ರಾಜ್ಯಮಟ್ಟದ ಸಂಗ್ರಾಣಿ ಕಲ್ಲು ಎತ್ತುವ ಸ್ಪರ್ಧೆ: ವೀರಾಪುರ ವೆಂಕೊಬ ಪ್ರಥಮ ಸ್ಥಾನ

Get real time updates directly on you device, subscribe now.

): ಕನಕಗಿರಿ ಉತ್ಸವ-2024ರ ಅಂಗವಾಗಿ ಕನಕಗಿರಿಯ ಕರ್ನಾಟಕ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ಗುರುವಾರ ಆಯೋಜಿಸಲಾಗಿದ್ದ ಸಂಗ್ರಾಣಿ ಕಲ್ಲು ಎತ್ತುವ ದೇಶಿಕ್ರೀಡೆ ಸಾರ್ವಜನಿಕರ ಗಮನ ಸೆಳೆಯಿತು. ಪುರುಷರ ವಿಭಾಗದ ರಾಜ್ಯಮಟ್ಟದ ಸಂಗ್ರಾಣಿ ಕಲ್ಲು ಎತ್ತುವ ಸ್ಪರ್ಧೆಯಲ್ಲಿ ಕೊಪ್ಪಳ ಜಿಲ್ಲೆಯ ವೀರಾಪುರದ ವೆಂಕೊಬ ಪ್ರಥಮ ಸ್ಥಾನ ಪಡೆದುಕೊಂಡರು.
ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕನಕಗಿರಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯತ್ ಸಹಯೋಗದಲ್ಲಿ ಹಮ್ಮಿಕೊಂಡ ಕನಕಗಿರಿ ಉತ್ಸವದ ಕ್ರೀಡಾಕೂಟಕ್ಕೆ ಸಾರ್ವಜನಿಕರಿಂದ ಹೆಚ್ಚು ಸ್ಪಂಧನೆ ಸಿಗುತ್ತಿದೆ. ಕೊಪ್ಪಳ ಜಿಲ್ಲೆ ಹಾಗೂ ವಿವಿಧ ಜಿಲ್ಲೆಗಳ ಕ್ರೀಡಾಪಟುಗಳು ಸ್ಪರ್ಧೆಗಳಲ್ಲಿ ಭಾಗವಹಿಸಿ ಸ್ಪರ್ಧಿಸುತ್ತಿದ್ದಾರೆ.
ಈ ಕ್ರೀಡಾಕೂಟಕ್ಕೆ ಜಿಲ್ಲೆಯ ಸಾರ್ವಜನಿಕರು ತುಂಬಾ ಉತ್ಸಾದಿಂದ ಪಾಲ್ಗೊಳ್ಳುತ್ತಿದ್ದಾರೆ. ಗ್ರಾಮೀಣ ಹಾಗೂ ದೇಶಿಕ್ರೀಡೆಗಳಿಗೆ ಜನರು ಹೆಚ್ಚು ಮಹತ್ವವನ್ನು ನೀಡುತ್ತಿದ್ದು, ಬಿಸಿಲನ್ನು ಲೆಕ್ಕಿಸದೇ ಕ್ರೀಡಾಪಟುಗಳ ಪ್ರದರ್ಶನವನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ. ಇದರ ಜೊತೆಗೆ ಚಪ್ಪಾಳೆ ಹಾಗೂ ಸಿಳ್ಳು ಹಾಕುವುದರ ಮೂಲಕ ಕ್ರೀಡಾಪಟುಗಳಿಗೆ ಪ್ರೋತ್ಸಾಹ, ಹುರಿದುಂಬಿಸುತ್ತಿರುವುದು ಕಂಡುಬಂದಿತು.
*ಸ್ಪರ್ಧೆಯ ಫಲಿತಾಂಶ:* ಪುರುಷರ ವಿಭಾಗದ ರಾಜ್ಯಮಟ್ಟದ ಸಂಗ್ರಾಣಿ ಕಲ್ಲು ಎತ್ತುವ ಸ್ಪರ್ಧೆಯಲ್ಲಿ ವೀರಾಪುರದ ವೆಂಕೊಬ ಅವರು 88 ಕೆಜಿ ಸಂಗ್ರಾಣಿ ಕಲ್ಲು ಎತ್ತುವ ಮೂಲಕ ಜಯಶಾಲಿಯಾಗಿ ಪ್ರಥಮ ಸ್ಥಾನ ಪಡೆದುಕೊಂಡರು. ಅದೆ ರೀತಿ 81 ಕೆಜಿ ಸಂಗ್ರಾಣಿ ಕಲ್ಲು ಎತ್ತಿದ ಗದಗ ಜಿಲ್ಲೆಯ ನರಗುಂದಿನ ಮುತ್ತುರಡ್ಡಿ ಅವರು ದ್ವಿತೀಯ ಸ್ಥಾನ ಪಡೆದರೆ, 78 ಕೆಜಿ ಸಂಗ್ರಾಣಿ ಕಲ್ಲು ಎತ್ತಿದ ಹಾಲಪ್ಪ ತೃತೀಯ ಸ್ಥಾನ ಪಡೆದುಕೊಂಡರು.

Get real time updates directly on you device, subscribe now.

Comments are closed.

error: Content is protected !!