ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಅವರಿಗೆ ಎಂ.ಎಲ್.ಸಿ ಸ್ಥಾನವನ್ನು ನೀಡಿ- ಸಲೀಂ ಅಳವಂಡಿ
ಕೊಪ್ಪಳ : ಕಲ್ಯಾಣ ಕರ್ನಾಟಕದ ಮಾಜಿ ಸಚಿವರು ಹಾಗೂ ಅಲ್ಪಸಂಖ್ಯಾತ ಸಮುದಾಯದ ಪ್ರಭಾವಿ ನಾಯಕರಾದ ಇಕ್ಬಾಲ್ ಅನ್ಸಾರಿ ಅವರಿಗೆ ಎಂ.ಎಲ್.ಸಿ. ಸ್ಥಾನವನ್ನು ನೀಡಬೇಕೆಂದು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಸಲೀಂ ಅಳವಂಡಿ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದರೆ.
ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಅವರು
ಇಕ್ಸಾಲ್ ಅನ್ಸಾರಿ ಅವರು ಒಬ್ಬ ಜಾತ್ಯತೀತ ಹಾಗೂ ದಕ್ಷ ಆಡಳಿತಗಾರರಾಗಿದ್ದು ತಮ್ಮ ಅಧಿಕಾರದ ಅವಧಿಯಲ್ಲಿ ಗಂಗಾವತಿ ವಿಧಾನಸಭಾ ಕ್ಷೇತ್ರಕ್ಕೆ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದು, ಸಚಿವರಿದ್ದಾಗಲೂ ರಾಜ್ಯದ ಜನತೆಗೆ ಉತ್ತಮ ಯೋಜನೆಗಳ ಮೂಲಕ ಸಾಕಷ್ಟು ಕೊಡುಗೆಗಳನ್ನು ನೀಡಿದ್ದಾರೆ. ಕಾಂಗ್ರೇಸ್ ಡಿಜಿಟಲ್ ಸದಸ್ಯತ್ವ ಅಭಿಯಾನದ ಸಂಧರ್ಭದಲ್ಲಿ ರಾಜ್ಯದಲ್ಲೇಯೇ ಅತಿ ಹೆಚ್ಚು ಸದಸ್ಯರನ್ನು ನೊಂದಣಿ ಮಾಡುವ ಮೂಲಕ ಕೆ.ಪಿ.ಸಿ.ಸಿ. ರಾಜ್ಯಾಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಅವರು ಅಭಿನಂದನೆಗಳನ್ನು ಸಲ್ಲಿಸಿದ್ದರು.ಆದರೆ ಕಳೆದ 2023 ರ ವಿಧಾನಸಭಾ ಚುನಾವಣೆಯಲ್ಲಿ ಕೆಲವೇ ಮತಗಳ ಅಂತರದಲ್ಲಿ ಸೋತಿದ್ದಾರೆ.
ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದ ಭಾಗವಾದ ಗಂಗಾವತಿ ವಿಧಾನಸಭಾ ಕ್ಷೇತ್ರದಿಂದ ಅನುಭವಿ ಅಲ್ಪಸಂಖ್ಯಾತ ನಾಯಕರಾದಂತಹ ಇಕ್ಬಾಲ್ ಅನ್ಸಾರಿ ಅವರಿಗೆ ಎಂ.ಎಲ್.ಸಿ. ಸ್ಥಾನವನ್ನು ನೀಡಬೇಕೆಂದು ಈ ಮೂಲಕ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಹಾಗೂ ಪಕ್ಷದ ವರಿಷ್ಟರನ್ನು ಒತ್ತಾಯಿಸಿದರು. ಪತ್ರಿಕಾ ಗೋಷ್ಠಿಯಲ್ಲಿ ಹುಸೇನ್ ಮನಿಯಾರ್ ಉಪಸ್ಥಿತರಿದ್ದರು.
Comments are closed.