ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ
Koppal
ರಾಜ್ಯದ ಕಳೆದ ಒಂಭತ್ತು ತಿಂಗಳಲ್ಲಿ ಕಾಂಗ್ರೆಸ್ ಆಡಳಿತವು ದಲಿತ ಸಮುದಾಯದ ವಿಚಾರದಲ್ಲಿ ಕೇವಲ ಮಾತಿನಲ್ಲಿ ಮಾತ್ರ ಕಾಳಜಿಯನ್ನು ತೋರಿ ದಲಿತ ಸಮುದಾಯವನ್ನು ವಂಚಿಸುತ್ತಿದ್ದಾರೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ನವೀನ್ ಗುಲಗಣ್ಣವರ್ ಆಕ್ರೋಶ ವ್ಯಕ್ತಪಡಿಸಿದರು
ಕೊಪ್ಪಳದ ಬಸವೇಶ್ವರ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ನವೀನ್ ಗುಳ್ಗಣ್ಣವರ್ ಚುನಾವಣೆಯಲ್ಲಿ ತಮ್ಮ ಗೆಲ್ಲುವಿನ ಸಲುವಾಗಿ ದಲಿತರಿಗೆ ಮೀಸಲಿಟ್ಟಿದ್ದ ₹ 11,144 SCSP/TSP ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಲು ವರ್ಗಾಯಿಸಿ ದಲಿತ ಹಿ ತವನ್ನು ಬಲಿಕೊಟ್ಟು ತಮ್ಮ ಸ್ವಾರ್ಥ ಸಾಧನೆ ಪೂರೈಸಿಕೊಂಡು ಇವರ ಡೋಂಗಿ ದಲಿತ ಕಾಳಜಿಯನ್ನು ಬಯಲು ಮಾಡಿದ್ದಾರೆ. ದಲಿತರ ಹಿತದ ರಕ್ಷಣೆ ಮಾಡಬೇಕಿದ್ದ ಸಮಾಜಕಲ್ಯಾಣ ಸಚಿವ ಹೆಚ್. ಸಿ. ಮಹದೇವಪ್ಪನವರು ಈ ಅನ್ಯಾಯದ ವಿರುದ್ಧ ಸೊಲ್ಲೆತ್ತದೆ ಕಾಂಗ್ರೆಸ್ ಪಾರ್ಟಿಯ ಹಿತಕ್ಕೆ ದಲಿತ ಸಮುದಾಯದ ಹಿತವನ್ನು ರಾಜಿ ಮಾಡಿಕೊಂಡಿದ್ದಾರೆ.
ಸಿದ್ದರಾಮಯ್ಯನವರು ಅಲ್ಪಸಂಖ್ಯಾತರಿಗೆ ₹10,000 ಕೋಟಿ ಹಣವನ್ನು ವೆಚ್ಚ ಮಾಡಲು ಮಾತ್ರ ಯಾವ ಗ್ಯಾರಂಟಿಯೂ ಅಡ್ಡ ಬಂದಿಲ್ಲ. ಇವರಿಗೆ ದಲಿತರ ಹಿತಾಸಕ್ತಿಗಿಂತ ಓಟು ಬ್ಯಾಂಕ್ ರಾಜಕಾರಣವು ಸರ್ಕಾರಕ್ಕೆ ಆದ್ಯತೆಯಾಗಿರುವುದು ಶೋಚನೀಯ ಸಂಗತಿ.
ಮೊರಾರ್ಜಿ ಶಾಲೆಯ ಅಭಿವೃದ್ಧಿ ಮತ್ತು ಹೊಸ ಶಾಲೆಗಳ ಆರಂಭಕ್ಕೆ ಮೀಸಲಾದ ಹಣವು ಇತರ ಯೋಜನೆಗಳಿಗೆ ಬಳಕೆಯಾಗಿ ದಲಿತ ಮತ್ತು ಹಿಂದುಳಿದ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚಲ್ಲಾಟವಾಡುತ್ತಿದ್ದಾರೆ.
ಇದಲ್ಲದೆ ದಲಿತ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಮೀಸಲಿಟ್ಟ ಹಣವು ಕೂಡಾ ದುರ್ಬಳಕೆಯಾಗಿ ಉನ್ನತ ಶಿಕ್ಷಣದಿಂದ ದಲಿತ ವಿದ್ಯಾರ್ಥಿಗಳನ್ನು ವಂಚಿತರನ್ನಾಗಿ ಮಾಡಲಾಗುತ್ತಿದೆ. ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಯ ಸಲುವಾಗಿ ಶಿಕ್ಷಣವನ್ನು ನಿರ್ಲಕ್ಷಿಸುತ್ತಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ವಿಭಾಗ ಸಹ ಪ್ರಭಾರಿ ಗಳಾದ ಚಂದ್ರಶೇಖರ್ ಹಲಗೇರಿ, ಜಿಲ್ಲಾ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರಮೇಶ ನಾಡಿಗೇರ, ಸುನಿಲ ಹೇಸರೂರ, ಶಿವು ಅರಕೇರಿ, ಖಜಾಂಚಿ ನರಸಿಂಗ ರಾವ್ ಕುಲಕರಣಿ, ಮುಖಂಡರಾದ ಶ್ರೀಮತಿ ಮಂಜುಳಾ ಕರಡಿ, ಕನಕಮೂರ್ತಿ ಛಲವಾದಿ,ಗಣೇಶ ಹೊರತಟ್ನಾಳ , ಲಕ್ಷ್ಮಣ ಕಾಳಿ, ಶ್ರೀಮತಿ ಮಹಾಲಕ್ಷ್ಮಿ ಕಂದಾರಿ, ಪ್ರದೀಪ ಹಿಟ್ನಾಳ, ವಿರೇಶ ಸಜ್ಜನ,ಮಹಾತೇಶ ಪಾಟೀಲ್, ಮಂಜುನಾಥ್ ಪಾಟೀಲ್, ಮಂಜುನಾಥ ಮುಸಲಾಪುರ, ಸೇರಿದಂತೆ ಪಕ್ಷದ ಪದಾಧಿಕಾರಿಗಳು ಎಸ್ ಸಿ ಮೋರ್ಚಾದ ಪದಾಧಿಕಾರಿಗಳು ಪ್ರಮುಖರು ಪಾಲ್ಗೊಂಡಿದ್ದರು
Comments are closed.