ಮಾ.06 ರಿಂದ ಜೇನು ಮತ್ತು ಹಣ್ಣುಗಳ ಮೇಳ ಆರಂಭ

Get real time updates directly on you device, subscribe now.

ಕೊಪ್ಪಳ, ಕೊಪ್ಪಳ ತೋಟಗಾರಿಕೆ ಇಲಾಖೆ(ಜಿ.ಪಂ) ವತಿಯಿಂದ ಮಹಾ ಶಿವರಾತ್ರಿಯ ಪ್ರಯುಕ್ತ ಕೊಪ್ಪಳ ಜಿಲ್ಲೆಯ ದ್ರಾಕ್ಷಿ, ದಾಳಿಂಬೆ, ಪೇರಲ, ಅಂಜೂರ, ಕಲ್ಲಂಗಡಿ, ಕರಬೂಜ, ಬಾಳೆ, ಪಪ್ಪಾಯ, ಅಣಬೆ ಮತ್ತು ಜೇನು ಪ್ರದರ್ಶನ ಹಾಗೂ ಮಾರಾಟ ಮೇಳ-2024 (ರೈತರಿಂದ ನೇರ ಗ್ರಾಹಕರಿಗೆ)ವನ್ನು ಮಾರ್ಚ್ 06 ರಿಂದ 09 ರವರೆಗೆ ನಗರದ ತೋಟಗಾರಿಕೆ ಉಪನಿರ್ದೇಶಕರ ಕಚೇರಿ ಆವರಣದಲ್ಲಿ ಆಯೋಜಿಸಲಾಗಿದೆ.
ಅಂದು ಬೆಳಿಗ್ಗೆ 10.30 ಗಂಟೆಗೆ ಜೇನು ಮತ್ತು ಹಣ್ಣುಗಳ ಮೇಳವನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್. ತಂಗಡಗಿ ಅವರು ಉದ್ಘಾಟಿಸುವರು. ತೋಟಗಾರಿಕೆ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ, ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ ಮತ್ತು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ಶಾಸಕರಾದ ಬಸವರಾಜ ರಾಯರಡ್ಡಿ ಅವರು ಘನ ಉಪಸ್ಥಿತಿ ವಹಿಸುವರು. ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಸಮಾರಂಭದ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಸಂಸದರಾದ ಕರಡಿ ಸಂಗಣ್ಣ, ಗಂಗಾವತಿ ಶಾಸಕರಾದ ಗಾಲಿ ಜನಾರ್ಧನರೆಡ್ಡಿ, ವಿಧಾನ ಪರಿಷತ್ ಸದಸ್ಯರುಗಳಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ್ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ ಪಾಲ್ಗೊಳ್ಳುವರು.
ವಿಶೇಷ ಆಹ್ವಾನಿತರಾಗಿ ಕೃಷ್ಣಭಾಗ್ಯ ಜಲ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಕೆ.ಪಿ.ಮೋಹನರಾಜ, ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಡಾ.ಶಮ್ಲಾ ಇಕ್ಬಾಲ್, ಬೆಂಗಳೂರು ಲಾಲ್‌ಬಾಗ್‌ನ ತೋಟಗಾರಿಕೆ ನಿರ್ದೇಶಕರಾದ ರಮೇಶ ಡಿ.ಎಸ್., ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಯಶೋಧಾ ಸುನೀಲ್ ವಂಟಗೋಡಿ, ಲಾಲ್‌ಬಾಗ್‌ನ ಹಣ್ಣುಗಳ ವಿಭಾಗದ ತೋಟಗಾರಿಕೆ ಅಪರ ನಿರ್ದೇಶಕರು ಹಾಗೂ ಜಿಲ್ಲಾ ನೋಡಲ್ ಅಧಿಕಾರಿಗಳಾದ ಕೆ.