ಭಾಗ್ಯನಗರ: ಕನ್ನಡ ಭಾಷೆ ನಾಮಫಲಕಗಳ ಅಳವಡಿಕೆಗೆ ಸೂಚನೆ

Get real time updates directly on you device, subscribe now.

ಭಾಗ್ಯನಗರ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ವಾಣಿಜ್ಯ ಮಳಿಗೆಗಳಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆ ನಾಮಫಲಕಗಳನ್ನು ಬಳಸಬೇಕು.
ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕ – 2024ರ ಪ್ರಕಾರ ಭಾಗ್ಯನಗರ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವಾಣಿಜ್ಯ ಮಳಿಗೆಗಳ ಮೇಲೆ ಪ್ರದರ್ಶಿಸುವ ನಾಮಫಲಕಗಳಲ್ಲಿ ಕನ್ನಡ ಭಾಷೆಯು ಶೇ.60 ರಷ್ಟಿರಬೇಕು ಹಾಗೂ ಕನ್ನಡ ಭಾಷೆಯು ನಾಮಫಲಕದ ಮೇಲ್ಭಾಗದಲ್ಲಿರಬೇಕು. ಮಾಲೀಕರು ದಪ್ಪ ಅಕ್ಷರದಲ್ಲಿ ಕಾಣುವಂತೆ ಕನ್ನಡ ಶಬ್ದಗಳನ್ನು ಬಳಸಿ ಫಲಕವನ್ನು ಪ್ರದರ್ಶಿಸುವುದು ಕಡ್ಡಾಯವಾಗಿದೆ. ಈ ನಿಯಮ ಉಲ್ಲಂಘಿಸಿದ್ದು ಕಂಡು ಬಂದರೆ ಉದ್ಯಮ ಪರವಾನಿಗೆಯನ್ನು ರದ್ದುಪಡಿಸಿ ನಿಯಮಾನುಸಾರ ಕ್ರಮಕೈಗೊಳ್ಳಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಕಚೇರಿ ಸಮಯದಲ್ಲಿ ಪಟ್ಟಣ ಪಂಚಾಯತ ಕಾರ್ಯಾಲಯವನ್ನು ಸಂಪರ್ಕಿಸಬಹುದು ಎಂದು ಭಾಗ್ಯನಗರ ಪಟ್ಟಣ ಪಂಚಾಯತ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!