ವಿಶ್ವ ಶ್ರವಣ ದಿನ ಕಾರ್ಯಕ್ರಮ ಆಚರಣೆ

Get real time updates directly on you device, subscribe now.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ನಗರದ ಹಳೇ ಜಿಲ್ಲಾ ಆಸ್ಪತ್ರೆ ಆವರಣದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗುರುವಾರದಂದು ವಿಶ್ವ ಶ್ರವಣ ದಿನ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ  ಡಾ|| ಲಿಂಗರಾಜು ಟಿ ಅವರು, ಸರಕಾರದ ವಿವಿಧ ಯೋಜನೆಗಳನ್ನು ಸಾರ್ವಜನಿಕರಿಗೆ ಮುಟ್ಟಿಸುವುದು ನಮ್ಮ ಜವಾಬ್ದಾರಿಯಾಗಿದೆ. ಪ್ರತಿ ವರ್ಷ ಮಾರ್ಚ್-03 ರಂದು “ವಿಶ್ವ ಶ್ರವಣ ದಿನ” ಕಾರ್ಯಕ್ರಮ ಆಚರಿಸಲಾಗುತ್ತದೆ. ಶ್ರವಣದೋಷ ಮತ್ತು ಕಿವುಡುತನ ತಡೆಗಟ್ಟುವಿಕೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ. “ಮನಸ್ಥಿತಿಗಳನ್ನು ಬದಲಾಯಿಸುವುದು. ಎಲ್ಲರಿಗೂ ಶ್ರವಣ ಮತ್ತು ಶ್ರವಣ ಆರೈಕೆ ಸೇವೆಗಳನ್ನು ಸಾಫಲ್ಯಗೊಳಿಸೋಣ” ಎಂಬ ಘೋಷವಾಕ್ಯದೊಂದಿಗೆ ಈ ವರ್ಷ ಅರಿವು ಮೂಡಿಸುವ ಕಾರ್ಯಕ್ರಮ ಆಚರಿಸಲಾಗುತ್ತಿದೆ ಎಂದು ಹೇಳಿದರು.
ಕಿವಿಯು ಪ್ರತಿಯೊಬ್ಬ ಮನುಷ್ಯನ ಪಂಚೇAದ್ರಿಯಗಳಲ್ಲಿ ಪ್ರಮುಖ ಅಂಗವಾಗಿದ್ದು, ಅದನ್ನು ಪ್ರತಿಯೊಬ್ಬರೂ ತಮ್ಮ ಜೀವನದುದ್ದಕ್ಕೂ ರಕ್ಷಣೆ ಮಾಡಿಕೊಳ್ಳಬೇಕು. ಕಿವಿಯಲ್ಲಿ ಕಡ್ಡಿ ಹಾಕಬಾರದು, ಎಣ್ಣೆ ಹಾಕಬಾರದು, ರಸ್ತೆಯಲ್ಲಿ ಗುಗ್ಗೆ ತೆಗೆಯುವವರ ಹತ್ತಿರ ಗುಗ್ಗೆ ತೆಗೆಸಿಕೊಳ್ಳಬಾರದು. ವೈದ್ಯರ ಸಲಹೆ ಇಲ್ಲದೆ ಕಿವಿಯಲ್ಲಿ ಏನೂ ಹಾಕಬಾರದು ಮತ್ತು ಕಲುಷಿತ ನೀರಿನಲ್ಲಿ ಈಜಬಾರದು ಎಂದು ತಿಳಿಸಿದರು. ಕಿವಿನೋವು ಅಥವಾ ಸೋರುವಿಕೆ ಕಂಡುಬAದರೆ ತಮ್ಮ ಸಮೀಪದ ತಾಲೂಕಾ/ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ, ಕಿವಿ, ಮೂಗು, ಗಂಟಲು ತಜ್ಞರನ್ನು ಸಂಪರ್ಕಿಸಬೇಕು ಹಾಗೂ 14 ವರ್ಷದೊಳಗಿನ ಮಕ್ಕಳಿಗೆ ಶ್ರವಣ ಸಾಧನಗಳ ಅವಶ್ಯವಿದ್ದರೆ ಜಿಲ್ಲಾ ಆಸ್ಪತ್ರೆಗಳಲ್ಲಿ ಉಚಿತವಾಗಿ ನೀಡಲಾಗುವುದು ಎಂದು ಕ್ಷೇತ್ರಮಟ್ಟದ ಸಿಬ್ಬಂದಿಗಳಾದ ಆಶಾ/ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳಿಗೆ ತಿಳಿಸಿದರು.
ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ|| ರವೀಂದ್ರನಾಥ್ ಎಂ.ಹೆಚ್ ಅವರು ಮಾತನಾಡಿ, ನಮ್ಮ ಕಿವಿಗಳನ್ನು ರಕ್ಷಿಸಿಕೊಳ್ಳಬೇಕು. ಎಲ್ಲರಿಗೂ ಶ್ರವಣ ಸೇವೆಗಳು ಸಿಗುವ ಬಗ್ಗೆ ಮಾಹಿತಿ ನೀಡಬೇಕು. ಈ ವರ್ಷ ನಮ್ಮ ಕೊಪ್ಪಳ ಜಿಲ್ಲೆಯಲ್ಲಿ ಈ ಕಾರ್ಯಕ್ರಮದಡಿಯಲ್ಲಿ ಪ್ರಾಯೋಗಿಕ ಯೋಜನೆಯಡಿಯಲ್ಲಿ ಜಿಲ್ಲೆಯ ವಿವಿಧ ತಾಲೂಕಾ ಆಸ್ಪತ್ರೆ ಹಾಗೂ ಸ.ಆ.