ಹಣ್ಣು ಮತ್ತು ಜೇನು ಪ್ರದರ್ಶನ, ಮಾರಾಟ ಮೇಳ: ಹೆಸರು ನೋಂದಣಿಗೆ ಸೂಚನೆ
ಕೊಪ್ಪಳ ತೋಟಗಾರಿಕೆ ಇಲಾಖೆ ವತಿಯಿಂದ ಶಿವರಾತ್ರಿ ಪ್ರಯುಕ್ತ ಮಾರ್ಚ್ 06 ರಿಂದ 09 ರವರೆಗೆ ಹಣ್ಣು ಮತ್ತ ಜೇನು ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಆಯೋಜಿಸಲಾಗಿದ್ದು, ಮೇಳದಲ್ಲಿ ಭಾಗವಹಿಸಲು ಆಸಕ್ತ ರೈತರು ಹೆಸರು ನೋಂದಾಯಿಸುವAತೆ ತೋಟಗಾರಿಕೆ ಉಪನಿರ್ದೇಶಕರಾದ ಕೃಷ್ಣ ಉಕ್ಕುಂದ ಅವರು ತಿಳಿಸಿದ್ದಾರೆ.ಮೊದಲು ಬಂದವರಿಗೆ ಆದ್ಯತೆ ನೀಡಲಾಗುವುದು, ಆಸಕ್ತ ರೈತರು ತಮ್ಮ ಪಹಣಿ ಪ್ರತಿಯೊಂದಿಗೆ, ತಮ್ಮ ಹೆಸರು, ವಿಳಾಸ, ಸರ್ವೆ ನಂಬರ್, ಬೆಳೆ, ತಳಿಗಳು ಹಾಗೂ ವಿಸ್ತೀರ್ಣ ಮುಂತಾದ ವಿವರಗಳೊಂದಿಗೆ ಹೆಸರು ನೋಂದಣಿ ಮಾಡಿಕೊಳ್ಳಬೇಕು.
ಹೆಸರು ನೋಂದಣಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಕೇಂದ್ರ ಸ್ಥಾನಿಕ ಸಹಾಯಕರು, ತೋಟಗಾರಿಕೆ ಉಪನಿರ್ದೇಶಕರ ಕಛೇರಿ (ಜಿಪಂ) ಕೊಪ್ಪಳ. ಮೊ:9741057047, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ), ಕೊಪ್ಪಳ ಮೊ:9448511649, ಗಂಗಾವತಿ ಮೊ:9448910277, ಕುಷ್ಟಗಿ ಮೊ:8861697989 ಹಾಗೂ ಯಲಬುರ್ಗಾ ಮೊ:9945644338 ಇವರನ್ನು ಸಂಪರ್ಕಿಸಿ ತಮ್ಮ ಉತ್ಪನ್ನಗಳಿಗೆ ಯೋಗ್ಯ ಬೆಲೆ ದೊರೆಯಲು ಹಾಗೂ ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡಲು ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.
Comments are closed.