ಕನಕಗಿರಿ ಉತ್ಸವ: ಆಕರ್ಷಕ ಮಲ್ಲಕಂಬ ಪ್ರದರ್ಶನ
: ಕನಕಗಿರಿ ಉತ್ಸವ-2024ರ ಅಂಗವಾಗಿ ಕನಕಗಿರಿಯ ಕರ್ನಾಟಕ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ಬುಧವಾರ ಗದಗ ಜಿಲ್ಲೆಯ ರೋಣ ತಾಲ್ಲೂಕಿನ ಹಳೆ ಆಲೂರಿನ
ಜ್ಞಾನ ಸಿಂಧು ಅಂದ ಮಕ್ಕಳ ವಸತಿ ಶಾಲೆಯ ವಿಕಲಚೇತನ ಮಕ್ಕಳು ಆಕರ್ಷಕ ಮಲ್ಲಕಂಬ ಪ್ರದರ್ಶನ ಮಾಡಿದರು.
ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ವಂಟಗೋಡಿ ಅವರು ಮಲ್ಲಕಂಬ ಪ್ರದರ್ಶನ ನೀಡಿದ ಅಂದ ಮಕ್ಕಳ ಸಹಾಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ, ಅಭಿನಂದಿಸಿದರು.
ಈ ಸಂದರ್ಭದಲ್ಲಿ ಕೊಪ್ಪಳ ಉಪವಿಭಾಗಾಧಿಕಾರಿಗಳಾದ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ವಿಠ್ಠಲ್ ಜಾಬಗೌಡ್ರ, ಕನಕಗಿರಿ ತಹಶೀಲ್ದಾರರಾದ ವಿಶ್ವನಾಥ ಮುರಡಿ, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳಾದ ಚಂದ್ರಶೇಖರ ಕಂದಕೂರ ಸೇರಿದಂತೆ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಯುವಕರು ಸಾರ್ವಜನಿಕರು ಅತ್ಯಂತ ಉತ್ಸಾಹದಿಂದ ಮಲ್ಲಕಂಬ ಪ್ರದರ್ಶನ ವೀಕ್ಷಿಸಿ, ಮಕ್ಕಳಿಗೆ ಪ್ರೋತ್ಸಾಹಿಸಿದರು.
Comments are closed.