ಕೇಂದ್ರಗಳಲ್ಲಿ ಆಯ್ದ 10 ಆರೋಗ್ಯ ಸಂಸ್ಥೆಗಳಲ್ಲಿ ಉಚಿತ ಕಿವಿ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಂಡು, ದೋಷವಿರುವವರಿಗೆ ಚಿಕಿತ್ಸೆ ನೀಡಿ, ಯಶಸ್ವಿಗೊಳಿಸಲಾಗಿದೆ. ಕಾರ್ಯಕ್ರಮ ಕುರಿತು ಸಾರ್ವಜನಿಕರಿಗೆ ವ್ಯಾಪಕ ಪ್ರಚಾರಕ್ಕಾಗಿ, ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣಗಳಲ್ಲಿ ರೇಡಿಯೋ ಜಿಂಗಲ್ಸ್, ಹೋರ್ಡಿಂಗ್ಸ್, ಜಾನಪದ ಕಲಾತಂಡಗಳಿAದ ಬೀದಿ ನಾಟಕ ಪ್ರದರ್ಶನ, ಗೋಡೆಬರಹ, ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಏರ್ಪಡಿಸುವುದರ ಮೂಲಕ ಜಿಲ್ಲೆಯಾದ್ಯಂತ ಜಾಗೃತಿ ಅರಿವು ಮೂಡಿಸಲಾಗಿರುತ್ತದೆ ಹಾಗೂ ಕುಟುಂಬ ಕಲ್ಯಾಣ ಕಾರ್ಯಕ್ರಮ ಕುರಿತು, ಕುಟುಂಬ ಕಲ್ಯಾಣ ಯೋಜನೆಗಳಾದ ತಾತ್ಕಾಲಿಕ ಹಾಗೂ ಶಾಶ್ವತ ಹೊಸ ಹೊಸ ವಿಧಾನಗಳನ್ನು ಅಳವಡಿಸಿಕೊಂಡು, ಒಂದು ಮಗುವಿನಿಂದ ಇನ್ನೊಂದು ಮಗುವಿಗೆ ಅಂತರ ಕಾಪಾಡುವ ಬಗ್ಗೆ, ಗರ್ಭ ಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ತಂತ್ರವಿಧಾನಗಳ ಕಾಯ್ದೆ 1994ರ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವಂತೆ, ಕ್ಷೇತ್ರ ಸಿಬ್ಬಂದಿಯವರಿಗೆ ತಿಳಿಸಿದರು. ಜಿಲ್ಲಾ ಭೋಧಕ ಆಸ್ಪತ್ರೆಯ ಕಿವಿ, ಮೂಗು, ಗಂಟಲು ತಜ್ಞರಾದ ಡಾ|| ಅವಿನಾಶ ಮಾತನಾಡಿ, ರಾಷ್ಟಿçÃಯ ಶ್ರವಣದೋಷ ನಿವಾರಣಾ ಮತ್ತು ನಿಯಂತ್ರಣ ಕಾರ್ಯಕ್ರಮ ಕುರಿತು, ನವಜಾತ ಶಿಶುವಿನ ಕಿವಿಯ ಆರೈಕೆ ಮತ್ತು ಕಾರ್ಯಕ್ರಮದಡಿಯಲ್ಲಿ ಸಿಗುವ ಸೇವಾ ಸೌಲಭ್ಯಗಳು ಮತ್ತು ಶಸ್ತçಚಿಕಿತ್ಸೆ ಕುರಿತು ವಿವರವಾಗಿ ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳಾದ ಡಾ||ಪ್ರಕಾಶ ವಿ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳಾದ ಡಾ|| ನಂದಕುಮಾರ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿಗಳಾದ ಡಾ|| ಶಶಿಧರ ಎ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳಾದ ಡಾ|| ವೆಂಕಟೇಶ, ತಾಲೂಕಾ ಆರೋಗ್ಯಾಧಿಕಾರಿಗಳಾದ ಡಾ||ರಾಮಾಂಜನೇಯ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ||ಮಹೇಶ ಉಮಚಗಿ, ಆಡಿಯೋಲಾಜಿಸ್ಟ್ ಕು|| ಬಿಂದು, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ವ್ಹಿ.ಪಿ,  ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳು, ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು ಹಾಗೂ ಇತರೆ ಸಿಬ್ಬಂದಿಗಳು, ಆಶಾ/ಅಂಗನವಾಡಿ ಕಾರ್ಯಕರ್ತೆಯರು, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳ ತರಬೇತಿ ಕೇಂದ್ರದ ತರಬೇತಿದಾರರು, ಸಾರ್ವಜನಿಕರು ಭಾಗವಹಿಸಿ, ಯಶಸ್ವಿಗೊಳಿಸಿದರು.

Get real time updates directly on you device, subscribe now.

Comments are closed.

error: Content is protected !!