ಮಹಿಳಾ ದಿನಾಚರಣೆ,ಜ್ಯೋತಿ ಸಂಜೀವಿನಿ ಕಾರ್ಡ ವಿತರಣೆ ಹಾಗೂ ಶೈಕ್ಷಣಿಕ ಕಾರ್ಯಗಾರ

Get real time updates directly on you device, subscribe now.

ಕೊಪ್ಪಳ: ನಗರದ ಎಂ.ಪಿ.ಪ್ಯಾಲೇಸ್ ಕಲ್ಯಾಣ ಮಂಟಪದಲ್ಲಿ ಮಾರ್ಚ ೯ ರ ಶನಿವಾರ ಬೆ|ಳಗ್ಗೆ.೧೦.೩೦ಕ್ಕೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕ ಘಟಕದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ,ಜ್ಯೋತಿ ಸಂಜೀವಿನಿ ಸ್ಮಾರ್ಟ ಕಾರ್ಡ ವಿತರಣೆ ಹಾಗೂ ಶೈಕ್ಷಣಿಕ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಅಭಿನವ ಗವಿದ್ದೇಶ್ವರ ಮಹಾಸ್ವಾಮಿಗಳು ವಹಿಸುವರು.

ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಕ|ಆರ್ಯಕ್ರಮವನ್ನು ಉದ್ಘಾಟಿಸುವರು.ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕ ಅಧ್ಯಕ್ಷರಾದ ಹೊಳಿಬಸಯ್ಯಾ ಅಧ್ಯಕ್ಷತೆಯನ್ನು ವಹಿಸುವರು.ಸರಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷರಾದ ನಾಗರಾಜ ಜುಮ್ಮಣ್ಣನ್ನವರ ಆಶಯ ನುಡಿಯನ್ನು ವ್ಯಕ್ತಪಡಿಸುವರು.ಸಂಸದರಾದ ಸಂಗಣ್ಣ ಕರಡಿ,ವಿಧಾನ ಪರಿಷತ್ತಿನ ಸದಸ್ಯರಾದ ಹೇಮಲತಾ ನಾಯಕ ಘನ ಉಪಸ್ಥಿತಿ.ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾದ್ಯಕ್ಷರಾದ ಕೆ.ನಾಗೇಶ,ಕಾರ್ಯದರ್ಶಿ ಚಂದ್ರಶೇಖರ ನೂಗ್ಲಿ,ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷರಾದ ಸುರೇಶ ಸಜ್ಜನ ವಿಶೇಷ ಆಹ್ವಾನಿತರು.ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೇಯ,ಪೋಲಿಸ್ ವರಿಷ್ಠಾಧಿಕಾರಿಗಳಾದ ಯಶೋಧ ವಂಟಗೋಡಿ,ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಕಡಿ,ಡಿಡಿಪಿಐ ಶ್ರೀಶೈಲ ಬಿರಾದರ,ತಹಶೀಲ್ದಾರಾದ ವಿಠ್ಠಲ್ ಚೌಗಲೆ,ತಾಲೂಕ ಪಂಚಾಯತ ಇಓ ದುಂಡಪ್ಪ ತುರಾದಿ,ಡಿವಾಯಪಿಎಸ್ ಉಮೇಶ ಪೂಜಾರ,ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ,ಸರಕಾರಿ ನೌಕರರ ಸಂಘದ ಕಾರ್ಯದರ್ಶಿ ಶಂಕರಗೌಡ,ಕಾರ್ಯಾಧ್ಯಕ್ಷರಾದ ಶಿವಪ್ಪ ಜೋಗಿ ಸೇರಿದಂತೆ ಅನೇಕರು ಭಾಗವಹಿಸುವರು.

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಹುಚ್ಚಮ್ಮ ಚೌದ್ರಿ ಹಾಗೂ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷರಾದ ಸುರೇಶ ಸಜ್ಜನ ಅವರನ್ನು ಸನ್ಮಾನಿಸಲಾಗುತ್ತದೆ.

ಸಾಹಿತಿಗಳಾದ ಸಾವಿತ್ರಿ ಮುಜಮದಾರ ವಿಶೇಷ ಉಪನ್ಯಾಸ ನೀಡುವರು ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕ ಪ್ರಧಾನ ಕಾರ್ಯದರ್ಶಿ ಭಾಳಪ್ಪ ಕಾಳೆ  ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!