ವಿ.ಮನೋಹರ ಪ್ರಸಾದ್ & ರಾಮಮನಗೂಳಿ ಅವರ ನಿಧನಕ್ಕೆ ಕೆಯುಡಬ್ಲ್ಯೂಜೆ ಸಂತಾಪ
ಬೆಂಗಳೂರು:
ಹಿರಿಯ ಪತ್ರಕರ್ತರಾದ ಬಾಗಲಕೋಟೆಯ ರಾಮಮನಗೂಳಿ ಮತ್ತು ಮಂಗಳೂರಿನ ವಿ.ಮನೋಹರ ಪ್ರಸಾದ್ ನಿಧನಕ್ಕೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ತೀವ್ರ ಸಂತಾಪ ವ್ಯಕ್ತಪಡಿಸಿದೆ.
ರಾಮಮನಗೂಳಿ:
ಬಾಗಲಕೋಟ ಸಂಯುಕ್ತ ಕರ್ನಾಟಕ ಬ್ಯೂರೋ ಮುಖ್ಯಸ್ಥರಾಗಿಯೂ ಸೇವೆ ಸಲ್ಲಿಸಿದ್ದ, ಹಿರಿಯ ಪತ್ರಕರ್ತ ಬಾಗಲಕೋಟೆಯ ರಾಮಮನಗೂಳಿ (62)
ಕೆಯುಡಬ್ಲ್ಯೂಜೆ ರಾಜ್ಯ ಉಪಾಧ್ಯಕ್ಷರಾಗಿ, ಬಾಗಲಕೋಟ ಸಂಘದ ಅಧ್ಯಕ್ಷರಾಗಿ ಸಲ್ಲಿಸಿದ ಸೇವೆ ಅನನ್ಯವಾದದ್ದು. 2002 ರಲ್ಲಿ ಬಾಗಲಕೋಟೆಯಲ್ಲಿ ಸಂಘಟಿಸಿದ್ದ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನ ರಾಮಮನಗೂಳಿ ಅವರ ಕ್ರೀಯಾಶೀಲತೆಗೆ ಸಾಕ್ಷಿಯಾಗಿತ್ತು ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಸ್ಮರಿಸಿದ್ದಾರೆ.
ವಿ.ಮನೋಹರ ಪ್ರಸಾದ್:
ಉದಯವಾಣಿಯಲ್ಲಿ 36 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಹಿರಿಯ ಪತ್ರಕರ್ತ ವಿ.ಮನೋಹರ ಪ್ರಸಾದ್ (65)
ನಿಧನಕ್ಕೆ ಕೆಯುಡಬ್ಲ್ಯೂಜೆ ಕಂಬನಿ ಮಿಡಿದಿದೆ.
ಕವಿಯಾಗಿ, ಕಂಚಿನ ಕಂಠಸಿರಿಯ ಜನಪ್ರಿಯ ನಿರೂಪಕರಾಗಿ ಗಮನ ಸೆಳೆದಿದ್ದ ಅವರು, ಕ್ರಿಯಾಶೀಲ ವ್ಯಕ್ತಿತ್ವದವರು. ಜನವರಿಯಲ್ಲಿ ಮಂಗಳೂರಿನಲ್ಲಿ ನಡೆದ ಜಿಲ್ಲಾ ಪತ್ರಕರ್ತರ ಸಮ್ಮೇಳನ ಮತ್ತು ಕ್ರಿಕೆಟ್ ಟೂರ್ನಿಯ ಕಾರ್ಯಕ್ರಮದಲ್ಲಿಯೂ ಲವಲವಿಕೆಯಿಂದ ಭಾಗವಹಿಸಿದ್ದ ನೆನಪು ಮರೆಯುವಂತಿಲ್ಲ ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಸ್ಮರಿಸಿದ್ದಾರೆ.
ಹಿರಿಯ ಪತ್ರಕರ್ತರಾಗಿದ್ದ ವಿ.ಮನೋಹರ ಪ್ರಸಾದ್ ಮತ್ತು ರಾಮಮನಗೂಳಿ ಅವರುಗಳ
ಆತ್ಮಕ್ಕೆ ಶಾಂತಿ ಸಿಗಲಿ. ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಅವರು ಪ್ರಾರ್ಥಿಸಿದ್ದಾರೆ.
Comments are closed.