ಪೌರತ್ವ ತಿದ್ದುಪಡಿ ಕಾಯಿದೆ (ಸಿಎಎ)ರದ್ದತಿ. ಸಂವಿಧಾನ ವಿರೋಧಿ ಹೇಳಿಕೆ ನೀಡುತ್ತಿರುವ ಅನಂತ್ ಕುಮಾರ್ ವಿರುದ್ಧ ಪ್ರಕರಣ ದಾಖಲಿಸಲು ಆಗ್ರಹ
.
ಕೊಪ್ಪಳ: ತಾರತಮ್ಯದಿಂದ ಕೂಡಿರುವ ಪೌರತ್ವ ತಿದ್ದುಪಡಿ ಕಾಯಿದೆ (ಸಿಎಎ)ರದ್ದತಿ. ಸಂವಿಧಾನ ವಿರೋಧಿ ಹೇಳಿಕೆ ನೀಡುತ್ತಿರುವ ಅನಂತ್ ಕುಮಾರ್ ವಿರುದ್ಧ ಪ್ರಕರಣ ದಾಖಲಿಸಲು ಆಗ್ರಹಿಸಿ ಪ್ರಗತಿ ಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ವಿವಿಧ ಸಂಘಟನೆಗಳಿಂದ ಕೊಪ್ಪಳ ಜಿಲ್ಲಾಧಿಕಾರಿಗಳ ಅನುಪಸ್ಥಿತಿಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಶ್ರೀಮತಿ ಸಾವಿತ್ರಿ ಡಿ. ಕಡಿ ಅವರ ಮುಖಾಂತರ
ರಾಷ್ಟ್ರಪತಿಗಳಿಗೆ ಗುರುವಾರ ಮನವಿ ಪತ್ರ ಸಲ್ಲಿಸಲಾಯಿತು.
ಮನವಿಯಲ್ಲಿ ಭಾರತ ದೇಶದಲ್ಲಿ ಜಾರಿ ಮಾಡಿರುವ ಪೌರತ್ವ ತಿದ್ದುಪಡಿ ಕಾಯಿದೆ (ಸಿಎಎ) ಯಿಂದ ಕಾನೂನು ಎದುರು ಎಲ್ಲರೂ ಸಮಾನರು ಎಂಬ ಕಲಂ 14ರ ಉಲ್ಲಂಘನೆಯಾಗಿದೆ. ಭಾರತೀಯ ಅಂತರಾಷ್ಟ್ರೀಯ ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ವಿಶ್ವ ಸಂಸ್ಥೆಯ ಪ್ರಧಾನ ಆಯುಕ್ತರ ಕಚೇರಿಯ ವಕ್ತಾರರು ತಿಳಿಸಿದ್ದಾರೆ. ಧಾರ್ಮಿಕ ಸ್ವಾತಂತ್ರ್ಯಕ್ಕೆ ಗೌರವ ಹಾಗೂ ಎಲ್ಲಾ ಸಮುದಾಯಗಳಿಗೆ ಸಮಾನ ಹಕ್ಕುಗಳು ನೆಲದ ಕಾನೂನು ಅಡಿಯಲ್ಲಿ ದೊರಕಬೇಕು. ಇದನ್ನು ಪ್ರಜಾಪ್ರಭುತ್ವದ ಭೌಗೋಳಿಕವಾದ ಮೂಲಭೂತ ಸಿದ್ಧಾಂತಗಳಲ್ಲಿ ಪ್ರತಿಪಾದನೆಯಾಗಿದೆ. ಪೌರತ್ವ ತಿದ್ದುಪಡಿ ಕಾಯಿದೆ ಜಾರಿಗೆ ಮುಂಚೆ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು. ಎಲ್ಲರೂ ಒಳಗೊಂಡಂತೆ ಪೌರತ್ವ ಜಾರಿಗೆ ತರಲು ಒತ್ತಾಯಿಸುತ್ತೇವೆ.
