ಮಾರ್ಚ್ 10 ರಂದು ಕೊಪ್ಪಳ , ಭಾಗ್ಯನಗರ, ಕಿನ್ನಾಳ , ಗಿಣಿಗೇರಾ ವಿವಿಧ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ
ಕೊಪ್ಪಳ ಜೆಸ್ಕಾಂ ಕಾರ್ಯ ಮತ್ತು ಪಾಲನೆ ಉಪ ವಿಭಾಗದ ವ್ಯಾಪ್ತಿಯ ಹಾಗೂ ಕೊಪ್ಪಳ ನಗರದಲ್ಲಿ ಮಾರ್ಚ್ 10 ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಕಾಮಗಾರಿ ಕೆಲಸವು ಬೇಗನೆ ಮುಕ್ತಾಯಗೊಂಡಲ್ಲಿ, ಯಾವುದೇ ಸಮಯದಲ್ಲಿ ವಿದ್ಯುತ್ ಸರಬರಾಜು ಮಾಡಲಾಗುವುದು. ಆದ್ದರಿಂದ ಸಾರ್ವಜನಿಕರು ಯಾವುದೇ ತರಹದ ವಿದ್ಯುತ್ ದುರಸ್ತಿ ಕೆಲಸ-ಕಾರ್ಯಗಳನ್ನು ಮಾಡಬಾರದು. ಒಂದು ವೇಳೆ ವಿದ್ಯುತ್ ಅಪಘಾತ ಸಂಭವಿಸಿದಲ್ಲಿ ಕಂಪನಿಯು ಜವಾಬ್ದಾರರಾಗಿರುವುದಿಲ್ಲ ಎಂದು ಕೊಪ್ಪಳ ಜೆಸ್ಕಾಂ ಕಾರ್ಯ ಮತ್ತು ಪಾಲನೆ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಎ.ಆರ್.ಸಲೀಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.