ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಕೆಯುಡಬ್ಲ್ಯೂಜೆ ಧನ್ಯವಾದ
ಬೆಂಗಳೂರು:
ರಾಜ್ಯ ಬಜೆಟ್ ನಲ್ಲಿ ರಾಜ್ಯದ ಪತ್ರಕರ್ತರಿಗೆ ಉಚಿತ ಗ್ರಾಮೀಣ ಬಸ್
ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರನ್ನು ವಿಧಾನಸೌಧದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ)ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಸನ್ಮಾನಿಸಿ, ಧನ್ಯವಾದ ತಿಳಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ,
ಬೆಂಗಳೂರು ನಗರ ಜಿಲ್ಲಾ ಘಟಕದ
ಪ್ರಧಾನ ಕಾರ್ಯದರ್ಶಿ ನರೇಂದ್ರ ಪಾರೆಕಟ್,
ಜಿಲ್ಲಾ ಘಟಕದ ಉಪಾಧ್ಯಕ್ಷರಾದ
ಕೆ.ಎಂ. ಜಿಕ್ರಿಯಾ ಉಪಸ್ಥಿತರಿದ್ದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ದಾವಣಗೆರೆಯಲ್ಲಿ ಹಮ್ಮಿಕೊಂಡಿದ್ದ 38 ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿಯವರು ಕೆಯುಡಬ್ಲ್ಯೂಜೆ ಬೇಡಿಕೆಗೆ ಸ್ಪಂದಿಸಿ ಭರವಸೆ ನೀಡಿದ್ದರು.
ಅದರಂತೆ ಮುಖ್ಯಮಂತ್ರಿಯವರು ಮಂಡಿಸಲಿರುವ ಬಜೆಟ್ ನಲ್ಲಿ ಅದಕ್ಕೆ ಶಿಫಾರಸು ಮಾಡುವುದಾಗಿ ಅಂದು ಸಾರಿಗೆ ಸಚಿವರು ಸಂಘದ ಪದಾಧಿಕಾರಿಗಳಿಗೆ ಭರವಸೆಯನ್ನು ನೀಡಿದ್ದನ್ನು ಸ್ಮರಿಸಬಹುದು. ಸನ್ಮಾನ ಸಂದರ್ಭದಲ್ಲಿಯೂ ಸಚಿವರು ಅಂದಿನ ಘಟನೆ ಮತ್ತು ಬೇಡಿಕೆ ಈಡೇರಿದ ಸಂದರ್ಭವನ್ನು ಮೆಲುಕು ಹಾಕಿದರು.
Comments are closed.