ರಾಗಿ ಮಾಲ್ಟ್ ಯೋಜನೆಗೆ ಡಿಡಿಪಿಐ ಅವರಿಂದ ಚಾಲನೆ

Get real time updates directly on you device, subscribe now.


ಕೊಪ್ಪಳ: ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತೆಯ ಇಲಾಖೆಯ ಸಂಯುಕ್ತಾಶ್ರಯದಲ್ಲಿ ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಯಲ್ಲಿ ಅಭ್ಯಾಸ ಮಾಡುವ ವಿದ್ಯಾರ್ಥಿಗಳಿಗೆ ಹಾಲಿನ ಜೊತೆಯಲ್ಲಿ ರಾಗಿ ಮಾಲ್ಟ್ ನೀಡುವ ಯೋಜನೆಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕರಾದ ಎಸ್.ಎಸ್,ಬಿರಾದರ ಅವರು ನಗರದ ಸಿ.ಪಿ.ಎಸ್.ಶಾಲೆಯಲ್ಲಿ ಚಾಲನೆ ನೀಡಿದರು.
ಈ ಸಮಯದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತೆಯ ಇಲಾಖೆಯ ಉಪನಿರ್ದೇಶಕರಾದ ಎಸ್.ಎಸ್.ಬಿರಾದರ ಮಾತನಾಡಿ, ಸರ್ಕಾರಿ ಮತ್ತು ಅನುದಾನಿತ ಶಾಲೆಯಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಈಗಾಗಲೇ ಮಧ್ಯಾಹ್ನನದ ಬಿಸಿಯೂಟದ ಜೊತೆಯಲ್ಲಿ ವಾರದಲ್ಲಿ ೫ ದಿನ ಕ್ಷೀರಭಾಗ್ಯ ಯೋಜನೆಯ ಅಡಿಯಲ್ಲಿ ಹಾಲು ನೀಡಲಾಗುತ್ತಿದೆ.ಅದರ ಜೊತೆಯಲ್ಲಿ ಇಂದಿನಿಂದ ರಾಗಿ ಮಾಲ್ಟ್ ನೀಡುವ ಯೋಜನೆಯು ಜಾರಿಗೆಯಾಗಿದೆ.ಮಕ್ಕಳಲ್ಲಿ ಇರುವ ಅಪೌಷ್ಟಿಕತೆಯನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಇದು ಸಹಾಯಕವಾದ ಯೋಜನೆಯಾಗಿದೆ.ಪ್ರತಿಯೊಬ್ಬ ವಿಧ್ಯಾರ್ಥಿಗಳು ಸರಿಯಾದ ರೀತಿಯಲ್ಲಿ ಸರಕಾರದ ಯೋಜನೆಯನ್ನು ಬಳಿಸಿಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದ ಕುರಿತು ಅಕ್ಷರ ದಾಸೋಹ ಜಿಲ್ಲಾ ಅಧಿಕಾರಿಗಳಾದ ಅನಿತಾ ಅವರು ಪ್ರಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯೋಪಾಧ್ಯಾಯರಾದ ಎಂ.ಡಿ.ಗುಲಾಮಹುಸೇನ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶಂಕ್ರಯ್ಯಾ.ಟಿ.ಎಸ್,ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ,ತಾಲೂಕ ಪಂಚಾಯತ ಅಧಿಕಾರಿಗಳಾದ ಮಹೇಶ,ಕ್ಷೇತ್ರ ಸಮ್ವಯಾಧಿಕಾರಿಗಳಾದ ಪ್ರಕಾಶ ತಗಡಿನಮನಿ,ತಾಲೂಕ ಅಕ್ಷರ ದಾಸೋಹ ಅಧಿಕಾರಿಗಳಾದ ಹನುಮಂತಪ್ಪ,ದೈಹಿಕ ಶಿಕ್ಷಣಾಧಿಕಾರಿಗಳಾದ ಬಸವರಾಜ,ಶಿಕ್ಷಣ ಸಂಯೋಜಕರಾದ ಬೀಮಪ್ಪ ಹೂಗಾರ ಮುಂತಾದವರು ಹಾಜರಿದ್ದರು.
ಕಾರ್ಯಕ್ರಮವನ್ನು ಶಿಕ್ಷಕರಾದ ಮೊಹಮ್ಮದ ಆಭೀದಹುಸೇನ ಅತ್ತಾರ ನಿರೂಪಿಸಿದರು.
ಶಿಕ್ಷಕರಾದ ವಿರುಪಾಕ್ಷಪ್ಪ ಬಾಗೋಡಿ ಸ್ವಾಗತಿಸಿ,ನಾಗಪ್ಪ ನರಿ ವಂದಿಸಿದರು.

Get real time updates directly on you device, subscribe now.

Comments are closed.

error: Content is protected !!