ಆನೆಗೊಂದಿಯ ಗತ ವೈಭವಕ್ಕೆ ಸಾಕ್ಷಿಯಾದ ಭವ್ಯ ಮೆರವಣಿಗೆ

Get real time updates directly on you device, subscribe now.

  • ಆನೆಗೊಂದಿ ಉತ್ಸವದಲ್ಲಿ ಗತಕಾಲದ ಸಂಸ್ಕೃತಿ, ಪರಂಪರೆಯ ಮೆಲುಕು
    *ಮೆರವಣಿಗೆಯ ಮೆರಗು ಹೆಚ್ಚಿಸಿದ ಅಂಬಾರಿ

* ವಿಜ್ರಂಭಣೆಯ ಮೆರವಣಿಗೆಗೆ ಗಂಗಾವತಿ ಶಾಸಕರಿಂದ ಚಾಲನೆ

ಐತಿಹಾಸಿಕ ವಿಶ್ವವಿಖ್ಯಾತ ವಿಜಯನಗರ ಸಾಮ್ರಾಜ್ಯದ ತೊಟ್ಟಿಲು ಆನೆಗೊಂದಿ ಉತ್ಸವ-2024ರ ಅಂಗವಾಗಿ ಶ್ರೀ ಆದಿಶಕ್ತಿ ದುರ್ಗಾದೇವಿ ದೇವಸ್ಥಾನದಿಂದ ಗಗನ್ ಮಹಲ್‌ವರೆಗೆ ಮಾರ್ಚ್ 11ರಂದು ಭವ್ಯ ಮೆರವಣಿಗೆ ನಡೆಯಿತು.
ಗಂಗಾವತಿ ಶಾಸಕರಾದ ಜಿ.ಜನಾರ್ಧನ ರೆಡ್ಡಿ ಅವರು ಅಂಬಾರಿಯಲ್ಲಿನ ಶ್ರೀ ಆದಿಶಕ್ತಿ ದುರ್ಗಾದೇವಿ ಮೂರ್ತಿಗೆ ಪುಷ್ಪಾರ್ಪಣೆ ಮಾಡುವ
ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. ಮೆರವಣಿಗೆಯು ಆನೆಗೊಂದಿಯ ಗತಕಾಲದ ಸಂಸ್ಕೃತಿ, ಪರಂಪರೆಯ ಮೆಲುಕು ಹಾಕುವ ರೀತಿಯಲ್ಲಿ ವಿಜ್ರಂಭಣೆಯಿಂದ ನಡೆಯಿತು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಯಶೋಧಾ ವಂಟಗೋಡಿ, ಕೊಪ್ಪಳ ಉಪವಿಭಾಗಾಧಿಕಾರಿಗಳಾದ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಉತ್ಸವದ ಮೆರವಣಿಗೆ ಸಮಿತಿ ಅಧ್ಯಕ್ಷರು ಆಗಿರುವ ಜಂಟಿ ಕೃಷಿ ನಿರ್ದೇಶಕರಾದ ರುದ್ರೇಶಪ್ಪ ಟಿ.ಎಸ್., ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಕೊಟ್ರೇಶ ಮರಬನಹಳ್ಳಿ ಗಂಗಾವತಿ ತಹಶೀಲ್ದಾರರಾದ ಯು.ನಾಗರಾಜ, ತಾಲ್ಲೂಕು ಪಂಚಾಯತ್ ಇಓ ಲಕ್ಷ್ಮೀ ದೇವಿ ಸೇರಿದಂತೆ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಗಮನ ಸೆಳೆದ ಕೋಲಾಟ ಪ್ರದರ್ಶನ: ಆನೆಗೊಂದಿ ಉತ್ಸವದ ಮೆರವಣಿಗೆಯಲ್ಲಿ ಆಕರ್ಷಕ ಕೋಲಾಟ ಪ್ರದರ್ಶನ ನಡೆಯಿತು. ಶಾಸಕರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಸಿಇಓ ಹಾಗೂ ಇತರ ಅಧಿಕಾರಿಗಳು ಕೋಲಾಟ ಆಡುವುದರ ಮೂಲಕ ಸಾರ್ವಜನಿಕರ ಗಮನ ಸೆಳೆದರು.
ಮೆರವಣಿಗೆಯ ಮೆರಗು ಹೆಚ್ಚಿಸಿದ ಆನೆ ಅಂಬಾರಿ: ಆನೆಗೊಂದಿ ಉತ್ಸವದ ಮೆರವಣಿಗೆಯಲ್ಲಿ ಶ್ರೀ ಆದಿಶಕ್ತಿ ದುರ್ಗಾದೇವಿ ಮೂರ್ತಿಯನ್ನು ಹೊತ್ತ ಅಂಬಾರಿಯು ಮೆರವಣಿಗೆಯ ಮೆರಗನ್ನು ಹೆಚ್ಚಿಸಿತು. ಅಂಬಾರಿಯನ್ನು ಹೊತ್ತ ಆನೆಯ ಹೆಸರು ಲಕ್ಷ್ಮೀ. ಈ ಆನೆಯು ಪಕ್ಕದ ವಿಜಯನಗರ ಜಿಲ್ಲೆಯ ಹಂಪಿ ವಿರೂಪಾಕ್ಷೇಶ್ವರ ಸನ್ನಿಧಿಗೆ ಸೇರಿದ್ದು, ಇತ್ತೀಚೆಗೆ ನಡೆದ ಕನಕಗಿರಿ ಉತ್ಸವವದಲ್ಲಿಯೂ ಪಾಲ್ಗೊಂಡು ಗಮನ ಸೆಳೆದಿತ್ತು. ಈಗ ಮತ್ತೆ ಆನೆಗೊಂದಿ ಉತ್ಸವಕ್ಕಾಗಿ ನಮ್ಮ ಕೊಪ್ಪಳ ಜಿಲ್ಲೆಗೆ ಆಗಮಿಸಿದ್ದು ವಿಶೇಷವಾಗಿದೆ.
ವಿವಿಧ ಕಲಾ ಪ್ರಕಾರಗಳ ಪ್ರದರ್ಶನ ಆಕರ್ಷಣೀಯ: ಆನೆಗೊಂದಿಯ ಉತ್ಸವದ ಮೆರವಣಿಗೆಯಲ್ಲಿ ಡೊಳ್ಳು ಕುಣಿತ, ನಂದಿ ಧ್ವಜ ಸಮಾಳ ವಾದನ, ಕಹಳೆ ವಾದನ, ಕರಡಿ ಮಜಲು, ಹಲಗೆ ವಾದನ, ಮಹಿಳಾ ವೀರಗಾಸೆ, ಗೊರವರ ಕುಣಿತ, ಪೂಜಾ ಕುಣಿತ, ಜಗ್ಗಲಿಗೆ, ಮಹಿಳಾ ಡೊಳ್ಳು ಕುಣಿತ, ಹಗಲುವೇಷ, ಮೋಜಿನಗೊಂಬೆ, ಮಹಿಳಾ ತಮಟೆ ವಾದನ, ಕೀಲುಕುದುರೆ, ನಾಸಿಕ್ ಡೊಲ್, ನಗಾರಿ, ಗಾರುಡಿ ಗೊಂಬೆ, ಸೋಮನ ಕುಣಿತ, ಕಂಸಾಳೆ, ಲಂಬಾಣಿ ನೃತ್ಯ, ಹುಲಿವೇಷ, ಕೋಳಿ ನೃತ್ಯ, ಬೇಡರ ಪಡೆ, ಡ್ರಮ್ ವಾದನ, ಮಹಿಳಾ ಡೊಳ್ಳು, ಮಹಿಳಾ ಕೋಲಾಟ, ಮರಗಾಲು, ಹಗಲುವೇಷ, ಚಿಲಿಪಿಲಿಗೊಂಬೆ, ಪಟ ಕುಣಿತ, ವೀರಗಾಸೆ, ಚಂಡೆ ವಾದನ, ಕರಡಿ ಮಜಲು, ಯಕ್ಷಗಾನ ಕುಣಿತ, ಮೋಜಿನ ಗೊಂಬೆ, ಲೇಜಿಮ್ ನೃತ್ಯ ಹಾಗೂ ಇತರ ಕಲೆಗಳ ಪ್ರದರ್ಶನವು ಆಕರ್ಷಣೀಯವಾಗಿತ್ತು.


Get real time updates directly on you device, subscribe now.

Comments are closed.

error: Content is protected !!