ಗಂಗಾವತಿ: ಅತ್ಯಾಚಾರ ಆರೋಪಿಗಳಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಪ್ರಕಟ
ಪ್ರಕರಣದ ತನಿಖೆ ನಡೆಸಿದ್ದ ಅಂದಿನ ತನಿಖಾಧಿಕಾರಿಗಳಾದ ಗಂಗಾವತಿ ಗ್ರಾಮೀಣ ವಲಯದ ಸಿ.ಪಿ.ಐ ಪ್ರಭಾಕರ್ ಧರ್ಮಟ್ಟಿ ಅವರು ತನಿಖೆಯಲ್ಲಿ ಆರೋಪಿತರ ಮೇಲಿನ ಆರೋಪಗಳು ದೃಢಪಟ್ಟಿದ್ದರಿಂದ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.
ನ್ಯಾಯಾಲಯದ ವಿಚಾರಣೆ ವೇಳೆ ಪ್ರಕರಣದ ಸಾಕ್ಷಿದಾರರ ಸಾಕ್ಷö್ಯ ಮತ್ತು ದಾಖಲೆಗಳನ್ನು ಪರಿಶೀಲಿಸಿದ ನ್ಯಾಯಾಧೀಶರು ಆರೋಪಿತರು ತಪ್ಪಿತಸ್ಥರು ಎಂದು ತೀರ್ಪು ನೀಡಿ, ಭಾರತೀಯ ದಂಡ ಸಂಹಿತೆ ಕಲಂ 376(ಡಿ)-ಸಾಮೂಹಿಕ ಅತ್ಯಾಚಾರ ಅಪರಾಧಕ್ಕೆ 20 ವರ್ಷಗಳ ಕಠಿಣ ಕಾರಾಗೃಹ ವಾಸದ ಶಿಕ್ಷೆ ಹಾಗೂ ತಲಾ ರೂ.3 ಲಕ್ಷಗಳಂತೆ ಒಟ್ಟು ರೂ.06 ಲಕ್ಷಗಳನ್ನು ಸಂತ್ರಸ್ತ ಮಹಿಳೆಗೆ ಪರಿಹಾರವಾಗಿ 3 ತಿಂಗಳೊಳಗಾಗಿ ನೀಡುವಂತೆ, ಒಂದು ವೇಳೆ ಪರಿಹಾರವನ್ನು ನೀಡದೇ ಇದ್ದಲ್ಲಿ 5 ವರ್ಷದ ಕಾರಾಗೃಹ ವಾಸದ ಶಿಕ್ಷೆ ಅನುಭವಿಸುವಂತೆ ಆದೇಶಿಸಿ ಫೆ.26 ರಂದು ತೀರ್ಪು ನೀಡಿದ್ದಾರೆ.
ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರಾಗಿ ನಾಗಲಕ್ಷಿö್ಮÃ ಎಸ್. ಅವರು ವಾದ ಮಂಡಿಸಿದ್ದರು. ಗಂಗಾವತಿ ಗ್ರಾಮೀಣ ಠಾಣೆಯ ಪೊಲೀಸ್ ಸಿಬ್ಬಂದಿಯಾದ ವೆಂಕಟೇಶ ಮತ್ತು ಬಸವರಾಜ ಅವರು ಪ್ರಕರಣದ ವಿಚಾರಣೆ ಸಮಯದಲ್ಲಿ ಸಾಕ್ಷಿಗಳನ್ನು ಸಮಯಕ್ಕೆ ಸರಿಯಾಗಿ ಹಾಜರುಪಡಿಸಿ ಸಹಕಾರ ನೀಡಿದ್ದಾರೆ ಎಂದು ಗಂಗಾವತಿಯ 1ನೇ ಸರ್ಕಾರಿ ಅಭಿಯೋಜಕರ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.
Comments are closed.