ಕುಡಿಯುವ ನೀರಿಗಾಗಿ ಕಾಲುವೆಗೆ ನೀರು ಹರಿಸಲು ನಿರ್ಧಾರ

Get real time updates directly on you device, subscribe now.

: ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷರಾದ ಶಿವರಾಜ ಎಸ್.ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ನಡೆದ 2023-24ನೇ ಸಾಲಿನ 121ನೇ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ನಿರ್ಧರಿಸಿದಂತೆ ತುಂಗಭದ್ರಾ ಜಲಾಶಯದಲ್ಲಿ ಕುಡಿಯುವ ನೀರಿಗಾಗಿ ಲಭ್ಯವಿರುವ ನೀರಿನ ಪ್ರಮಾಣಕ್ಕೆ ಅನುಗುಣವಾಗಿ ಕಾಲುವೆಗಳಿಗೆ ನೀರು ಹರಿಸಲು ನಿರ್ಧರಿಸಲಾಗಿದೆ.
ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಗೆ ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಗಳಿಗೆ ಗಣೇಕಲ್ ಜಲಾಶಯ ಹಾಗೂ ಇತರೆ ಕೆರೆ ಕಟ್ಟೆಗಳಿಗೆ ಮಾರ್ಚ್ 05 ರಿಂದ ಮಾ.16 ರವರೆಗೆ 1200 ಕ್ಯೂಸೆಕ್ಸ್ನಂತೆ ಕುಡಿಯುವ ನೀರು ಹರಿಸಲಾಗುವುದು.
ತುಂಗಭದ್ರಾ ಜಲಾಶಯದಲ್ಲಿ ಲಭ್ಯವಿರುವ ನೀರನ್ನು ಕುಡಿಯುವ ನೀರಿನ ಸಮಸ್ಯೆಯನ್ನು ನೀಗಿಸಲು ಅನುವಾಗುವಂತೆ ಕಾಲುವೆಗಳಿಗೆ ಕುಡಿಯುವ ನೀರಿನ ಸಲುವಾಗಿ ಮಾತ್ರ ಹರಿಸಲಾಗುತ್ತಿದ್ದು, ಪ್ರಸಕ್ತ ವರ್ಷ ಜಲಾಶಯದಲ್ಲಿ ನೀರಿನ ಸಂಗ್ರಹಣೆ ಸಾಮರ್ಥ್ಯ ಕಡಿಮೆ ಇರುವುದರಿಂದ ರೈತ ಬಾಂಧವರು ಕಾಲುವೆಯ ಅಂಚಿನಲ್ಲಿ ಓಡಾಡುವುದು, ಕಾಲುವೆಯಿಂದ ನೀರನ್ನು ಬಳಸುವುದನ್ನು ಮತ್ತು ಎತ್ತಿಕೊಳ್ಳುವುದನ್ನು ನಿಷೇಧಗೊಳಿಸಲಾಗಿರುತ್ತದೆ. ಕಾರಣ ರೈತ ಬಾಂಧವರು ಸಮರ್ಪಕ ನೀರು ನಿರ್ವಹಣೆಗೆ ಇಲಾಖೆಯೊಡನೆ ಸಹಕರಿಸಬೇಕು ಎಂದು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿಗಳು ಹಾಗೂ ತುಂಗಭದ್ರಾ ಯೋಜನಾ ವೃತ್ತ ಮುನಿರಾಬಾದ ಹಾಗೂ ತುಂಗಭದ್ರಾ ಯೋಜನೆಯ ಅಧೀಕ್ಷಕ ಅಭಿಯಂತರರಾದ ಎಲ್.ಬಸವರಾಜ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

Get real time updates directly on you device, subscribe now.

Comments are closed.

error: Content is protected !!