ಪೊಲೀಸ್ ನೇಮಕಾತಿಗೆ ಮಧ್ಯವರ್ತಿಗಳ ನಂಬದಂತೆ ಎಸ್‌ಪಿ ಸೂಚನೆ
ಕೊಪ್ಪಳ ಜಿಲ್ಲಾ ಪೊಲೀಸ್ ಘಟಕದಲ್ಲಿ ಖಾಲಿ ಇರುವ ಸಿಪಿಸಿ/ಮಪಿಸಿ ಹುದ್ದೆಗಳ ನೇಮಕಾತಿ ಕುರಿತು ಮಾರ್ಚ್ ೦೪ ರಂದು ದೇಹದಾರ್ಢ್ಯತೆ ಮತ್ತು ಸಹಿಷ್ಣುತೆ ಪರೀಕ್ಷೆಗೆ ಹಾಜರಾಗಲಿರುವ ಅಭ್ಯರ್ಥಿಗಳು ಯಾವುದೇ ಆಮೀಷ, ಮಧ್ಯವರ್ತಿಗಳ ಭರವಸೆಗಳನ್ನು ನಂಬದೆ ಸ್ವಯಂ ಆತ್ಮ ವಿಶ್ವಾಸದಿಂದ ಪರೀಕ್ಷೆಗೆ ಹಾಜರಾಗುವಂತೆ ಯಶೋಧಾ ವಂಟಗೋಡಿ ಅವರು ತಿಳಿಸಿದ್ದಾರೆ.
ಪೊಲೀಸ್ ನೇಮಕಾತಿಯು ಪಾರದರ್ಶಕ, ಗಣಕೀಕೃತ, ಸಂಪೂರ್ಣ ವಸ್ತುನಿಷ್ಠ, ಅರ್ಹತೆ ಮತ್ತು ಮೀಸಲಾತಿ ಆಧಾರದ ಮೇಲೆ ನಡೆಯುತ್ತದೆ. ಯಾವುದೇ ಅಭ್ಯರ್ಥಿಯು ಇಲಾಖೆಯ ಹೊರಗಾಗಲಿ ಅಥವಾ ಒಳಗಾಗಲೀ ಉದ್ಯೋಗ ಪಡೆಯುವ ಸಲುವಾಗಿ ಯಾವುದೇ ವ್ಯಕ್ತಿಗೆ ಹಣ ನೀಡುವುದು ಅಥವಾ ಯಾವುದೇ ವಿಧವಾದ ಪಾರತೋಷಕ ನೀಡುವುದು ಮಾಡಬಾರದು. ಯಾವುದೇ ವಿಧವಾದ ಹಣ ವಸೂಲಾತಿಗೆ ಯಾರಿಗೂ ಅಧಿಕಾರ ನೀಡಿರುವುದಿಲ್ಲ. ಈ ದಿಶೆಯಲ್ಲಿ ಮಧ್ಯವರ್ತಿಗಳ ಭರವಸೆಗಳಿಗೆ ಮಾರು ಹೋಗಬಾರದೆಂದು ಎಸ್‌ಪಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾರ್ಚ್ ೦೪ ರಂದು ದೇಹದಾರ್ಢ್ಯತೆ ಮತ್ತು ಸಹಿಷ್ಣುತೆ ಪರೀಕ್ಷೆ
ಕೊಪ್ಪಳ ಜಿಲ್ಲಾ ಪೊಲೀಸ್ ಘಟಕದಲ್ಲಿ ಖಾಲಿ ಇರುವ ಸಿಪಿಸಿ/ಮಪಿಸಿ (ಕೆಕೆ) ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಲಿಖಿತ ಪರೀಕ್ಷೆಯಲ್ಲಿ ಅರ್ಹತೆ ಹೊಂದಿದ ಅಭ್ಯರ್ಥಿಗಳಿಗೆ ೧:೫ ಅನುಪಾತದ ಅನುಸಾರ ಮುಂದಿನ ದೇಹದಾರ್ಢ್ಯತೆ ಮತ್ತು ಸಹಿಷ್ಣುತೆ ಪರೀಕ್ಷೆಯನ್ನು ಮಾರ್ಚ್ ೦೪ ರಂದು ಕೊಪ್ಪಳ ನಗರದ ಗದಗ ರಸ್ತೆಯಲ್ಲಿರುವ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಸಲಾಗುವುದು.
೨೦೨೨-೨೩ನೇ ಸಾಲಿನ ಕಲ್ಯಾಣ ಕರ್ನಾಟಕ ಪ್ರದೇಶದ ಪೊಲೀಸ್ ಕಾನ್ಸ್ಟೇಬಲ್ (ಪುರುಷ ಮತ್ತು ಮಹಿಳಾ) (ತೃತೀಯಲಿಂಗ ಪುರುಷ ಮತ್ತು ಮಹಿಳಾ) ಹಾಗೂ (ಸೇವಾನಿರತ ಮತ್ತು ಬ್ಯಾಕ್‌ಲಾಗ್)-೪೫೪ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಡಿಸೆಂಬರ್ ೧೦ ರಂದು ಲಿಖಿತ ಪರೀಕ್ಷೆಯನ್ನು ನಡೆಸಲಾಗಿದ್ದು, ಲಿಖಿತ ಪರೀಕ್ಷೆಯಲ್ಲಿ ಅರ್ಹತೆ ಹೊಂದಿದ ಅಭ್ಯರ್ಥಿಗಳಿಗೆ ಮಾರ್ಚ್ ೦೪ ರಂದು ಬೆಳಿಗ್ಗೆ ೦೬ ಗಂಟೆಯಿಂದ ದೇಹದಾರ್ಢ್ಯತೆ ಮತ್ತು ಸಹಿಷ್ಣುತೆ ಪರೀಕ್ಷೆಯನ್ನು ನಡೆಸಲಾಗುತ್ತದೆ.
ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಕರೆಪತ್ರಗಳನ್ನು ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ಸೈಟ್ ತಿತಿತಿ.ಞsಠಿ.gov.iಟಿ ಅಥವಾ ತಿತಿತಿ.ಡಿeಛಿಡಿuiಣmeಟಿಣ.ಞsಠಿ.gov.iಟಿ ಗೆ ಭೇಟಿ ನೀಡಿ ಡೌನ್‌ಲೋಡ್ ಮಾಡಿಕೊಳ್ಳಬಹುದು. ಕರೆಪತ್ರವನ್ನು ಪಡೆಯದೇ ಪರೀಕ್ಷೆಗೆ ಹಾಜರಾದಲ್ಲಿ ಅಂತಹವರಿಗೆ ದೈಹಿಕ ಪರೀಕ್ಷೆಯಲ್ಲಿ ಭಾಗವಹಿಸಲು ಅವಕಾಶ ನೀಡಲಾಗುವುದಿಲ್ಲ. ದೈಹಿಕ ಪರೀಕ್ಷೆಗೆ ಬರುವಾಗ ಕರೆ ಪತ್ರದ ಜೊತೆಗೆ ಕರೆ ಪತ್ರದಲ್ಲಿ ನಮೂದಿಸಿದ ಎಲ್ಲಾ ದಾಖಲಾತಿಗಳನ್ನು ಹಾಜರುಪಡಿಸಬೇಕು. ಆನ್‌ಲೈನ್ ಮುಖಾಂತರ ಸಲ್ಲಿಸಿದ ಅರ್ಜಿಯ ಝರಾಕ್ಸ್ ಪ್ರತಿ, ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಹಾಜರುಪಡಿಸಬೇಕು. ತಪ್ಪಿದಲ್ಲಿ ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಲಾಗುವುದಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.