ಬಿಜೆಪಿಯ ಸಂಸದ ಅನಂತ್ ಕುಮಾರ್ ಹೆಗಡೆ ಅವರು ಈ ಹಿಂದೆ ಕೊಪ್ಪಳ ಜಿಲ್ಲೆಯ ಕುಕನೂರ ನಗರದಲ್ಲಿ ನಾವು ಬಂದಿದ್ದೇ ಸಂವಿಧಾನ ಬದಲಾಯಿಸಲು. ಯಾರೂ ತಡೆಯಲು ಸಾಧ್ಯವಿಲ್ಲ ಎಂದು ಅಹಂಕಾರದಿಂದ ಹೇಳಿದ್ದರು. ಆಗ ಲೋಕಸಭೆಯಲ್ಲಿ ಸಾಕಷ್ಟು ಚರ್ಚೆಗಳಾಗಿತ್ತು. ಅದೇ ರೀತಿ ಮೊನ್ನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹಿಲ್ಲೂರು ಗ್ರಾಮದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ ಸಂವಿಧಾನ ಬದಲಾಯಿಸಲು ಈ ಬಾರಿ 400 ಸಂಸದರು ಆಯ್ಕೆ ಮಾಡಿ ಎಂದು ಕರೆ ನೀಡಿರುವುದು ಸಂವಿಧಾನ ಮತ್ತು ದೇಶ ವಿರೋಧಿಯಾಗಿದೆ ಅಲ್ಲದೆ ಮಾಧ್ಯಮದವರನ್ನು ಅವಹೇಳನಕಾರಿಯಾಗಿ ಮಾತನಾಡಿದ್ದು. ಇವರ ಹೇಳಿಕೆಗಳಿಂದ ಸಮಾಜದಲ್ಲಿ ಸಾಮರಸ್ಯ ಕದಡಿ ಕೋಮುಗಲಭೆಗೆ ಕಾರಣವಾಗುತ್ತದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಪ್ರಗತಿಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಅಖಿಲ ಭಾರತ ಕಾರ್ಮಿಕ ಸಂಘಟನೆಗಳ ಒಕ್ಕೂಟದ ಜಿಲ್ಲಾ ಅಧ್ಯಕ್ಷ ಬಸವರಾಜ್ ಶೀಲವಂತರ್. ಜನಪರ ಸಂಘಟನೆಗಳ ಒಕ್ಕೂಟದ ಜಿಲ್ಲಾ ಸಂಚಾಲಕ ಎಸ್.ಎ.ಗಫಾರ್. ಬೀದಿ ಬದಿ ವ್ಯಾಪಾರಸ್ಥರ ಸಂಘದ ತಾಲೂಕಾ ಅಧ್ಯಕ್ಷ ಆನಂದ ಅರಕೇರಿ. ಕರ್ನಾಟಕ ರೈತ ಸಂಘ (ಎ.ಐ.ಕೆ.ಕೆ.ಎಸ್.) ರಾಜ್ಯ ಅಧ್ಯಕ್ಷ ಡಿ.ಹೆಚ್. ಪೂಜಾರ್. ಜಿಲ್ಲಾ ಕಾರ್ಯದರ್ಶಿ ಬಸವರಾಜ್ ನರೇಗಲ್. ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದ ಜಿಲ್ಲಾ ಸಂಘಟನಾ ಸಂಚಾಲಕ ತುಕಾರಾಮ್ ಬಿ. ಪಾತ್ರೋಟಿ. ಪ್ರಸಾದ್ ಕಾಳೆ. ಕರ್ನಾಟಕ ದಲಿತ ಸಂಘರ್ಷ ಸಮಿತಿ (ಸಂಯೋಜಕ) ಜಿಲ್ಲಾ ಸಂಯೋಜಕ ಮುದಿಯಪ್ಪ ಹೊಸಮನಿ. ಭೀಮ್ ಆರ್ಮಿ ಜಿಲ್ಲಾ ಅಧ್ಯಕ್ಷ ನಿಂಗು ಜಿ.ಎಸ್. ಬೆಣಕಲ್ ಮುಂತಾದವರು ಆಗ್ರಹಿಸಿದ್ದಾರೆ.
Comments are closed.