ಗಂಗಾವತಿಯ ಶ್ರೀರಾಮುಲು ಮಹಾವಿದ್ಯಾಲಯದ ಹಳೆ ವಿದ್ಯಾರ್ಥಿಗಳ ಸಭೆ

Get real time updates directly on you device, subscribe now.

ಗಂಗಾವತಿ: ಕಲ್ಯಾಣ ಕರ್ನಾಟಕದ ಭಾಗದಲ್ಲಿಯೇ ಪ್ರತಿಷ್ಠಿತ ವಿದ್ಯಾಸಂಸ್ಥೆಯಾಗಿರುವ ಗಂಗಾವತಿಯ ಸರಸ್ವತಿಗಿರಿಯಲ್ಲಿರುವ ಶ್ರೀರಾಮುಲು ಮಹಾವಿದ್ಯಾಲಯದ ಹಳೆಯ ವಿದ್ಯಾರ್ಥಿಗಳ ಸಂಘದ ಮಹತ್ವದ ಸಭೆಯು ದಿನಾಂಕ: ೨೭.೦೬.೨೦೨೩ ಮಂಗಳವಾರದಂದು ಬೆಳಿಗ್ಗೆ ೧೧ ಗಂಟೆಗೆ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ ಎಂದು ಹಳೆಯ ವಿದ್ಯಾರ್ಥಿಗಳ ಸಂಘದ ಸಂಸ್ಥಾಪಕ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಎನ್.ಜಿ ಕಾರಟಗಿ ಅವರು ತಿಳಿಸಿದ್ದಾರೆ.
ಕಾಲೇಜು ಪ್ರಾರಂಭವಾಗಿ ಐವತ್ತು ವ?ಗಳು ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಅದ್ದೂರಿ ಕಾರ್ಯಕ್ರಮ ನಡೆಸಲು ಚಿಂತನೆ ಮಾಡಲಾಗಿದ್ದು, ಕಾಲೇಜಿನಲ್ಲಿ ಅಭ್ಯಾಸ ಮಾಡಿರುವ ಎಲ್ಲಾ ಹಳೆಯ ವಿದ್ಯಾರ್ಥಿಗಳ ಸಲಹೆ ಮತ್ತು ಸಹಕಾರದಿಂದ ಕಾರ್ಯಕ್ರಮವನ್ನು ವಿಭಿನ್ನವಾಗಿ ಆಯೋಜಿಸಲು ಚರ್ಚೆ ನಡೆಸಲಾಗುವುದು. ಆದ್ದರಿಂದ ದಿನಾಂಕ: ೨೭.೦೬.೨೦೨೩ ಮಂಗಳವಾರ ನಡೆಯುವ ಸಭೆಗೆ ಎಲ್ಲ ಹಳೆಯ ವಿದ್ಯಾರ್ಥಿಗಳು ಭಾಗವಹಿಸಿ ಸಭೆಯನ್ನು ಯಶಸ್ವಿಗೊಳಿಸಬೇಕೆಂದು ಹಳೆ ವಿದ್ಯಾರ್ಥಿಗಳ ಸಂಘದ ಸಂಸ್ಥಾಪಕ ಅಧ್ಯಕ್ಷರಾದ   ಎನ್.ಜಿ ಕಾರಟಗಿ ಅವರು ಮನವಿ ಮಾಡಿದ್ದಾರೆ.

Get real time updates directly on you device, subscribe now.

Comments are closed.

error: Content is protected !!
%d bloggers like this: