ಜಿಲ್ಲಾ ವಿಶ್ವಕರ್ಮ ಸಮಾಜದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Get real time updates directly on you device, subscribe now.

ಗಂಗಾವತಿ: ಕೊಪ್ಪಳ ಜಿಲ್ಲಾ ವಿಶ್ವಕರ್ಮ ಸಮಾಜಕ್ಕೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಆಯ್ಕೆಯಾಗಿರುವ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಭಾನುವಾರ ನಗರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ವಿಶ್ವಕರ್ಮ ಸಮಾಜದ ಅಧ್ಯಕ್ಷ ನಾಗೇಶ ಕುಮಾರ ಕಂಸಾಲ ತಿಳಿಸಿದ್ದಾರೆ.
ಭಾನುವಾರ ಬೆಳಗ್ಗೆ ಹನ್ನೊಂದು ಗಂಟೆಗೆ ಹೊಸಳ್ಳಿ ರಸ್ತೆಯಲ್ಲಿರುವ ಮೌನೇಶ್ವರ ನಗರದ ಗಾಯತ್ರಿ ವಿಶ್ವಕರ್ಮ ಮೌನೇಶ್ವರ ದೇವಸ್ಥಾನದ ಆವರಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ವಿಶ್ವಕರ್ಮ ಸಮಾಜದ ಜಿಲ್ಲಾ ಘಟಕಕ್ಕೆ ಆಯ್ಕೆಯಾದ ಅಧ್ಯಕ್ಷ ಪದಾಧಿಕಾರಿಗಳು ಪದಗ್ರಹಣ ಮಾಡಲಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಕಾರ್ಯಕ್ರಮ ಉದ್ಘಾಟಿಸುವರು, ಜಿಲ್ಲಾ ವಿಶ್ವಕರ್ಮ ಸಮಾಜದ ಅಧ್ಯಕ್ಷ ನಾಗೇಶ ಕುಮಾರ ಅಧ್ಯಕ್ಷತೆ ವಹಿಸುವರು, ಮಾಜಿ ಸಂಸದ ಹೆಚ್.ಜಿ. ರಾಮುಲು, ಸಂಸದ ಕರಡಿ ಸಂಗಣ್ಣ, ಶಾಸಕ ಜಿ. ಜನಾರ್ದನರೆಡ್ಡಿ ಭಾಗಿಯಾಗಲಿದ್ದಾರೆ.
ಮಾಜಿ ಸಚಿವರಾದ ಇಕ್ಬಾಲ್ ಅನ್ಸಾರಿ, ಮಲ್ಲಿಕಾರ್ಜುನ ನಾಗಪ್ಪ, ಮಾಜಿ ಶಾಸಕ ಪರಣ್ಣ ಮುನವಳ್ಳಿ, ಶ್ರೀಮತಿ ಲಲಿತಾರಾಣಿ ರಂಗದೇವರಾಯಲು, ನಗರಸಭಾ ಸದಸ್ಯ ಎಫ್. ರಾಘವೇಂದ್ರ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ನಾಗೇಶ ಕುಮಾರ ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!