂ. 25,000 ಗಳ ದಂಡವನ್ನು ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ.
ಕೊಪ್ಪಳ ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯ ತಲ್ಲೂರು ತಾಂಡಾದ ನಿವಾಸಿ ವಿಜಯಕುಮಾರ ಪೂಜಾರ ಇತನು ಅಪ್ರಾಪ್ತ ಬಾಲಕಿಯನ್ನು ಪರಿಚಯಿಸಿಕೊಂಡು ಮದುವೆಯಾಗುವುದಾಗಿ ಪುಸಲಾಯಿಸಿ ದಿ. 12-04-2021 ರಂದು ಇರಕಲಗಡದಿಂದ ಉಡುಪಿ ತಾಲ್ಲೂಕಿನ ಕುಕ್ಕೆಹಳ್ಳಿ ಗ್ರಾಮದ ಒಂದು ತೋಟದ ಮನೆಯಲ್ಲಿ ಬಾಲಕಿಗೆ ಅಕ್ರಮ ಬಂಧನದಲ್ಲಿಟ್ಟು ಬಲವಂತವಾಗಿ ಅತ್ಯಾಚಾರ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಕೊಪ್ಪಳ ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ದೂರು ಸ್ವೀಕರಿದ್ದು, ಪಿ.ಎಸ್.ಐ ಯಲ್ಲಪ್ಪ ಹಾಗೂ ಪಿ.ಐ ಮೌನೇಶ್ವರ ಮಾಲಿಪಾಟೀಲ್ ಅವರು ಈ ಪ್ರಕರಣದ ತನಿಖೆಯನ್ನು ನಡೆಸಿ ಆರೋಪಿತನ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.
ಈ ಪ್ರಕರಣವು ಸ್ಪೇ.ಎಸ್.ಸಿ (ಪೋಕ್ಸೋ) ಸಂ: 12/2021 ರಲ್ಲಿ ದಾಖಲಾಗಿದ್ದು, ವಿಚಾರಣೆಯನ್ನು ನಡೆಸಿದ ನ್ಯಾಯಾಲಯವು ಆರೋಪಿ ಮೇಲಿನ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಜೈಲು ಶಿಕ್ಷೆ ಹಾಗೂ ರೂ. 25,000 ಗಳ ದಂಡವನ್ನು ವಿಧಿಸಿ ತೀರ್ಪು ನೀಡಿದೆ. ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ(ಪೋಕ್ಸೋ) ಗೌರಮ್ಮ ದೇಸಾಯಿ ಅವರು ವಾದ ಮಂಡಿಸಿದ್ದರು ಎಂದು ನ್ಯಾಯಾಲಯದ ಪ್ರಕಟಣೆ ತಿಳಿಸಿದೆ.

Comments are closed.