ಪ್ರತಿಯೊಬ್ಬರು ಕ್ರೀಡಾ ನಿಯಮಗಳಿಗೆ ಬದ್ದರಾಗಿರಬೇಕು: ನಲಿನ್ ಅತುಲ್

Get real time updates directly on you device, subscribe now.

ಪ್ರತಿಯೊಬ್ಬರು ಕ್ರೀಡಾ ನಿಯಮಗಳಿಗೆ ಬದ್ದರಾಗಿರಬೇಕು ಎಂದು ಕೊಪ್ಪಳ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಹೇಳಿದರು.
ಕನಕಗಿರಿ ಉತ್ಸವ-2024ರ ಅಂಗವಾಗಿ ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕನಕಗಿರಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯತ್ ಸಹಯೋಗದಲ್ಲಿ ಬುಧವಾರ ಕನಕಗಿರಿಯ ಕರ್ನಾಟಕ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ಹಮ್ಮಿಕೊಂಡ ಹೊನಲು ಬೆಳಕಿನ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.
ಇಂತಹ ‘ಉತ್ಸವ ಆಚರಣೆ ಪ್ರತಿ ತಾಲ್ಲೂಕಿನಲ್ಲಿ ಆದರೇ ಕ್ರೀಡಾ ಆಸಕ್ತಿ ಹೆಚ್ಚಾಗುತ್ತದೆ. ಕನಕಗಿರಿ ಉತ್ಸವದ ಅಂಗವಾಗಿ ಗ್ರಾಮೀಣ ಹಾಗೂ ದೇಶಿ ಕ್ರೀಡಾ ಚಟುವಟಿಕೆಗಳನ್ನು ನಡೆಸಲಾಗುತ್ತಿದೆ. ಕ್ರೀಡೆಯಲ್ಲಿ ಗೆಲುವು, ಸೋಲು ಸಹಜವಾಗಿದ್ದು, ಪ್ರತಿಯೊಬ್ಬರು ಕ್ರೀಡಾ ನಿಯಮಗಳಿಗೆ ಬದ್ದರಾಗಿರಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ವಂಟಗೋಡಿ ಅವರು ಮಲ್ಲಕಂಬ ಪ್ರದರ್ಶನ ನೀಡಿದ ಅಂದ ಮಕ್ಕಳ ಸಹಾಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ, ಕೊಪ್ಪಳ ಉಪವಿಭಾಗಾಧಿಕಾರಿಗಳಾದ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ವಿಠ್ಠಲ್ ಜಾಬಗೌಡ್ರ, ಕನಕಗಿರಿ ತಹಶೀಲ್ದಾರರಾದ ವಿಶ್ವನಾಥ ಮುರಡಿ, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳಾದ ಚಂದ್ರಶೇಖರ ಕಂದಕೂರ ಸೇರಿದಂತೆ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
*ಯೋಗ ಪ್ರರ್ದಶನ:* ಕನಕಗಿರಿ ಉತ್ಸವ-2024ರ ಅಂಗವಾಗಿ ಮಲ್ಲಕಂಬ ಪ್ರದರ್ಶನಕ್ಕೆ ಆಗಮಿಸಿದ್ದ ಗದಗ ಜಿಲ್ಲೆಯ ರೋಣ ತಾಲ್ಲೂಕಿನ ಹಳೆ ಆಲೂರಿನ ಜ್ಞಾನ ಸಿಂಧು ಅಂದ ಮಕ್ಕಳ ವಸತಿ ಶಾಲೆಯ ವಿಕಲಚೇತನ ಮಕ್ಕಳು ವಿಶೇಷ ಯೋಗ ಪ್ರದರ್ಶನ ಮಾಡಿದರು. ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಇತರ ಅಧಿಕಾರಿಗಳು ಮಕ್ಕಳ ಯೋಗ ಪ್ರದರ್ಶನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
*ಆಹ್ವಾನಿತ ವಿಕಲಚೇತನರ ಕಬಡ್ಡಿ:* ಪ್ರದರ್ಶನ ಪಂದ್ಯಕ್ಕಾಗಿ ಆಗಮಿಸಿದ ಆಹ್ವಾನಿ ಕುಷ್ಟಗಿ ಮತ್ತು ಕನಕಗಿರಿಯ ವಿಕಲಚೇತನರ ಕಬಡ್ಡಿ ಪಂದ್ಯವು ವಿಶೇಷವಾಗಿತ್ತು. ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಇತರ ಅಧಿಕಾರಿಗಳು ಕ್ರೀಡಾಪಟುಗಳ ಪ್ರದರ್ಶನವನ್ನು ವೀಕ್ಷಿಸಿ, ಅಭಿನಂದಿಸಿದರು.
ಇದೆ ವೇಳೆ ಕ್ರೀಡಾಪಟುಗಳಿಗೆ ಅಭಿನಂದನಾ ಪ್ರಮಾಣ ಪತ್ರ, ಪ್ರಶಸ್ತಿಯನ್ನು ವಿತರಣೆ ಮಾಡಲಾಯಿತು.

Get real time updates directly on you device, subscribe now.

Comments are closed.

error: Content is protected !!