ಆನೆಗೊಂದಿ ಉತ್ಸವದ ಲಾಂಛನ ಬಿಡುಗಡೆಯೊಂದಿಗೆ ಉತ್ಸವಕ್ಕೆ ವಿದ್ಯುಕ್ತ ಚಾಲನೆ

Get real time updates directly on you device, subscribe now.

ಆನೆಗೊಂದಿ ಉತ್ಸವಕ್ಕೆ ಸಹಕರಿಸಿ: ಶಿವರಾಜ ತಂಗಡಗಿ

: ಮಾರ್ಚ 11 ಮತ್ತು ಮಾರ್ಚ 12ರಂದು ನಿಗದಿಪಡಿಸಿದ ಐತಿಹಾಸಿಕ ಆನೆಗೊಂದಿ ಉತ್ಸವದ ಸಿದ್ಧತೆಗೆ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸೂಚಿಸಲಾಗಿದ್ದು ಸಾರ್ವಜನಿಕರು ಸಹ ಉತ್ಸವದ ಯಶಸ್ಸಿಗೆ ಸಹಕರಿಸಬೇಕು ಎಂದು ಸಚಿವರಾದ ಶಿವರಾಜ ತಂಗಡಗಿ ಹೇಳಿದರು.
ಮಾರ್ಚ 05ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿದರು.
ಕನಕಗಿರಿ ಉತ್ಸವದ ಸಿದ್ಧತೆ ನಡೆಸಿದ 18 ತಂಡಗಳೇ ಇಲ್ಲಿ ಕೂಡ ಕಾರ್ಯನಿರ್ವಹಿಸಲಿವೆ. ಕನಕಗಿರಿ ಉತ್ಸವವನ್ನು ಯಶಸ್ವಿಗೊಳಿಸಿದಂತೆ ಜನ ಮೆಚ್ಚುವ ಹಾಗೆ ಆನೆಗೊಂದಿ ಉತ್ಸವವನ್ನು ಸಹ ನಡೆಸಲಾಗುವುದು. ಗಂಗಾವತಿ ವಿಧಾನಸಭಾ ಕ್ಷೇತ್ರದ ಶಾಸಕರಿಗೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಶಾಸಕರಾದ ಜನಾರ್ಧನ ರೆಡ್ಡಿ, ಜಿಪಂ ಸಿಇಓ ರಾಹುಲ್ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ, ಅಪರ ಜಿಲ್ಲಾಧಿಕಾರಿ ಸಾವಿತ್ರಿ ಕಡಿ, ಸಹಾಯಕ ಆಯುಕ್ತರಾದ ಕ್ಯಾಪ್ಟನ್ ಮಹೇಶ ಮಾಲಗಿತ್ತಿ ಸೇರಿದಂತೆ ಇತರರು ಇದ್ದರು.

ವಿಜಯನಗರ ಸಾಮ್ರಾಜ್ಯದ ತೊಟ್ಟಿಲು ಆನೆಗೊಂದಿ ಉತ್ಸವ-2024ರ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್ ತಂಗಡಗಿ ಅವರು ಮಾರ್ಚ್ 5ರಂದು ಲೋಗೋ ಬಿಡುಗಡೆ ಮೂಲಕ ಆನೆಗೊಂದಿ ಉತ್ಸವಕ್ಕೆ ವಿದುಕ್ತವಾಗಿ ಚಾಲನೆ ನೀಡಿದರು.
ಇದೇ ಮಾರ್ಚ್ 11 ಮತ್ತು 12ರಂದು ವಿಜಯನಗರ ಸಾಮ್ರಾಜ್ಯದ ಗತವೈಭವ ಸಾರುವ ಆನೆಗೊಂದಿ ಉತ್ಸವ-2024ರ ಆಚರಿಸಲು ನಿರ್ಧರಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಗಣದಲ್ಲಿ ಮಂಗಳವಾರ ಉತ್ಸವದ ಲೋಗೋ ಬಿಡುಗಡೆ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಗಂಗಾವತಿ ಶಾಸಕರಾದ ಜಿ.ಜನಾರ್ಧನ ರೆಡ್ಡಿ, ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಯಶೋಧ ವಂಟಗೊಡಿ, ಅಪರ ಜಿಲ್ಲಾಧಿಕಾಗಳಾದ ಸಾವಿತ್ರಿ ಬಿ ಕಡಿ, ಕೊಪ್ಪಳ ಉಪವಿಭಾಗಾಧಿಕಾರಿಗಳಾದ ಕ್ಯಾಪ್ಟನ್ ಮಹೇಶ ಮಾಲಗಿತ್ತಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Get real time updates directly on you device, subscribe now.

Comments are closed.

error: Content is protected !!