ಕನಕಗಿರಿ ಉತ್ಸವ-2024 ಎಲ್ಲಾ ಸಮಿತಿಗಳು ತಮ್ಮ ಕರ್ತವ್ಯಗಳನ್ನು ಜವಾಬ್ದಾರಿಯುತವಾಗಿ ನಿರ್ವಹಿಸಬೇಕು-ನಲಿನ್ ಅತುಲ್

Get real time updates directly on you device, subscribe now.

  ಕನಕಗಿರಿ ಉತ್ಸವದ ಸಿದ್ಧತೆಗೆ ಎಲ್ಲಾ ಸಮಿತಿಗಳಿಗೆ ವಹಿಸಿದ ಕಾರ್ಯ ನಿರ್ವಹಣೆಯನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಲು ವಿಶೇಷ ಒತ್ತು ಕೊಡಬೇಕು ಎಂದು ಕನಕಗಿರಿ ಉತ್ಸವ ಸಮಿತಿ ಅಧ್ಯಕ್ಷರು ಆಗಿರುವ ಕೊಪ್ಪಳ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಹೇಳಿದರು.
ಕನಕಗಿರಿ ಉತ್ಸವ-2024ರ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಫೆಬ್ರವರಿ 22ರಂದು ಹಮ್ಮಿಕೊಂಡಿದ್ದ ಮತ್ತೊಂದು ಸುತ್ತಿನ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕನಕಗಿರಿ ಉತ್ಸವ-2024 ಅನ್ನು ಅದ್ದೂರಿಯಾಗಿ ಆಚರಿಸಲು ಸರ್ಕಾರ ನಿರ್ಧರಿಸಿದ್ದು, ಕಾರ್ಯಕ್ರಮದ ವ್ಯವಸ್ಥಿತ ನಿರ್ವಹಣೆಗಾಗಿ ರಚಿಸಲ್ಪಟ್ಟ ಎಲ್ಲಾ ಸಮಿತಿಗಳು ತಮ್ಮ ಕರ್ತವ್ಯಗಳನ್ನು ಜವಾಬ್ದಾರಿಯುತವಾಗಿ ನಿರ್ವಹಿಸಬೇಕು. ಈ ಉತ್ಸವ ಆಚರಣೆ ಸಂದರ್ಭದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಲಿ. ಕನಕಗಿರಿಯಲ್ಲಿ ಸರ್ಕಾರಿ ಕಟ್ಟಡಗಳು, ಗ್ರಂಥಾಲಯ, ಶಾಲಾ ಕಟ್ಟಡಗಳು ಮತ್ತು ಉತ್ಸವದ ಮೆರವಣಿಗೆ ಸಾಗಿ ಬರುವ ರಸ್ತೆ ಹಾಗೂ ಪ್ರಮುಖ ವೃತ್ತಗಳು ವಿದ್ಯುತ್ ದೀಪಾಲಂಕಾರದಿAದ ಕಂಗೊಳಿಸಬೇಕು. ಈ ಹಿನ್ನೆಲೆಯಲ್ಲಿ ಎಲ್ಲಾ ಸಮಿತಿಗಳು ಹಾಗೂ ಸಂಬAಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ಕನಕಗಿರಿ ಉತ್ಸವದ ಅಂಗವಾಗಿ ಮೆರವಣಿಗೆ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಚಿತ್ರಕಲಾ ಸ್ಪರ್ಧೆ, ರಂಗೋಲಿ ಸ್ಪರ್ಧೆ, ಸೈಕಲ್ ಜಾಥಾ, ಮ್ಯಾರಾಥಾನ್, ದೇಸೀ ಕ್ರೀಡೆಗಳು, ಸ್ಥಳೀಯ ಸಾಂಪ್ರದಾಯಿಕ ಕ್ರೀಡೆಗಳು ಹಾಗೂ ವಿಭಿನ್ನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಯೋಜನೆ ರೂಪಿಸಲಾಗಿದ್ದು, ಎಲ್ಲಾ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ಹಮ್ಮಿಕೊಳ್ಳುವುದರ ಜೊತೆಗೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅರಿವು ಮೂಡಿಸಲು ಆಯಾ ಸಮಿತಿಗಳು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ಮಾತನಾಡಿ, ಕನಕಗಿರಿ ಉತ್ಸವ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರ ಪ್ರಯಾಣಕ್ಕೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಿ. ಕಾರ್ಯಕ್ರಮಕ್ಕೆ ಆಗಮಿಸುವ ಗಣ್ಯರು, ಕಲಾವಿಧರಿಗೆ ಅಗತ್ಯ ವಸತಿ ಸೇರಿದಂತೆ ಎಲ್ಲರಿಗೂ ಅಗತ್ಯ ಕುಡಿಯುವ ನೀರು, ಊಟದ ವ್ಯವಸ್ಥೆ ಕಲ್ಪಿಸಬೇಕು. ಕಾರ್ಯಕ್ರಮದ ಯಶಸ್ವಿಯಾಗಿ ಎಲ್ಲಾ ಅಧಿಕಾರಿಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಕೆ ಸಹಾಯಕ ನಿರ್ದೇಶಕರಾದ ವಿಠ್ಠಲ್ ಜಾಬಗೌಡ್ರ ಅವರು ಮಾತನಾಡಿ, ಕನಕಗಿರಿ ಉತ್ಸವ ಅಂಗವಾಗಿ ಕುಸ್ತಿ, ಹಗ್ಗ ಜಗ್ಗಾಟ, ಕಬಡ್ಡಿ ಸೇರಿದಂತೆ ವಿವಿಧ ಗ್ರಾಮೀಣ ಕ್ರೀಡೆಗಳೊಂದಿಗೆ ವಾಲಿಬಾಲ್ ನಂತಹ ಕ್ರೀಡೆಗಳು ಹಮ್ಮಿಕೊಂಡಿದ್ದು, ವಾಲಿವಾಲ್ ಪ್ರದರ್ಶನ ಪಂದ್ಯಾವಳಿಯಲ್ಲಿ ಚೆನ್ನೆöÊ ತಂಡ ಪಾಲ್ಗೊಳ್ಳಲಿದೆ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ.ಕಡಿ, ಸಹಾಯಕ ಆಯುಕ್ತರಾದ ಕ್ಯಾ.ಮಹೇಶ್ ಮಾಲಗಿತ್ತಿ, ಜಿ.ಪಂ ಉಪಕಾರ್ಯದರ್ಶಿಗಳಾದ ಮಲ್ಲಿಕಾರ್ಜಿನ ತೊದಲಬಾಗಿ, ಜಂಟಿ ಕೃಷಿ ನಿರ್ದೇಶಕರಾದ ರುದ್ರೇಶಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೊಟ್ರೇಶ್ ಮರಬನಳ್ಳಿ ಸೇರಿದಂತೆ ಎಲ್ಲ ಸಮಿತಿಗಳ ಅಧ್ಯಕ್ಷರು, ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು, ತಹಶೀಲ್ದಾರರು ಉಪಸ್ಥಿತರಿದ್ದರು.

Get real time updates directly on you device, subscribe now.

Comments are closed.

error: Content is protected !!