ಆನೆಗೊಂದಿ ಉತ್ಸವ : ಸಾಂಸ್ಕೃತಿಕ ಕಾರ್ಯಕ್ರಮಕ್ಕೆಹೆಸರು ನೋಂದಾಯಿಸಲು ಮಾ.7 ಕೊನೆಯ ದಿನ
: ಮಾರ್ಚ 11 ಮತ್ತು ಮಾರ್ಚ 12ರಂದು ನಡೆಯಲಿರುವ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಆನೆಗೊಂದಿ ಉತ್ಸವದ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸುವ ಕೊಪ್ಪಳ ಜಿಲ್ಲಾ ವ್ಯಾಪ್ತಿಯ ಆಸಕ್ತ ಕಲಾವಿದರು, ಕಲಾತಂಡಗಳು ತಮ್ಮ ಸ್ವ ವಿವರಗಳು, ಕಲಾವಿದರು ಕಲಾತಂಡದ ಕಲಾ ಪ್ರದರ್ಶನದ ವಿವರಗಳನ್ನೊಳಗೊಂಡ ದಾಖಲೆಗಳು ಹಾಗೂ ಆಧಾರ್ ಕಾರ್ಡನೊಂದಿಗೆ 07ನೇ ಮಾರ್ಚ 2024ರ ಸಂಜೆ 06 ಗಂಟೆಯೊಳಗೆ ಅರ್ಜಿಗಳನ್ನು ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾಡಳಿತ ಭವನ, ಕೊಪ್ಪಳ ಇವರ ಕಚೇರಿಗೆ ಸಲ್ಲಿಸಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೊಟ್ರೇಶ ಮಾರಬನಳ್ಳಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.