10 ತಿಂಗಳ ತೋಟಗಾರಿಕೆ ತರಬೇತಿಗಾಗಿ ಅರ್ಜಿ ಆಹ್ವಾನ
: 2024-25 ನೇ ಸಾಲಿಗೆ ಕೊಪ್ಪಳ ಜಿಲ್ಲೆಯ ಆಸಕ್ತ ಅರ್ಹ ರೈತ ಮಕ್ಕಳಿಗೆ ಕೊಪ್ಪಳ ತಾಲ್ಲೂಕಿನ ಮುನಿರಾಬಾದಿನ ತೋಟಗಾರಿಕೆ ತರಬೇತಿ ಕೇಂದçದಲ್ಲಿ 10 ತಿಂಗಳ ತೋಟಗಾರಿಕೆ ತರಬೇತಿಯನ್ನು ನೀಡಲಾಗುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ತರಬೇತಿಯು 2024ರ ಮೇ 02 ರಿಂದ 2025 ರ ಫೆಬ್ರವರಿ 28 ರವರೆಗೆ 10 ತಿಂಗಳುಗಳ ಕಾಲ ನಡೆಯಲಿದೆ. ಅಭ್ಯರ್ಥಿ ಆಯ್ಕೆಗೆ ಸಾಮಾನ್ಯ ಅಭ್ಯರ್ಥಿ-16, ಪರಿಶಿಷ್ಠ ಜಾತಿ–03 ಮತ್ತು ಪರಿಶಿಷ್ಟ ಪಂಗಡ-01 ರಂತೆ ಒಟ್ಟು 20 ಅಭ್ಯರ್ಥಿಗಳ ಗುರಿ ನಿಗದಿಪಡಿಸಲಾಗಿದೆ. ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡ ಮತ್ತು ಅಂಗವಿಕಲರಿಗೆ ಕನಿಷ್ಠ 18 ವರ್ಷ, ಗರಿಷ್ಠ 33 ವರ್ಷ, ಮಾಜಿ ಸೈನಿಕರಿಗೆ 33 ರಿಂದ ಗರಿಷ್ಟ 65 ವರ್ಷ ಹಾಗೂ ಇತರರಿಗೆ ಕನಿಷ್ಠ 18 ವರ್ಷ, ಗರಿಷ್ಠ 30 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಅಭ್ಯರ್ಥಿಗಳು ಕನ್ನಡ ವಿಷಯಗಳೊಂದಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು, ಅಭ್ಯರ್ಥಿಯು ಚೆನ್ನಾಗಿ ಕನ್ನಡ ಓದುವುದು, ಬರೆಯುವುದು ಮತ್ತು ಮಾತನಾಡುವುದನ್ನು ಬಲ್ಲವರಾಗಿರಬೇಕು. ಈ ತರಬೇತಿಯು ರೈತರ ಮಕ್ಕಳಿಗಾಗಿ ಇರುವುದರಿಂದ ಅಭ್ಯರ್ಥಿಯು ತಂದೆ/ತಾಯಿ ಅಥವಾ ಪೋಷಕರು (ತಂದೆ/ತಾಯಿ ಇಲ್ಲದ ಪಕ್ಷದಲ್ಲಿ) ಕಡ್ಡಾಯವಾಗಿ ಜಮೀನು ಹೊಂದಿರಬೇಕು ಹಾಗೂ ಸ್ವಂತ ಸಾಗುವಳಿ ಮಾಡುತ್ತಿರಬೇಕು. ಈ ಬಗ್ಗೆ ಪಹಣಿಯನ್ನು ನೀಡುವುದು ಕಡ್ಡಾಯವಾಗಿರುತ್ತದೆ. ಅಭ್ಯರ್ಥಿಗಳು ತೋಟದ ಕೆಲಸಗಳನ್ನು ಮಾಡುವಷ್ಟು ದೃಢಕಾಯರಾಗಿರಬೇಕು.
ಅರ್ಜಿ ಸಲ್ಲಿಸಲು ಸಾಮಾನ್ಯ ಆಭ್ಯರ್ಥಿಗಳಿಗೆ ರೂ.30, ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡದವರಿಗೆ ರೂ.15 ಶುಲ್ಕವನ್ನು ಪೋಸ್ಟಲ್ ಆರ್ಡರ್ ಅಥವಾ ಡಿಮ್ಯಾಂಡ್ ಡ್ರಾಫ್ಟ್ ಮೂಲಕ ತೋಟಗಾರಿಕೆ ಉಪನಿರ್ದೇಶಕರು(ಜಿ.ಪಂ) ಕೊಪ್ಪಳ ರವರ ಹೆಸರಿನಲ್ಲಿ ಪಡೆದು ಅರ್ಜಿ ಜೊತೆಗೆ ಲಗತ್ತಿಸಬೇಕು. ಅರ್ಜಿಗಳನ್ನು ಮಾರ್ಚ್ 01 ರಿಂದ 30 ರವರೆಗೆ ತೋಟಗಾರಿಕೆ ಉಪನಿರ್ದೇಶಕರು(ಜಿ.ಪಂ) ಕೊಪ್ಪಳ, ಸಹಾಯಕ ನಿರ್ದೇಶಕರು(ರಾವ) ಕೊಪ್ಪಳ ರವರ ಕಚೇರಿಯಲ್ಲಿ ಪಡೆಯಬಹುದು ಅಥವಾ ಇಲಾಖಾ ವೆಬ್‌ಸೈಟ್ www.horticulture.kar.nic.in ಮುಖಾಂತರ ಡೌನ್‌ಲೋಡ್ ಮಾಡಿಕೊಳ್ಳಬಹುದು. ಅರ್ಜಿಗಳನ್ನು ಸ್ವೀಕರಿಸಲು ಏಪ್ರಿಲ್ 01 ಕೊನೆಯ ದಿನವಾಗಿದ್ದು, ಅಂದು ಸಂಜೆ 05.30 ರ ಒಳಗಾಗಿ ತೋಟಗಾರಿಕೆ ಉಪನಿರ್ದೇಶಕರು (ಜಿ.ಪಂ.) ಕೊಪ್ಪಳ ಅಥವಾ ಸಹಾಯಕ ತೋಟಗಾರಿಕೆ ನಿರ್ದೇಶಕರು (ರಾವ) ಕೊಪ್ಪಳ ರವರ ಕಛೇರಿಗೆ ಸಲ್ಲಿಸಬೇಕು.
ಏಪ್ರಿಲ್ 06 ರಂದು ಬೆಳಿಗ್ಗೆ 10 ಗಂಟೆಗೆ ತೋಟಗಾರಿಕೆ ಉಪನಿರ್ದೇಶಕರು, ಕೊಪ್ಪಳ ಕಚೇರಿಯಲ್ಲಿ ಸಂದರ್ಶನ ನಡೆಯಲಿದ್ದು, ಎಲ್ಲ ಮೂಲ ದಾಖಲಾತಿಗಳೊಂದಿಗೆ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬೇಕು. ಪ್ರತ್ಯೇಕ ಸಂದರ್ಶನ ಪತ್ರವನ್ನು ಕಳುಹಿಸಲಾಗುವುದಿಲ್ಲ ಎಂದು ತೋಟಗಾರಿಕೆ ಉಪನಿರ್ದೇಶಕರಾದ ಕೃಷ್ಣ ಉಕ್ಕುಂದ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments are closed.