ಆನೆಗೊಂದಿ ಉತ್ಸವ: ಅಂತಿಮ ಹಂತದ ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿಗಳು

Get real time updates directly on you device, subscribe now.

: ಮಾರ್ಚ್ 11 ಮತ್ತು 12ರಂದು ನಡೆಯಲಿರುವ ವಿಜಯನಗರ ಸಾಮ್ರಾಜ್ಯದ ತೊಟ್ಟಿಲು ಆನೆಗೊಂದಿ ಉತ್ಸವದ ಅಂತಿಮ ಹಂತದ ಸಿದ್ಧತೆಗಳನ್ನು ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಮಾರ್ಚ್ 10ರಂದು ಪರಿಶೀಲಿಸಿದರು.
ಜಿಲ್ಲಾಧಿಕಾರಿಗಳು, ಆನೆಗೊಂದಿಯ ಗಗನ್ ಮಹಲ್ ಹತ್ತಿರದಲ್ಲಿ ನಿರ್ಮಿಸಲಾದ ಶಬರಿ ವೇದಿಕೆ ಹಾಗೂ ಆನೆಗೊಂದಿಯ ತಳವಾರಘಟ್ಟ ರಸ್ತೆಯಲ್ಲಿನ ಶ್ರೀರಂಗದೇವರಾಯಲು ವೇದಿಕೆ, ಮಾಧ್ಯಮ ಗ್ಯಾಲರಿ, ಗಣ್ಯರು, ಸಾರ್ವಜನಿಕರಿಗೆ ಕೂಡುವ ಆಸನಗಳ ವ್ಯವಸ್ಥೆ, ಕುಡಿಯುವ ನೀರು, ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಸೇರಿದಂತೆ ಇನ್ನಿತರ ಸಿದ್ಧತೆಗಳ ವೀಕ್ಷಣೆ ಮಾಡಿದರು.
ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಉಪವಿಭಾಗಾಧಿಕಾರಿಗಳಾದ ಕ್ಯಾಪ್ಟನ್ ಮಹೇಶ ಮಾಲಗಿತ್ತಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Get real time updates directly on you device, subscribe now.

Comments are closed.

error: Content is protected !!