ಬಿ.ದುಂಡಿ, ಕಲಬುರಗಿ ವಿಭಾಗದ ವಿಭಾಗೀಯ ತೋಟಗಾರಿಕೆ ಜಂಟಿ ನಿರ್ದೇಶಕರಾದ ಮಂಜುನಾಥ ನಾರಾಯಣಪುರ, ಮುನಿರಾಬಾದ ತೋಟಗಾರಿಕೆ ಮಹಾವಿದ್ಯಾಲಯದ ಡೀನ್ ಡಾ.ಎನ್.ತಮ್ಮಯ್ಯ, ಕೊಪ್ಪಳ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ವಿಸ್ತರಣಾ ಮುಂದಾಳು ಡಾ.ಎಂ.ವಿ.ರವಿ, ಜಿಲ್ಲಾ ಹಾಪ್‌ಕಾಮ್ಸ್ ಅಧ್ಯಕ್ಷರಾದ ಯಂಕಣ್ಣ ಯರಾಶಿ, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷರಾದ ಶಿವಣ್ಣ ಮೂಲಿಮನಿ ಆಗಮಿಸುವರು. ಜಿಲ್ಲೆಯ ಅಭಿನವಶ್ರೀ ತೋಟಗಾರಿಕೆ ರೈತ ಉತ್ಪಾದಕರ ಸಂಸ್ಥೆಯ ಅಧ್ಯಕ್ಷರಾದ ಶಿವರಾಮಪ್ಪ ಗಬ್ಬೂರ, ಬೇವೂರನ ಯಲಬುರ್ಗಾ ತೋಟಗಾರಿಕೆ ರೈತ ಉತ್ಪಾದಕರ ಸಂಸ್ಥೆಯ ಅಧ್ಯಕ್ಷರಾದ ಮಲ್ಲನಗೌಡ ಕೋನನಗೌಡ್ರ, ಕುಷ್ಟಗಿಯ ಕಪಿಲತೀರ್ಥ ತೋಟಗಾರಿಕೆ ರೈತ ಉತ್ಪಾದಕರ ಸಂಸ್ಥೆ ಅಧ್ಯಕ್ಷರಾದ ಶರಣಗೌಡ ಪಾಟೀಲ್, ತಾವರಗೇರಾ ಅಮೃತ ವರ್ಷಿಣಿ ರೈತ ಉತ್ಪಾದಕರ ಸಂಸ್ಥೆ ಅಧ್ಯಕ್ಷರಾದ ಸಂತೋಷ ಸರನಾಡಗೌಡ್ರ, ಕುಕನೂರು ಗಂಧ ತೋಟಗಾರಿಕೆ ರೈತ ಉತ್ಪಾದಕ ಸಂಸ್ಥೆಯ ಅಧ್ಯಕ್ಷರಾದ ರಮೇಶ ಬಳೂಟಗಿ, ಹಿರೇಸಿಂಧೋಗಿಯ ಕಾಯಕ ಕೃಷಿ ಮಿತ್ರ ತೋಟಗಾರಿಕೆ ರೈತ ಉತ್ಪಾದಕರ ಸಂಸ್ಥೆಯ ಅಧ್ಯಕ್ಷರಾದ ಕೊಟ್ರೇಶ ಗುಡ್ಲಾನೂರು, ದಮ್ಮೂರು ರೈತನ ಬೆಳಕು ರೈತ ಉತ್ಪಾದಕರ ಸಂಸ್ಥೆಯ ಅಧ್ಯಕ್ಷರಾದ ರಸೂಲ್‌ಸಾಬ್ ದನ್ನೂರ, ಕೊಪ್ಪಳ ರೈತ ಜಾಗೃತಿ ರೈತ ಉತ್ಪಾದಕರ ಸಂಸ್ಥೆಯ ಅಧ್ಯಕ್ಷರಾದ ರಾಹುಲ್ ರೆಡ್ಡಿ, ಕನಕಗಿರಿಯ ರೈತ ಜೀವ ತೋಟಗಾರಿಕೆ ರೈತ ಉತ್ಪಾದಕರ ಸಂಸ್ಥೆಯ ಅಧ್ಯಕ್ಷರಾದ ಶರಣೇಗೌಡ, ಕನಕಗಿರಿ ತಪಸ್ಸು ರೈತ ಉತ್ಪಾದಕರ ಸಂಸ್ಥೆಯ ಅಧ್ಯಕ್ಷರಾದ ಅಶೋಕ ಜಾಡಿ, ಕುಷ್ಟಗಿಯ ಸ್ನೇಹಿತರು ರೈತ ಉತ್ಪಾದಕ ಸಂಸ್ಥೆಯ ಅಧ್ಯಕ್ಷರಾದ ಬಸನಗೌಡ ಪಾಟೀಲ ಅವರು ಉಪಸ್ಥಿತರಿರುವರು ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕರಾದ ಕೃಷ್ಣ ಸಿ. ಉಕ್ಕುಂದ ಹಾಗೂ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರಾದ ಜೆ.ಶಂಕರಪ್ಪ ಅವರು ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!
%d bloggers like this: